
ಬೆಂಗಳೂರು (ಅ.11) : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಾಧನೆಗಳು ಮತ್ತು ಅವರ ವ್ಯಕ್ತಿತ್ವ ಬಿಂಬಿಸುವ ಹಾಡುಗಳ ಧ್ವನಿ ಸುರುಳಿಯನ್ನು ಅರಣ್ಯ ಅಭಿವೃದ್ಧಿ ನಿಗಮ ಅಧ್ಯಕ್ಷೆ ತಾರಾ ಅನುರಾಧ ಬಿಡುಗಡೆ ಮಾಡಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಮಾನಿ ಬಳಗದವರು ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿ ಮಾಡಿರುವ ಸಾಧನೆಗಳು ಮತ್ತು ಅವರ ವ್ಯಕ್ತಿತ್ವ ಬಿಂಬಿಸುವ ಐದು ಹಾಡುಗಳನ್ನು ಹೊರತಂದಿದ್ದಾರೆ. ಧ್ವನಿ ಸುರುಳಿಗಳನ್ನು ಸೋಮವಾರ ನಗರದ ಖಾಸಗಿ ಹೊಟೇಲ್‌ನಲ್ಲಿ ತಾರಾ ಅವರು ಬಿಡುಗಡೆ ಮಾಡಿದರು.
ಈ ವೇಳೆ ಮಾತನಾಡಿದ ತಾರಾ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಮಾನಿಗಳ ಬಳಗದಿಂದ ಹೊರ ತಂದಿರುವ ಮುಖ್ಯಮಂತ್ರಿಗಳ ಸಾಧನೆಗಳ ಕುರಿತ ಧ್ವನಿಸುರುಳಿ ಬಿಡುಗಡೆ ಮಾಡಿರುವುದು ಹರ್ಷ ತಂದಿದೆ. ಮುಖ್ಯಮಂತ್ರಿಗಳ ಮೇಲಿನ ಅಭಿಮಾನದಿಂದ ಹಾಡುಗಳನ್ನು ರಚಿಸಲಾಗಿದೆ. ಮುಖ್ಯಮಂತ್ರಿಯಾಗಿ ಮಾಡಿರುವ ಸಾಧನೆಗಳ ಕುರಿತು ಹಾಡುಗಳನ್ನು ರಚಿಸಲಾಗಿದೆ. ಎಲ್ಲಾ ಹಾಡುಗಳು ಚೆನ್ನಾಗಿ ಮೂಡಿಬಂದಿವೆ. ನಾನು ಎರಡು ಬಾರಿ ಸ್ಟಾರ್ ಪ್ರಚಾರಕರಾಗಿ ಕ್ಯಾಂಪೇನ್ ಮಾಡಿದ್ದೆ. ಒಮ್ಮೆ ಜಲಸಂಪನ್ಮೂಲ ಸಚಿವರಾರಾಗಿದ್ದು, ಮತ್ತೊಮ್ಮೆ ಗೃಹಸಚಿವರಾಗಿದ್ದರು. ಅವರು ಮುಖ್ಯಮಂತ್ರಿಯಾಗಿ ಮೊದಲ ಬಜೆಟ್‌ನಲ್ಲಿ ಮಕ್ಕಳಿಗಾಗಿಯೇ ಪ್ರತ್ಯೇಕ ಬಜೆಟ್ ಕೊಟ್ಟಿದ್ದಾರೆ. ಬಸವರಾಜ ಬೊಮ್ಮಾಯಿ ಅವರು ತುಂಬಾ ಸರಳ ಜೀವಿ. ಮುಖ್ಯಮಂತ್ರಿಗಳ ಪುತ್ರನಾಗಿದ್ದರೂ, ಎಂಜಿನಿಯರಿಂಗ್ ಪದವೀಧರರಾಗಿದ್ದರೂ ತುಂಬಾ ಸರಳ ವ್ಯಕ್ತಿತ್ವದವರಾಗಿದ್ದಾರೆ ಎಂದು ಬಣ್ಣಿಸಿದ್ದಾರೆ. ಈ ವೇಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಮಾನಿ ಬಳಗದ ಶಿವಕುಮಾರ್ ಮೇಟಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಯಾವ ರಾಜ್ಯದಲ್ಲಿ ಶೇಕಡಾ 50ಕ್ಕಿಂತ ಹೆಚ್ಚು ಮೀಸಲಾತಿ ಇದೆ? ಹಿಂದುಳಿದ ವರ್ಗದ ಕತೆಏನು?
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ