ಎಫ್‌ಐಆರ್‌ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಸಂಕಷ್ಟ

Published : Sep 29, 2024, 07:58 AM IST
ಎಫ್‌ಐಆರ್‌ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಸಂಕಷ್ಟ

ಸಾರಾಂಶ

ಸಿದ್ದರಾಮಯ್ಯ ಅವರು ಅಧಿಕಾರ ದುರ್ಬಳಕೆ ಮಾಡಿಕೊಂಡು ತಮ್ಮ ಪತಿ ಪಾರ್ವತಿ ಹೆಸರಲ್ಲಿ ಕಾನೂನು ಬಾಹಿರವಾಗಿ ಮುಡಾದಿಂದ ನಿವೇಶನ ಪಡೆದುಕೊಂಡಿದ್ದಾರೆ. ಬದಲಿ ನಿವೇಶನ ಮೂಲಕ ಆಕ್ರಮ ಹಣ ವರ್ಗಾವಣೆ ಮಾಡಲಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. 

ಬೆಂಗಳೂರು(ಸೆ.29): ಮುಡಾ ಹಗರಣವು ಸಿದ್ದರಾಮಯ್ಯ ಅವರಿಗೆ ಸಂಕಷ್ಟದ ಮೇಲೆ ಸಂಕಷ್ಟ ಎದುರಾಗುತ್ತಿದ್ದು, ಎಫ್‌ಐಆರ್ ದಾಖಲಾದ ಬೆನ್ನಲ್ಲೇ ಇದೀಗ ಪ್ರಕರಣ ಇ.ಡಿ. ಅಂಗಳಕ್ಕೆ ಬಂದಿದೆ. ಪ್ರಕರಣದಲ್ಲಿ ಕೋಟ್ಯಂತರ ರು. ಅಕ್ರಮ ಹಣ ವರ್ಗಾವಣೆಯಾಗಿದೆ ಎಂದು ಆರೋಪಿಸಿ ಸಾಮಾಜಿಕ ಕಾರ್ಯಕರ್ತ ಸ್ನೇಹಮಯ ಕೃಷ್ಣ ಇ.ಡಿ.ಗೆ ದೂರು ನೀಡಿದ್ದಾರೆ. 

ಸಿದ್ದರಾಮಯ್ಯ ಅವರು ಅಧಿಕಾರ ದುರ್ಬಳಕೆ ಮಾಡಿಕೊಂಡು ತಮ್ಮ ಪತಿ ಪಾರ್ವತಿ ಹೆಸರಲ್ಲಿ ಕಾನೂನು ಬಾಹಿರವಾಗಿ ಮುಡಾದಿಂದ ನಿವೇಶನ ಪಡೆದುಕೊಂಡಿದ್ದಾರೆ. ಬದಲಿ ನಿವೇಶನ ಮೂಲಕ ಆಕ್ರಮ ಹಣ ವರ್ಗಾವಣೆ ಮಾಡಲಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. 

ಮುಡಾ ಹಗರಣದಲ್ಲಿ ನನ್ನನ್ನೇಕೆ ಎಳೆಯುತ್ತೀರಿ?: ಸಚಿವ ಬೈರತಿ ಸುರೇಶ್

ಮುಡಾದಿಂದ ಕಾನೂನು ಬಾಹಿರವಾಗಿ 14 ನಿವೇತನಗಳನ್ನು ಪಡೆದುಕೊಂಡು, 55 ಕೋಟಿ ರು. ಗಿಂತ ಹೆಚ್ಚಿನ ಮೊತ್ತವನ್ನು ಲಾಭ ಮಾಡಿಕೊಳ್ಳಲಾಗಿದೆ. ಈ ಬಗ್ಗೆ ಅಗತ್ಯ ಹಾಖೆ ನಡೆಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕಿದೆ ಎಂದು ಮಾರಿನಲ್ಲಿ ಆಗ್ರಹಿಸಲಾಗಿದೆ. ಪ್ರಕರಣ ಸಂಬಂಧ ರಾಜ್ಯಪಾಲರು ತನಿಖೆಗೆ ಒಪ್ಪಿಗೆ ನೀಡಿದ್ದು, ಹೈಕೋರ್ಟ್ ಸಹ ರಾಜ್ಯಪಾಲರ ಕ್ರಮವನ್ನು ಎತ್ತಿ ಹಿಡಿದಿದೆ. ಹೈಕೋರ್ಟ್‌ ತೀರ್ಪಿನ ಆಧಾರದ ಮೇಲೆ ಜನಪ್ರತಿನಿಧಿ ವಿಶೇಷ ನ್ಯಾಯಾಲಯವು ಮೈಸೂರು ಲೋಕಾಯುಕ್ತ ಪೊಲೀಸರಿಗೆ ಎಫ್‌ಐಆರ್ ದಾಖಲಿಸುವಂತೆ ಸೂಚನೆ ನೀಡಿದೆ. ಮುಖ್ಯಮಂತ್ರಿ ಸೇರಿದಂತೆ ಇತರರ ವಿರುದ್ಧ ಅಕ್ರಮ ಹಣ ವರ್ಗಾವಣೆಯಾಗಿರುವ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿದೆ. ಆದರೆ, ಪ್ರಕರಣದಲ್ಲಿ ಕೋಟ್ಯಂತರ ಇ.ಡಿ. ಸಂಸ್ಥೆಯು ಪ್ರಕರಣ ದಾಖಲಿಸಿ ಈ ನಿಟ್ಟಿನಲ್ಲಿ ತನಿಖೆ ಕೈಗೊಳ್ಳಬೇಕು ಎಂದು ತಿಳಿಸಲಾಗಿದೆ. 

ಮುಡಾ ನಿವೇಶನ ಹಂಚಿಕೆ ವಿಚಾರದಲ್ಲಿ ಭಾರೀ ಅಕ್ರಮ ನಡೆದಿದೆ. 50:50 ಅನುಪಾತದಡಿ ಸರಿಯಾಗಿ ಹಂಚಿಕೆ ಮಾಡದೆ ಬೇಕಾಬಿಟ್ಟ ಹಂಚಿಕೆ ಮಾಡಲಾಗಿದ್ದು, ಕೋಟ್ಯಂತರ ರು.ನಷ್ಟು ಭಾರೀ ಅಕ್ರಮ ನಡೆದಿದೆ. ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರು ಮೈಸೂರಿನ ಕೆಸರ ಗ್ರಾಮದಲ್ಲಿ 3 ಎಕರೆ ಜಮೀನು ಹೊಂದಿದ್ದರು. ಈ ಭೂಮಿಯನ್ನು ಮುಡಾ ಅಭಿವೃದಿಗಾಗಿ ಸ್ವಾಧೀನಪಡಿಸಿಕೊಂಡಿದ್ದು, ಪರಿಹಾರದ ನಿವೇಶನಗಳನ್ನು ಮಂಜೂರು ಮಾಡಲಾಗಿದೆ. ಮುಡಾದಿಂದ ಸ್ವಾಧೀನಪಡಿಸಿಕೊಂಡಿರುವ ಪಾರ್ವತಿ ಅವರ ಜಮೀನಿಗೆ ಹೋಲಿಸಿದರೆ ಪಾರ್ವತಿ ಅವರಿಗೆ ನೀಡಲಾದ ನಿವೇಶನವು ಹೆಚ್ಚಿನ ಆಸ್ತಿ ಮೌಲ್ಯವನ್ನು ಹೊಂದಿದೆ. ಪಾರದರ್ಶಕವಾಗಿ ತನಿಖೆ ನಡೆಸುವ ಅಗತ್ಯವಿದೆ ಹೇಳಲಾಗಿದೆ.

ಸಿದ್ದು ಕೇಸಿಗೂ ನಿರ್ಮಲಾ ಪ್ರಕರಣಕ್ಕೂ ಅಜಗಜಾಂತರ ವ್ಯತ್ಯಾಸ: ಆ‌ರ್. ಅಶೋಕ್

ಎಚ್ಚಿಕೆ ಆರೋಪಕ್ಕೆ ಉತ್ತರಿಸಲ್ಲ 

ಮೈಸೂರು: ಕೇಂದ್ರ ಸಚಿವ ಎಚ್. ಡಿ. ಕುಮಾರಸ್ವಾಮಿಯ ಆರೋಪ ಗಳಿಗೆ ನಾನು ಉತ್ತರ ಕೊಡುವುದಿಲ್ಲ. ಕುಮಾರಸ್ವಾಮಿ ಆರೋಪಕ್ಕೆ ಉತ್ತರ ಕೊಡಬೇಕು ಎಂದು ಎಲ್ಲಿದೆ ಹೇಳಿ ಎಂದುಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು. ವಿವರ ಕೊಟ್ಟಿದ್ದೇನೆ. ಮಾಧ್ಯಮಗಳಿಗೆ ಹೇಳುವುದಕ್ಕೆ ಏನೂ ಇಲ್ಲ, ನೀವೇ ಏನಾದರು ಇದ್ದರೆ ಹೇಳಿ ಎಂದರು. 

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ಕುಮಾರಸ್ವಾಮಿ ಮಾಡಿರುವ ಆರೋಪಗಳಿಗೆ ಉತ್ತರ ಕೊಡಲ್ಲ ಎಂದ ಮೇಲೆ ಮತ್ತೆ ಮತ್ತೆ ಅದನ್ನೇ ನನ್ನ ಬಳಿ ಕೇಳಬೇಡಿ, ಮಾಧ್ಯಮಗಳಿಗೆ ನಿನ್ನೆಯೇ ಎಲ್ಲಾ ಪೊನ್ನಣ್ಣ ಸೌಜನ್ಯ ಭೇಟಿ: ಕಾನೂನು ಸಲಹೆಗಾರ ಪೊನಣ್ಣ ನನ್ನನ್ನು ಭೇಟಿಯಾಗಿದ್ದಾರೆ ಅಷ್ಟೆ, ಅವರು ತಮ್ಮ ಕ್ಷೇತ್ರಕ್ಕೆ ಹೋಗುತ್ತಿದ್ದರು. ಹೀಗಾಗಿ, ಸೌಜನ್ಯಕ್ಕಾಗಿ ಬಂದಿದ್ದಾರೆ. ನಾನು ಅವರ ಬಳಿ ಯಾವ ಚರ್ಚೆಗಳನ್ನೂ ಮಾಡಿಲ್ಲ. ಕಾನೂನು ಹೋರಾಟದ ವಿಚಾರ ನಮ್ಮ ಕಾನೂನಿನ ಟೀಂ ನೋಡಿಕೊಳ್ಳುತ್ತದೆ ಎಂದು ತಿಳಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಶ್ರೀರಂಗಪಟ್ಟಣ ಮಸೀದಿ ಕೆಡವುತ್ತೇವೆಂದರೆ? ನಾವು ಕೈಗೆ ಬಳೆ ತೊಟ್ಟು ಕೂತಿಲ್ಲ-ಅಬ್ದುಲ್ ರಜಾಕ್!
ಐಷಾರಾಮಿ ಕಾರ್ಟಿಯರ್ ವಾಚ್‌: ಲೋಕಾಯುಕ್ತ ಅಫಿಡವಿಟ್ ರಿವೀಲ್ ಮಾಡಿದ ಡಿ.ಕೆ. ಶಿವಕುಮಾರ್!