ಸಿದ್ದರಾಮಯ್ಯ ವಿರುದ್ಧ ತನಿಖೆ ನಡೆಸುವಂತೆ ಕೆಲವು ದಾಖಲೆಗಳನ್ನು ಕೊಟ್ಟಿದ್ದೀನಿ. ಸಿಎಂ ಹೈಕೋರ್ಟ್ ಗೆ ಸಲ್ಲಿಸಿರುವ ರಿಟ್ ಅರ್ಜಿಯ ಅಂಶಗಳನ್ನು ಉಲ್ಲೇಖ ಮಾಡಿ ಮಾಹಿತಿ ನೀಡಿದ್ದೇನೆ. ಸುಮಾರು 25 ಪುಟಗಳ ಮಾಹಿತಿ ಕೊಟ್ಟಿದ್ದೇನೆ ಎಂದ ದೂರುದಾರ ಸ್ನೇಹಮಯಿ ಕೃಷ್ಣ
ಮೈಸೂರು(ಅ.15): ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆ ಪ್ರಕರಣದ ತನಿಖೆ ನಡೆಸುತ್ತಿರುವ ಮೈಸೂರಿನ ಲೋಕಾಯುಕ್ತ ಪೊಲೀಸರಿಗೆ ದೂರುದಾರ ಸ್ನೇಹಮಯಿ ಕೃಷ್ಣ ಅವರು ಸಿದ್ದರಾಮಯ್ಯ ವಿರುದ್ಧ ಕೆಲವು ದಾಖಲೆಗಳನ್ನು ಸಲ್ಲಿಸಿದ್ದಾರೆ.
ಮೈಸೂರಿನ ಲೋಕಾಯುಕ್ತ ಕಚೇರಿಯಲ್ಲಿ ಸೋಮವಾರ ಎಸ್ಪಿ ಟಿ.ಜೆ.ಉದೇಶ ಅವರನ್ನು ಭೇಟಿ ಮಾಡಿ ಪ್ರಕರಣದ ತನಿಖೆ ಸಂಬಂಧ ಅಗತ್ಯ ದಾಖಲೆಗಳನ್ನು ನೀಡಿದ್ದಾರೆ.
ಬಿಜೆಪಿ ನಾಯಕರಿಗೆ ನಾನು ಜಗ್ಗಲ್ಲ, ಬಗ್ಗಲ್ಲ, ಷಡ್ಯಂತ್ರ ಎದುರಿಸುವೆ: ಸಿದ್ದರಾಮಯ್ಯ
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಸಿದ್ದರಾಮಯ್ಯ ವಿರುದ್ಧ ತನಿಖೆ ನಡೆಸುವಂತೆ ಕೆಲವು ದಾಖಲೆಗಳನ್ನು ಕೊಟ್ಟಿದ್ದೀನಿ. ಸಿಎಂ ಹೈಕೋರ್ಟ್ ಗೆ ಸಲ್ಲಿಸಿರುವ ರಿಟ್ ಅರ್ಜಿಯ ಅಂಶಗಳನ್ನು ಉಲ್ಲೇಖ ಮಾಡಿ ಮಾಹಿತಿ ನೀಡಿದ್ದೇನೆ. ಸುಮಾರು 25 ಪುಟಗಳ ಮಾಹಿತಿ ಕೊಟ್ಟಿದ್ದೇನೆ ಎಂದರು.
ಹೈಕೋರ್ಟ್‌ನಲ್ಲಿ ಸಿದ್ದರಾಮಯ್ಯ ಕೆಲವು ಮಾಹಿತಿಗಳನ್ನು ಕೊಡದೇ ಮುಚ್ಚಿಟ್ಟಿದ್ದಾರೆ. ಅವೆಲ್ಲ ಅಂಶಗಳನ್ನು ನಾನು ಹೇಳಿದ್ದೇನೆ. ವೈಟ್ನರ್ ಹಾಕಿರುವ ಪುಟವನ್ನು ಮಾಹಿತಿ ಬಗ್ಗೆ ಸಿಎಂ ಕೋರ್ಟ್‌ಗೆ ಕೊಟ್ಟಿಲ್ಲ, ಮಾಹಿತಿ ನೀಡಿದ್ದೇನೆ ಎಂದು ಹೇಳಿದರು.