ಆಸ್ತಿಗಾಗಿ ಜೀವಂತ ತಾಯಿಯ ಮರಣ ಪ್ರಮಾಣಪತ್ರ ಪಡೆದ ಪುತ್ರ: ದೂರು ದಾಖಲು

Kannadaprabha News   | Kannada Prabha
Published : Jun 14, 2025, 09:41 AM IST
death certificate

ಸಾರಾಂಶ

ಜೀವಂತ ಇರುವಾಗಲೇ ಸುಳ್ಳು ಅರ್ಜಿ ನೀಡಿ ತಾಯಿಯ ಮರಣ ಪ್ರಮಾಣಪತ್ರ ಪಡೆದು ವ್ಯಕ್ತಿಯೊಬ್ಬ ಆಸ್ತಿ ಕಬಳಿಸಲು ಪ್ರಯತ್ನಿಸಿ ಪೊಲೀಸರ ಅತಿಥಿಯಾದ ಘಟನೆ ಪಟ್ಟಣದ ಖಾಜೇಖಾನ್ ಗಲ್ಲಿಯಲ್ಲಿ ನಡೆದಿದೆ.

ಶಿಗ್ಗಾಂವಿ (ಜೂ.14): ಜೀವಂತ ಇರುವಾಗಲೇ ಸುಳ್ಳು ಅರ್ಜಿ ನೀಡಿ ತಾಯಿಯ ಮರಣ ಪ್ರಮಾಣಪತ್ರ ಪಡೆದು ವ್ಯಕ್ತಿಯೊಬ್ಬ ಆಸ್ತಿ ಕಬಳಿಸಲು ಪ್ರಯತ್ನಿಸಿ ಪೊಲೀಸರ ಅತಿಥಿಯಾದ ಘಟನೆ ಪಟ್ಟಣದ ಖಾಜೇಖಾನ್ ಗಲ್ಲಿಯಲ್ಲಿ ನಡೆದಿದೆ. ಮರಣ ಪ್ರಮಾಣಪತ್ರ ನೀಡಿದ ಪುರಸಭೆಯ ಅಧಿಕಾರಿಗೂ ನೋಟಿಸ್ ನೀಡಲಾಗಿದೆ. ಪಟ್ಟಣದ ಖಾಜೇಖಾನ್ ಗಲ್ಲಿಯ ಹೂರಾಂಬಿ ಜಂಗ್ಲಿಸಾಬ್ ಮುಲ್ಕಿ (60) ಎಂಬುವರೇ ದೂರು ದಾಖಲಿಸಿದ್ದು, ಹುಬ್ಬಳ್ಳಿಯಲ್ಲಿ ವಾಸವಿರುವ ಅವರ ಏಕೈಕ ಪುತ್ರ ಶೌಕತ್ ಅಲಿ ಮುಲ್ಕಿ (39) ವಿರುದ್ಧ ಕಾನೂನು ಕ್ರಮ ಜರುಗಿಸಿ ಎಂದು ಪೊಲೀಸರಿಗೆ ದೂರು ನೀಡಿದ್ದಾರೆ.

ಘಟನೆಯ ಹಿನ್ನೆಲೆ: ದೂರುದಾರರ ಪತಿ 2001ರಲ್ಲೇ ತೀರಿಕೊಂಡಿದ್ದು, ಪುತ್ರ ಶೌಕತ್ ಅಲಿ ಸುಮಾರು 10 ವರ್ಷಗಳಿಂದ ಹುಬ್ಬಳ್ಳಿಯಲ್ಲಿ ಬೇರೆ ಮನೆ ಮಾಡಿಕೊಂಡು ಪತ್ನಿಯೊಂದಿಗೆ ವಾಸವಾಗಿದ್ದಾನೆ. ಹೂರಾಂಬಿ ಶಿಗ್ಗಾಂವಿಯಲ್ಲಿ ಒಂಟಿಯಾಗಿ ವಾಸವಿದ್ದಾರೆ. 2 ಎಕರೆ ಜಮೀನು ಹೂರಾಂಬಿ ಹಾಗೂ ಪುತ್ರನ ಜಂಟಿ ಖಾತೆಯ ಹೆಸರಿನಲ್ಲಿದೆ. ಆಸ್ತಿಯನ್ನು ಕಬಳಿಸುವ ಉದ್ದೇಶದಿಂದ ಮಗ, ಆರೋಪಿ ಶೌಕತ್ ಪುರಸಭೆಯಲ್ಲಿ 2025ರ ಮೇ 6ರಂದು ಶಿಗ್ಗಾಂವಿ ಪಟ್ಟಣದ ಖಾಜೆಖಾನ್ ಗಲ್ಲಿಯಲ್ಲಿ ತಾಯಿ ಮರಣ ಹೊಂದಿದ್ದಾಳೆ ಎಂದು ಮರಣ ಪ್ರಮಾಣಪತ್ರವನ್ನು ಪಡೆದಿದ್ದಾನೆ. ಈ ವಿಷಯ ಆತನ ತಾಯಿಗೆ ಗೊತ್ತಾಗಿದ್ದು, ಪಟ್ಟಣದ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಕಾನೂನು ಕ್ರಮ: ಜನನ, ಮರಣ ಪ್ರಮಾಣಪತ್ರವನ್ನು ಕೂಲಂಕಷವಾಗಿ ಪರಿಶೀಲಿಸಿ ನೀಡಬೇಕು. ಪಟ್ಟಣದ ಖಾಜೇಖಾನ್ ಗಲ್ಲಿಯ ನಿವಾಸಿ ಹೂರಾಂಬಿ ಅವರ ಮರಣ ಪ್ರಮಾಣಪತ್ರ ನೀಡಿರುವ ಅಧಿಕಾರಿಗೆ ನೋಟಿಸ್ ನೀಡಲಾಗಿದ್ದು, ತನಿಖೆ ನಡೆಸಿ ಸೂಕ್ತ ಕಾನೂನು ಕ್ರಮ ಜರುಗಿಸಲಾಗುತ್ತದೆ ಎಂದು ಪುರಸಭೆ ಮುಖ್ಯಾಧಿಕಾರಿ ಮಲ್ಲೇಶ ತಿಳಿಸಿದರು.

ಕರ್ತವ್ಯ ಲೋಪ: ಶಿಗ್ಗಾಂವಿ ಪುರಸಭೆ ಅಧಿಕಾರಿಗಳ ನಿರ್ಲಕ್ಷ್ಯ ಮತ್ತು ಕರ್ತವ್ಯಲೋಪದಿಂದ ಈ ಘಟನೆ ನಡೆದಿದೆ. ಹೂರಾಂಬಿ ಜಂಗ್ಲಿಸಾಬ್ ಮುಲ್ಕಿ ಅವರು ನನ್ನ ವಾರ್ಡ್ ನಿವಾಸಿಯಾಗಿದ್ದು, ವಾರ್ಡ್ ಜನಪ್ರತಿನಿಧಿಯಾಗಿರುವ ನನ್ನ ಗಮನಕ್ಕೂ ತಾರದೆ ಅವರು ಜೀವಂತವಾಗಿರುವಾಗಲೇ ಮರಣ ಪ್ರಮಾಣಪತ್ರ ನೀಡಲಾಗಿದೆ. ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಪುರಸಭೆ ಸದಸ್ಯ ದಯಾನಂದ ಅಕ್ಕಿ ತಿಳಿಸಿದರು.

ದುರುದ್ದೇಶ: ನಾನು ಜೀವಂತ ಇರುವಾಗಲೇ ನನ್ನ ಮಗ ಶೌಕತ್ ಅಲಿ ನಮ್ಮಿಬ್ಬರ ಜಂಟಿ ಹೆಸರಿನಲ್ಲಿರುವ ಆಸ್ತಿಯನ್ನು ಮೋಸದಿಂದ ಕಬಳಿಸುವ ದುರುದ್ದೇಶದಿಂದ ಪುರಸಭೆಗೆ ಸುಳ್ಳು ಅರ್ಜಿ ಕೊಟ್ಟು ಮರಣ ಪ್ರಮಾಣಪತ್ರ ಸೃಷ್ಟಿಸಿದ್ದು, ಆತನ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಶಿಗ್ಗಾಂವಿ ಠಾಣೆಯಲ್ಲಿ ದೂರು ದಾಖಲಿಸಿದ್ದೇನೆ ಎಂದು ದೂರು ದಾಖಲಿಸಿರುವ ವೃದ್ಧೆ ಹೂರಾಂಬಿ ತಿಳಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರೈತನಿಗೆ ಪರಿಹಾರ ನೀಡದ ಶಿವಮೊಗ್ಗ ಡಿಸಿ ಕಚೇರಿ, ಕಾರು ಜಪ್ತಿಗೆ ಕೋರ್ಟ್ ಆದೇಶ! ಏನಿದು ಪ್ರಕರಣ?
'ನಿಮಗೆ ಧಮ್ ಇದ್ರೆ..; ದ್ವೇಷ ಭಾಷಣ ಮಸೂದೆ ಜಾರಿಗೆ ಮುಂದಾಗಿರೋ ಕಾಂಗ್ರೆಸ್ ಸರ್ಕಾರಕ್ಕೆ ಸಿಟಿ ರವಿ ನೇರ ಸವಾಲು!