ಸಾಯಿ ವೆಂಕಟೇಶ್ವರ ಮಿನರಲ್ಸ್ ಪ್ರಕರಣದಲ್ಲಿ ಎಚ್.ಡಿ.ಕುಮಾರಸ್ವಾಮಿ ಪಡೆದುಕೊಂಡಿರುವ ನಿರೀಕ್ಷಣಾ ಜಾಮೀನು ರದ್ದು ಕೋರಿ ಲೋಕಾಯುಕ್ತ ಎಸ್‌ಐಟಿ ಮೇಲ್ಮನವಿ ಸಲ್ಲಿಸಲು ಮುಂದಾಗಿದೆ. ಈ ಕುರಿತು ಎಸ್‌ಐಟಿ ಸಿದ್ಧತೆ ಕೈಗೊಂಡಿದ್ದು, ಶೀಘ್ರದಲ್ಲಿಯೇ ಹೈಕೋರ್ಟ್ ಮೊರೆ ಹೋಗುವ ಸಾಧ್ಯತೆ ಇದೆ.
ಬೆಂಗಳೂರು(ಅ.01): ಗಣಿಗಾರಿಕೆ ಕುರಿತು ತನಿಖೆ ನಡೆಸುತ್ತಿರುವ ಲೋಕಾಯುಕ್ತ ವಿಶೇಷ ತನಿಖಾ ದಳ (ಎಸ್‌ಐಟಿ) ಮುಖ್ಯಸ್ಥ ಚಂದ್ರಶೇಖರ್ ಮತ್ತು ಕೇಂದ್ರ ಉಕ್ಕು ಸಚಿವ ಕುಮಾರಸ್ವಾಮಿ ನಡುವಿನ ಜಂಗಿಕುಸ್ತಿ ಮತ್ತೊಂದು ಮಜಲು ಪಡೆದುಕೊಂಡಿದೆ.
ಸಾಯಿ ವೆಂಕಟೇಶ್ವರ ಮಿನರಲ್ಸ್ ಪ್ರಕರಣದಲ್ಲಿ ಎಚ್.ಡಿ.ಕುಮಾರಸ್ವಾಮಿ ಪಡೆದುಕೊಂಡಿರುವ ನಿರೀಕ್ಷಣಾ ಜಾಮೀನು ರದ್ದು ಕೋರಿ ಲೋಕಾಯುಕ್ತ ಎಸ್‌ಐಟಿ ಮೇಲ್ಮನವಿ ಸಲ್ಲಿಸಲು ಮುಂದಾಗಿದೆ. ಈ ಕುರಿತು ಎಸ್‌ಐಟಿ ಸಿದ್ಧತೆ ಕೈಗೊಂಡಿದ್ದು, ಶೀಘ್ರದಲ್ಲಿಯೇ ಹೈಕೋರ್ಟ್ ಮೊರೆ ಹೋಗುವ ಸಾಧ್ಯತೆ ಇದೆ ಎಂದು ಮೂಲಗಳು ಹೇಳಿವೆ.
undefined
'ತಾನೇನು ಮಾತಾಡ್ತಿದ್ದೇನೆ ಅನ್ನೋದು ಅವರಿಗೇ ಗೊತ್ತಿರೊಲ್ಲ: ಹೆಚ್‌ಡಿಕೆ ಆರೋಪಕ್ಕೆ ಡಿಕೆಶಿ ತಿರುಗೇಟು
ಒಂದೆರಡು ದಿನದಲ್ಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ. ಸಾಯಿ ವೆಂಕಟೇಶ್ವರ ಮಿನರಲ್ ಹೆಸರಿಗೆ ಗಣಿ ಗುತ್ತಿಗೆ ನೀಡುವಂತೆ ಮತ್ತು ಎಸ್.ವಿ. ಸಾಕ್ರೆ ಹೆಸರಿನ ಬದಲು ವಿನೋದ್ ಗೋಯೆಲ್ ಅವರು ಸಾಯಿ ವೆಂಕಟೇಶ್ವರ ಮಿನರಲ್ಸ್ ಮಾಲೀಕರು ಎಂದು ಹೇಳಿ ಗಣಿ ಗುತ್ತಿಗೆ ಪಡೆಯಲು ಯತ್ನಿಸಿದ್ದರು ಎಂಬುದು ಕುಮಾರಸ್ವಾಮಿ ವಿರುದ್ಧ ಇರುವ ಆರೋಪ. 2006ರಲ್ಲಿ ಸಿಎಂ ಆಗಿದ್ದಾಗ ಕುಮಾರಸ್ವಾಮಿ ನಿಯಮ ಉಲ್ಲಂಘಿಸಿ ಗೋಯೆಲ್ ಎಂಬ ವ್ಯಕ್ತಿಗೆ 550 ಎಕರೆ ಭೂಮಿ ಮಂಜೂರು ಮಾಡಲು ಒಳಸಂಚು ರೂಪಿಸಿದ್ದಾರೆ ಎಂಬ ಆರೋಪದಡಿ ದೂರು ದಾಖಲಾಗಿದೆ.