
ಬೆಂಗಳೂರು(ಡಿ.29): ಬಿಬಿಎಂಪಿ ಸುಮಾರು 22 ಸಾವಿರ ಕೋಟಿ ರು. ಕಾಮಗಾರಿಗಳ ಬಾಕಿ ಮೊತ್ತ ಪಾವತಿಸಬೇಕಿದೆ. ವಿವಿಧ ಬ್ಯಾಂಕ್‌ಗಳಲ್ಲಿ ಸಾಲವಿದ್ದು, ಸಂಪನ್ಮೂಲ ಕ್ರೋಢೀಕರಣ ಕೊರತೆ ಇದೆ. ಹೀಗಾಗಿ, ಪಾಲಿಕೆಯ ಆರ್ಥಿಕ ಪರಿಸ್ಥಿತಿ ಸುಧಾರಿಸುವ ವರೆಗೆ ಬಿಬಿಎಂಪಿ ಚುನಾವಣೆ ನಡೆಸುವುದು ಬೇಡ ಎಂದು ಸಾಮಾಜಿಕ ಕಾರ್ಯಕರ್ತ ಎಸ್. ಅಮರೇಶ್ ಎಂಬುವರು ಮುಖ್ಯಮಂತ್ರಿ ಯಡಿಯೂರಪ್ಪಗೆ ಪತ್ರ ಬರೆದಿದ್ದಾರೆ.
ಪಾಲಿಕೆಯಲ್ಲಿ ಆರ್ಥಿಕ ಶಿಸ್ತು ಕಾಪಾಡಿಕೊಳ್ಳಬೇಕಾದರೆ ಹಾಗೂ ಈಗ ಇರುವ ಪರಿಸ್ಥಿತಿ ಸುಧಾರಿಸುವ ವರೆಗೆ ಚುನಾವಣೆ ಮುಂದೂಡುವುದು ಉತ್ತಮ. ಇಲ್ಲವಾದರೆ ಈಗಿರುವ ಪಾಲಿಕೆಯ ಆರ್ಥಿಕ ಪರಿಸ್ಥಿತಿಯಲ್ಲಿ ಪಾಲಿಕೆ ಸದಸ್ಯರ ಒತ್ತಡಕ್ಕೆ ಮಣಿದು ಅಧಿಕಾರ ನಡೆಸಬೇಕಾದ ಪರಿಸ್ಥಿತಿ ನಿರ್ಮಾಣವಾಗಲಿದೆ. ಪಾಲಿಕೆಯ ಆರ್ಥಿಕ ಪರಿಸ್ಥಿತಿ ಮತ್ತಷ್ಟುಶೋಚನಿಯ ಸ್ಥಿತಿಗೆ ತಲುಪುವ ಸಾಧ್ಯತೆ ಇದೆ.
ಶಾಲೆ ಆರಂಭಕ್ಕೆ ಪಾಲಿಕೆ ಸಿದ್ಧತೆ: ಥರ್ಮಲ್ ಸ್ಕ್ಯಾನರ್ ವಿತರಣೆ
ಪಾಲಿಕೆಯಲ್ಲಿ 22 ಸಾವಿರ ಕೋಟಿ ರು.ಗಳಿಗೂ ಅಧಿಕ ಮೊತ್ತ ಕಾಮಗಾರಿಗಳ ಬಾಕಿ ಬಿಲ್ ಪಾವತಿಸಬೇಕಿದೆ. ಅಲ್ಲದೆ ಗುತ್ತಿಗೆದಾರರಿಗೆ ಕೋಟ್ಯಂತರ ರು. ಬಾಕಿ ಉಳಿಸಿಕೊಂಡಿದ್ದು, 700 ಕೋಟಿ ರು.ಗಳಿಗಿಂತ ಅಧಿಕ ಸಾಲ ಇದೆ. ಹೀಗಾಗಿ, ಅಧಿಕಾರಿಗಳು ಯಾವುದೇ ಸದಸ್ಯರ ಹಸ್ತಕ್ಷೇಪ ಇಲ್ಲದೆ ಕಾರ್ಯನಿರ್ವಹಿಸಲು ಅವಕಾಶ ಮಾಡಿಕೊಡುವ ನಿಟ್ಟಿನಲ್ಲಿ ಚುನಾವಣೆ ಮುಂದೂಡುವುದು ಉತ್ತಮ ಎಂದು ಒತ್ತಾಯಿಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ