
ಬೆಂಗಳೂರು (ಸೆ.25) ಸಾಹಿತ್ಯ ಕ್ಷೇತ್ರದ ದಿಗ್ಗದ ಎಸ್ಎಲ್ ಭರಪ್ಪ ನಿಧನರಾಗಿದ್ದಾರೆ. ಸಾಹಿಥ್ ಕ್ಷೇತ್ರದ ಭೀಷ್ಮ ಎಂದೇ ಗುರುತಿಸಿಕೊಂಡಿದ್ದ ಅಕ್ಷರ ಮಾಂತ್ರಿಕನ ಅಗಲಿಕೆಗೆ ಗಣ್ಯರು ಕಂಬನಿ ಮಿಡಿದಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ದಿಗ್ಗಜರು ಸಂತಾಪ ಸೂಚಿಸಿದ್ದಾರೆ. ಭೈರಪ್ಪ ನಿಧನಕ್ಕೆ ಸಂತಾಪ ಸೂಚಿಸಿದ ಬೆಂಗಳೂರು ಗ್ರಾಮಾಂತರ ಸಂಸದ ಡಾ.ಸಿಎನ್ ಮಂಜುನಾಥ್, ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ಭಗಂವತ ನೀಡಲಿ ಎಂದಿದ್ದಾರೆ. ಇದೇ ವೇಳೆ ಭೈರಪ್ಪ ಜಯದೇವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ದಿನಗಳನ್ನು ನೆನೆದಿದ್ದಾರೆ.
ಎಸ್ಎಲ್ ಭೈರಪ್ಪಗೆ ಕಳೆದ ಎರಡು ವರ್ಷದಿಂದ ಹೃದಯ ಆರೋಗ್ಯ ಸಮಸ್ಯೆ ಇತ್ತು. ಜಯದೇವದಲ್ಲಿ ಸೇವೆ ಸಲ್ಲಿಸುತ್ತಿರುವ ವೇಳೆ ಎಸ್ ಎಲ್ ಭೈರಪ್ಪ ಆಸ್ಪತ್ರೆಗೆ ಬಂದು ಚಿಕಿತ್ಸೆ ಪಡೆಯುತ್ತಿದ್ದರು. ಹಾರ್ಟ್ ಸಮಸ್ಯೆ ಕಾರಣ ಎಸ್ ಎಲ್ ಭೈರಪ್ಪ ಪೇಸ್ ಮೇಕರ್ ಹಾಕಿಕೊಂಡಿದ್ದರು. ಹೃದಯ ಚಿಕಿತ್ಸೆಗೆ ಆಗಮಿಸಿದ ಭೈರಪ್ಪ ಅವರು ಒಂದು ಬಾರಿ ಪ್ರತಿ ಬಾರಿ ನಾನು ಉಚಿತ ಚಿಕಿತ್ಸೆ ಪಡೆಯುತ್ತಿದ್ದೇನೆ ಎಂದು, 2 ಲಕ್ಷ ರೂಪಾಯಿ ಚೆಕ್ ಜಯದೇವ ಆಸ್ಪತ್ರೆಗೆ ದೇಣಿಕೆಯಾಗಿ ನೀಡಿದ್ದರು ಎಂದು ಮಂಜುನಾಥ್ ಹೇಳಿದ್ದಾರೆ.
ಎಸ್ ಎಲ್ ಭೈರಪ್ಪ ಅವರಿಗೆ ಕಳೆದ ಒಂದೂವರೆ ವರ್ಷದಿಂದ ಅನಾರೋಗ್ಯವಿತ್ತು. ಇದಕ್ಕೆ ಭೈರಪ್ಪ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಭೈರಪ್ಪ ಅವರ ಧೈರ್ಯ, ಆತ್ಮವಿಶ್ವಾಸ ಮುಂದೆ ಅವರ ವಯಸ್ಸು, ಆರೋಗ್ಯ ಸಮಸ್ಯೆಗಳು ಚಿಕ್ಕದಾಗುತ್ತಿತ್ತು ಎಂದು ಮಂಜುನಾಥ್ ಹೇಳಿದ್ದಾರೆ. ಎಸ್ ಎಲ್ ಭೈರಪ್ಪ ಹಾಗೂ ನಾನು ಇಬ್ಬರೂ ಚೆನ್ನರಾಯಪಟ್ಟಣದಿಂದ ಬಂದವರು. ಕಳೆದ ಹಲವು ವರ್ಷಗಳಿಂದ ಅವರ ಜೊತೆ ಅವಿನಾಭಾವ ಸಂಬಂಧ ಇತ್ತು ಎಂದು ಮಂಜುನಾಥ್ ಹೇಳಿದ್ದಾರೆ. ಸಂತೇಶ್ವರದಲ್ಲಿ ಭೈರಪ್ಪ ಅವರಿಗೆ ಸನ್ಮಾನ ಕಾರ್ಯಕ್ರಮ ಮಾಡಿದ್ದೆವು ಎಂದು ಮಂಜುನಾಥ್ ಹೇಳಿದ್ದಾರೆ.
ಎಸ್ ಎಲ್ ಭೈರಪ್ಪ ಪಾರ್ಥೀವ ಶರೀರ ಇಂದು ರಾತ್ರಿ ಆಸ್ಪತ್ರೆಯಲ್ಲೇ ಇರಿಸಲು ನಿರ್ಧರಿಸಲಾಗಿದೆ. ನಾಳೆ ಬೆಳಗ್ಗೆ 8 ಗಂಟೆಗೆ ರವೀಂದ್ರ ಕಲಾಕ್ಷೇತ್ರಕ್ಕೆ ಪಾರ್ಥೀವ ಶರೀರ ಕೊಂಡೊಯ್ಯಲಾಗುತ್ತದೆ. ಬಳಿಕ ಮಧ್ಯಾಹ್ನ 2 ಗಂಟೆ ವರೆಗೆ ರವೀಂದ್ರ ಕಲಾ ಕ್ಷೇತ್ರದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುತ್ತದೆ. ಮಧ್ಯಾಹ್ನ 3 ಗಂಟೆಗೆ ಪಾರ್ಥೀವ ಶರೀರ ಮೈಸೂರಿಗೆ ಕೊಂಡೊಯ್ಯಲು ನಿರ್ಧರಿಸಲಾಗಿದೆ. ನಾಳೆ ಸಂಜೆ 5 ಗಂಟೆಯಿಂದ ಮೈಸೂರಿನ ಕಲಾಮಂದಿರದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಶುಕ್ರವಾರ ಬೆಳಗ್ಗೆ 10.30ಕ್ಕೆ ಅಂತಮ ವಿಧಿ ವಿಧಾನದ ಬಳಿಕ ಅಂತ್ಯಕರಿಯೆ ನಡೆಸಲು ನಿರ್ಧರಿಸಲಾಗಿದೆ. ಭೈರಪ್ಪ ಹಿರಿಯ ಮಗ ನಾಳೆ ಬೆಳಗ್ಗೆ 10 ಗಂಟೆಗೆ ಲಂಡನ್‌ನಿಂದ ಮೈಸೂರಿಗೆ ಆಗಮಿಸಲಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ