
ಬೆಂಗಳೂರು [ಡಿ.08]: 'ಸಿಗರೇಟ್ ಸೇದಬೇಡ, ಚಿಕ್ಕ ವಯಸ್ಸಿನಲ್ಲೇ ಪ್ರೀತಿ ಅಂತ ತಿರುಗಡಬೇಡ,' ಎಂದು ಬುದ್ಧಿ ಹೇಳಿದ ತಾಯಿಗೇ ಮಗನೊಬ್ಬ ಪೊರಕೆಯಲ್ಲಿ ಹೊಡೆಯುವ ವೀಡಿಯೋವೊಂದು ಸಾಮಾಜಿಕ ಜಾಲಾತಣದಲ್ಲಿ ವೈರಲ್ ಆಗಿವೆ. ಈ ವಿಡಿಯೋಗೆ ಸಾಮಾಜಿಕ ಜಾಲತಾಣಗಳಲ್ಲೂ ವ್ಯಾಪಕ ಟೀಕೆ ವ್ಯಕ್ತವಾಗಿದ್ದು, ಬಾಲಕನ ವಿರುದ್ಧ ಕೇಸ್ ದಾಖಲಿಸುವಂತೆ ಹಲವರು ಒತ್ತಾಯಿಸಿದ್ದರು. ಸದ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿ ಅಣ್ಣಾ ಮಲೈ ಪ್ರತಿಕ್ರಿಯಿಸಿದ್ದಾರೆ.
ಜನ್ಮಕೊಟ್ಟ ತಾಯಿಗೇ ಪೊರಕೆಯಿಂದ ಥಳಿಸಿದ ಮಗ!
ಈ ವಿಚಾರ ನಮ್ಮ ಗಮನಕ್ಕೆ ಬಂದಿದೆ. ಮಾಧ್ಯಮಗಳಲ್ಲೂ ವಿಡಿಯೋ ನೋಡಿದ್ದೇವೆ. ಆ ಹುಡುಗನ ಮನೆ ಜೆ. ಪಿ ನಗರ ವ್ಯಾಪ್ತಿಯಲ್ಲಿದೆ ಎಂಬ ಮಾಹಿತಿಯೂ ಲಭ್ಯವಾಗಿದೆ. ಈಗಾಗಲೇ ಜೆ. ಪಿ ನಗರ ಪೊಲೀಸ್ ಇನ್ಸ್‌ಪೆಕ್ಟರ್‌ಗೆ ಬಾಲಕನ ವಿರುದ್ಧ ಸುಮೋಟೋ ಕೇಸ್ ದಾಖಲಿಸಿ ಎಂದೂ ಹೆಳಿದ್ದೇನೆ. ಯಾರೂ ಕೇಸ್ ದಾಖಲಿಸಿಲ್ಲ, ಹೀಗಾಗಿ ಸುಮೋಟೋ ಕೇಸ್ ದಾಖಲಿಸಿ ಕಾನೂನು ಪ್ರಕಾರ ಕ್ರಮ ಕೈಗೊಳ್ಳುತ್ತೇವೆ'
-ಅಣ್ಣಾಮಲೈ, ಡಿಸಿಪಿ, ಬೆಂಗಳೂರು ದಕ್ಷಿಣ
"
ಹೆತ್ತಮ್ಮನಿಗೆ ಹೊಡೆದಿದ್ದು ಮಾತ್ರವಲ್ಲ, ದೈರ್ಯವಿದ್ದರೆ ಪೊಲೀಸರಿಗೆ ಕಂಪ್ಲೇಂಟ್ ಕೊಡು ಎಂದು 19 ವರ್ಷದ ಜೀವನ್ ಅಮ್ಮನಿಗೆ ಧಮಕಿ ಹಾಕಿದ್ದ. ಈ ಮಗನ ದುಂಡಾವರ್ತನೆ ವಿರುದ್ಧ ಎಲ್ಲೆಡೆಯಿಂದ ವ್ಯಾಪಕ ಟೀಕೆಗಳು ವ್ಯಕ್ತವಾಗಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ