
ಬೆಂಗಳೂರು (ಅ.3): ಅಡುಗೆ ಮಾಡುವ ವೇಳೆ ಸಿಲಿಂಡರ್ ಸ್ಫೋಟಗೊಂಡು 6 ಜನರು ಗಾಯಗೊಂಡ ಘಟನೆ ಬೆಂಗಳೂರಿನ ನಾಯಂಡಹಳ್ಳಿಯ ವಿನಾಯಕ ಲೇಔಟ್‌ನಲ್ಲಿ ನಡೆದಿದೆ.
ಕರಿಲಿಂಗಪ್ಪ(40), ಲಕ್ಷ್ಮಮ್ಮ(42), ಚೈತ್ರಾ (11) ಬಸವ(9) ಗೀತಾ ಮತ್ತು ಗಿರಿಜಾ 3 ವರ್ಷದ ಮಕ್ಕಳು ಗಾಯಗೊಂಡವರು. ಗಾಯಾಳು ಪೈಕಿ ತಾಯಿ ಲಕ್ಷಮ್ಮ ಮತ್ತು ಒಂದು ಮಗುವಿನ ಸ್ಥಿತಿ ಗಂಭೀರವಾಗಿದ್ದು ವಿಕ್ಟೋರಿಯಾ ಆಸ್ಪತ್ರೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಗಾಯಾಳುಗಳೆಲ್ಲ ಒಂದೇ ಕುಟುಂಬದವರಾಗಿದ್ದು ರಾಯಚೂರಿನಿಂದ ಬೆಂಗಳೂರಿಗೆ ಬಂದು ನಾಯಂಡಹಳ್ಳಿ ಸಮೀಪದ ವಿನಾಯಕ ಲೇಔಟ್‌ನ ಬಾಡಿಗೆ ಮನೆಯೊಂದರಲ್ಲಿ ವಾಸಿಸುತ್ತಿದ್ದರು. ಆದರೆ ನಿನ್ನೆ ಗ್ಯಾಸ್ ಲೀಕ್ ಆದ ಪರಿಣಾವೋ ಏನೋ ಏಕಾಏಕಿ ಭೀಕರವಾಗಿ ಸ್ಫೋಟಗೊಂಡ ಪರಿಣಾಮ ಮಕ್ಕಳು ಸೇರಿ ಕುಟುಂಬದ ಆರು ಜನರು ಗಂಭೀರ ಗಾಯಗೊಂಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ