
ಬೆಂಗಳೂರು(ಏ.17): ಸಿಡಿ ಪ್ರಕರಣ ಸಂಬಂಧ ವಿಶೇಷ ತನಿಖಾ ತಂಡ (ಎಸ್‌ಐಟಿ) ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರಿಗೆ ಈ ತಿಂಗಳ 20ರಂದು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದೆ.
ರಮೇಶ್ ಜಾರಕಿಹೊಳಿ ಅವರಿಗೆ ಕೊರೋನಾ ಸೋಂಕು ತಗುಲಿ ಸದ್ಯ ಹೋಮ್ ಕ್ವಾರಂಟೈನ್‌ನಲ್ಲಿರುವ ಹಿನ್ನೆಲೆಯಲ್ಲಿ ಶುಕ್ರವಾರ ಅವರ ಪರವಾಗಿ ಸಹೋದರ ಬಾಲಚಂದ್ರ ಜಾರಕಿಹೊಳಿ ಎಸ್‌ಐಟಿಯಿಂದ ನೋಟಿಸ್ ಸ್ವೀಕರಿಸಿದ್ದಾರೆ.
ರಾರಾ ಜಾರಕಿ ಎಂದವಳು ಒನ್ಸ್ ಮೋರ್ ಅಂದಳಾ ಸೀಡಿ ಲೇಡಿ..?
ಈಗಾಗಲೇ ಸಿಡಿ ಯಲ್ಲಿರುವ ಯುವತಿಯನ್ನು ಹಲವು ಬಾರಿ ವಿಚಾರಣೆ ನಡೆಸಿರುವ ಎಸ್‌ಐಟಿ ಅಧಿಕಾರಿಗಳು ಸಿಡಿ ಕೇಸ್‌ನ ಹಿಂದಿನ ಹಲವು ರಹಸ್ಯಗಳನ್ನು ಕೆದಕಿ ಸಾಕ್ಷ್ಯ ಕಲೆ ಹಾಕಿದ್ದಾರೆ. ರಮೇಶ್ ಜಾರಕಿಹೊಳಿ ವಿಚಾರಣೆಗೆ ಹಾಜರಾದರೆ ಅವರಿಂದ ಯಾವೆಲ್ಲ ಮಾಹಿತಿ ಕಲೆ ಹಾಕಬೇಕು ಎಂಬ ಬಗ್ಗೆ ಈಗಾಗಲೇ ಸಿದ್ಧತೆ ನಡೆಸಲಾಗಿದೆ. ರಮೇಶ್ ಜಾರಕಿಹೊಳಿ ಅವರ ವಿಚಾರಣೆ ನಡೆಸಿದ ಬಳಿಕವಷ್ಟೇ ಪ್ರಕರಣದ ತನಿಖೆ ಪ್ರಗತಿ ಸಾಧಿಸಲಿದೆ ಎಂದು ಮೂಲಗಳು ತಿಳಿಸಿವೆ.
ಎರಡು ದಿನಗಳ ಹಿಂದಷ್ಟೇ ಯುವತಿ ಪರ ವಕೀಲ ಸೂರ್ಯ ಮುಕುಂದರಾಜ್ ಅವರು ರಮೇಶ್ ಜಾರಕಿಹೊಳಿ ವಿಚಾರಣೆ ನಡೆಸುವವರೆಗೂ ತಮ್ಮ ಕಕ್ಷಿದಾರರಾದ ಯುವತಿ ವಿಚಾರಣೆಗೆ ಹಾಜರಾಗುವುದಿಲ್ಲ ಎಂದು ಹೇಳಿಕೆ ನೀಡಿದ್ದರು. ಈ ಬೆನ್ನಲ್ಲೇ ಎಸ್‌ಐಟಿ ರಮೇಶ್ ಅವರಿಗೆ ನೋಟಿಸ್ ಜಾರಿ ಮಾಡಿದೆ ಎಂದು ಹೇಳಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ