
ಬೆಂಗಳೂರು (ಮಾ.19): ‘ಮಾಜಿ ಸಚಿವರ ರಾಸಲೀಲೆ ವಿಡಿಯೋ ಬಹಿರಂಗದಲ್ಲಿ ನನ್ನ ಪಾತ್ರ ಎಳ್ಳಷ್ಟೂಇಲ್ಲ. ಈ ಪ್ರಕರಣದಲ್ಲಿ ನನ್ನನ್ನು ಸಿಲುಕಿಸುವ ವ್ಯವಸ್ಥಿತ ಹುನ್ನಾರ ನಡೆದಿದೆ. ಆ ಯುವತಿ ನನ್ನ ಸಂಪರ್ಕದಲ್ಲಿ ಇದ್ದದ್ದು ನಿಜ. ನನ್ನ ಮೇಲೆ ಆರೋಪಿಸಿದಂತೆ 100 ಕೋಟಿ ನೀಡಿದರೆ ಸಿ.ಡಿ. ಬಹಿರಂಗ ಆರೋಪವನ್ನು ನಾನೇ ಒಪ್ಪಿಕೊಂಡುಬಿಡುತ್ತೇನೆ..!’
ಇವು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರದ್ದು ಎನ್ನಲಾದ ಸಿ.ಡಿ. ಸ್ಫೋಟದ ಆರೋಪ ಹೊತ್ತು ತಲೆಮರೆಸಿಕೊಂಡಿರುವ ‘ಮಾಸ್ಟರ್ ಮೈಂಡ್’ ಎನ್ನಲಾದ ಕನ್ನಡದ ಖಾಸಗಿ ಸುದ್ದಿವಾಹಿನಿಯೊಂದರ ಸ್ಟಿಂಗ್ ಆಪರೇಷನ್ ವರದಿಗಾರ ನರೇಶ್‌ಗೌಡ ಗುರುವಾರ ಬಿಡುಗಡೆ ಮಾಡಿರುವ ವಿಡಿಯೋ ಹೇಳಿಕೆ.
ಸೀಡಿ ಕೇಸ್ : ಯುವತಿ ಗೊತ್ತು - 100 ಕೋಟಿ ಕೊಟ್ರೆ ಆರೋಪ ಒಪ್ಪಿಕೊಳ್ತೀನಿ ಎಂದ ಶಂಕಿತ ಕಿಂಗ್‌ಪಿನ್ ...
ಇನ್ನು ತನಿಖಾ ತಂಡ ಶಂಕಿತ ಕಿಂಗ್ ಪಿನ್ ನರೇಶ್ ಹಾಗೂ ಯುವತಿ ಇದ್ದ ಪೀಜಿ ಕೊಠಡಿಗಳ ಶೋಧ ನಡೆಸುತ್ತಿದ್ದು ಇಲ್ಲಿ ಭಾರೀ ಹಣ ಹಾಗೂ ಚಿನ್ನ ಪತ್ತೆಯಾಗಿದೆ.
ಯುವತಿ ಮನೇಲಿ 9 ಲಕ್ಷ, ನರೇಶ್ ಮನೇಲಿ 18 ಲಕ್ಷದ ಚಿನ್ನಾಭರಣದ ದಾಖಲೆ?
ಮಾಜಿ ಸಚಿವರ ಲೈಂಗಿಕ ಹಗರಣದ ವಿವಾದಿತ ಯುವತಿ ನೆಲೆಸಿದ್ದ ಪಿಜಿ ಕೊಠಡಿಯಲ್ಲಿ 9 ಲಕ್ಷ ನಗದು ಹಾಗೂ ಸಿಡಿ ಸ್ಫೋಟದ ‘ಮಾಸ್ಟರ್ ಮೈಂಡ್’ ಎನ್ನಲಾದ ಖಾಸಗಿ ಸುದ್ದಿವಾಹಿನಿ ಪತ್ರಕರ್ತ ನರೇಶ್‌ಗೌಡನ ಮನೆಯಲ್ಲಿ 18 ಲಕ್ಷ ಮೌಲ್ಯದ ಚಿನ್ನ ಖರೀದಿಯ ರಸೀದಿ ವಿಶೇಷ ತನಿಖಾ ದಳದ (ಎಸ್‌ಐಟಿ) ದಾಳಿ ವೇಳೆ ಪತ್ತೆಯಾಗಿದೆ ಎಂದು ಹೇಳಲಾಗುತ್ತಿದೆ.
ಇದರೊಂದಿಗೆ ರಾಸಲೀಲೆ ರಗಳೆಯಲ್ಲಿ ಕೋಟಿ ಕೋಟಿ ರು. ಹಣ ಚಲಾವಣೆಯಾಗಿದೆ ಎಂಬ ಮಾತಿಗೆ ಮತ್ತಷ್ಟುಪುಷ್ಟಿ ಸಿಕ್ಕಂತಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ