
ಹುಮನಾಬಾದ್ (ಸೆ.9) : ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ನ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯೆ, ಸಾಮಾಜಿಕ ಹೋರಾಟಗಾರ್ತಿ, ರಾಷ್ಟ್ರೀಯ ಹಿಂದೂಪರ ಚಿಂತನೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿರುವ ಚೈತ್ರಾ ಕುಂದಾಪುರ ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಹುಮನಾಬಾದ್ ಪಟ್ಟಣಕ್ಕೆ ಆಗಮಿಸುತ್ತಿದ್ದಾರೆ ಎಂದು ಶ್ರೀಕೃಷ್ಣ ಸಂದೇಶ ಪ್ರಚಾರ ಸಮಿತಿ ಅಧ್ಯಕ್ಷ ಜ್ಯೋತಿಬಾ ಸಾಟೆ ಮಾಹಿತಿ ನೀಡಿದರು.
ಪಟ್ಟಣದ ಸಾಯಿಬಾಬಾ ದೇವಸ್ಥಾನ ಸಭಾ ಮಂಟಪದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪಟ್ಟಣದ ವೀರಭದ್ರೇಶ್ವರ ಕಲ್ಯಾಣ ಮಂಟಪದಲ್ಲಿ ಸೆ. 10ರಂದು ಭಾನುವಾರ ಸಂಜೆ 6ಕ್ಕೆ ಅವರು ಆಗಮಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಚೈತ್ರಾ ಕುಂದಾಪುರ ಅವರು ಕ್ಷೇತ್ರದ ಮಾತೆಯರಿಗೆ, ಯುವಕರಿಗೆ ವ್ಯಾಪಾರಸ್ಥರಿಗೆ ದೇಶದ ಸಂಸ್ಕಾರ, ಸಂಸ್ಕೃತಿ ಕುರಿತು ಮಾತನಾಡಲಿದ್ದಾರೆ.
ಪ್ರತಿಯೊಬ್ಬರೂ ರಾಷ್ಟ್ರೀಯತೆ ಅಳವಡಿಸಿಕೊಳ್ಳಿ- ಚೈತ್ರಾ ಕುಂದಾಪುರ
ಕಾರ್ಯಕ್ರಮದಲ್ಲಿ ಕ್ಷೇತ್ರದ ಶಾಸಕ ಡಾ. ಸಿದ್ದಲಿಂಗಪ್ಪ (ಸಿದ್ದು) ಪಾಟೀಲ್, ಹಿರೇಮಠ ಸಂಸ್ಥಾನದ ರೇಣುಕ ವೀರ ಗಂಗಾಧರ ಶಿವಾಚಾರ್ಯ, ಮಹೇಶ ಬೀದರಕರ್ ಸೇರಿದಂತೆ ಕ್ಷೇತ್ರದ ಗಣ್ಯರು ಹಾಗೂ ಜನಪ್ರತಿನಿಧಿಗಳು ಆಗಮಿಸಲಿದ್ದಾರೆ. ಕಾರ್ಯಕ್ರಮಕ್ಕೆ ಸ್ಥಳೀಯರು ಸೇರಿದಂತೆ ವಿವಿಧ ಗ್ರಾಮೀಣ ಭಾಗದ ಯುವಕ, ಯುವತಿಯರು, ಮಾತೆಯರು, ಗಣ್ಯರು ಆಗಮಿಸಿ ಕಾರ್ಯಕ್ರಮ ಯಶಸ್ಸಿಗೆ ಸಹಕರಿಸಬೇಕಾಗಿ ಮನವರಿಕೆ ಮಾಡಿಕೊಂಡಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಹಾದೇವ ಗೌಳಿ, ಬಸವರಾಜ ಅಷ್ಟಗಿ, ಅಭಿಷೇಕ ಭೂಶಟ್ಟಿ, ದಿಲೀಪ ಪಂಚಾಳ, ಅನೀಲರಡ್ಡಿ, ಬಲರಾಮ ಪೊಲಿದಾನ, ಶೈಲೇಂದ್ರ ಚವ್ಹಾಣ್, ಮಾಣಿಕ ಬುರುಡ ಸೇರಿದಂತೆ ಉಪಸ್ಥಿತರಿದ್ದರು.
ಹಿಂದೂಗಳೆಲ್ಲ ಒಂದಾಗುವ ಕಾಲ ಬಂದಿದೆ: ಚೈತ್ರಾ ಕುಂದಾಪುರ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ