
ನವದೆಹಲಿ (ಅ.06): ಜಾರಿ ನಿರ್ದೇಶನಾಲಯ(ED)ದ ಕೇಸಿಗೆ ಸಂಬಂಧಿಸಿ ಮೂರ್ನಾಲ್ಕು ದಿನಗಳಿಂದ ದೆಹಲಿಯಲ್ಲೇ ಉಳಿದಿರುವ ಶಾಸಕ ಜಮೀರ್ ಅಹಮದ್ (Zameer ahmed) ಅವರು ಮಂಗಳವಾರ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಅವರ ಜತೆ ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ (Sonia gandhi) ಅವರನ್ನು ಭೇಟಿಯಾಗುವಲ್ಲಿ ಯಶಸ್ವಿಯಾಗಿದ್ದಾರೆ.
ದೆಹಲಿಯಲ್ಲೇ (Delhi) ಉಳಿದಿದ್ದ ಜಮೀರ್ ಅವರು ಸೋನಿಯಾ ಭೇಟಿಗಾಗಿ ಪ್ರಯತ್ನಿಸುತ್ತಲೇ ಇದ್ದರು. ಕೊನೆಗೂ ಭೇಟಿಗೆ ಒಪ್ಪಿ ಅದರಂತೆ ಸೋನಿಯಾ ಗಾಂಧಿ ಅವರ ಮನೆಗೆ ತೆರಳಿದಾಗ ‘ನಿಮ್ಮ ಇ.ಡಿ. (ED)ಕೇಸ್ ಏನಾಯ್ತು? ಎಂದು ಕಾಂಗ್ರೆಸ್ ವರಿಷ್ಠೆ ವಿಚಾರಿಸಿದ್ದಾರೆ.
ಕೇಂದ್ರದ 'ಕೈ' ಬಲಕ್ಕೆ ಸಿದ್ದು ಬದಲಾಗಿ ಪಟ್ಟದ ಶಿಷ್ಯ, ಏನಾಗಲಿದೆ ಆರ್ಯನ್ ಭವಿಷ್ಯ?
ಅಲ್ಪಸಂಖ್ಯಾತರಿಗೆ ಏನು ತೊಂದರೆ ಆಗುತ್ತಿದೆ ಎಂದೂ ಕೇಳಿದ್ದಾರೆ. ಆಗ ಜಮೀರ್ ಅವರು, ಉದ್ದೇಶಪೂರ್ವಕವಾಗಿ ಇ.ಡಿ.ದಾಳಿ ನಡೆಸಲಾಗಿದೆ, ನಾನು ಯಾವುದೇ ತಪ್ಪು ಮಾಡಿಲ್ಲ. ಎಲ್ಲದಕ್ಕೂ ದಾಖಲೆಗಳಿವೆ ಎಂದು ಪ್ರತಿಕ್ರಿಯಿಸಿದ್ದಾರೆ. ಜತೆಗೆ, ಸಿದ್ದರಾಮಯ್ಯ ನಮ್ಮ ಅಲ್ಪಸಂಖ್ಯಾತರಿಗೂ ನಾಯಕರು ಎಂದು ಜಮೀರ್ ಹೇಳಿದ್ದಾರೆ.
ಶಾಸಕ ಜಮೀರ್‌ಗೆ ಕೊಲೆ ಬೆದರಿಕೆ: ಜೆಡಿಎಸ್ ವಕ್ತಾರನ ವಿರುದ್ಧ ಕೇಸ್ ಬುಕ್
ರಾಷ್ಟ್ರ ರಾಜಕಾರಣಕ್ಕೆ ಹೋಗ್ತಾರಾ? ಸೋನಿಯಾ ಭೇಟಿ ಬಳಿಕ ಸ್ಪಷ್ಟನೆ ಕೊಟ್ಟ ಸಿದ್ದು
ನವದೆದೆಹಲಿಗೆ (New Delhi) ಭೇಟಿ ನೀಡಿದ ಸಿದ್ದು, ಜನಪಥ್ ರಸ್ತೆಯಲ್ಲಿರುವ ನಿವಾಸದಲ್ಲಿ ಸೋನಿಯಾ ಗಾಂಧಿಯವರೊಂದಿಗೆ (Sonia Gandhi) ಒಂದೂವರೆ ಗಂಟೆಗೂ ಹೆಚ್ಚು ಕಾಲ ಮಾತುಕತೆ ನಡೆಸಿದ್ದಾರೆ. ಈ ವೇಳೆ ಸಿದ್ದರಾಮಯ್ಯನವರನ್ನು ರಾಷ್ಟ್ರ ರಾಜಕಾರಣಕ್ಕೆ ಆಹ್ವಾನಿಸಿದ್ದಾರೆ ಎನ್ನುವ ಮಾತುಗಳು ಹರಿದಾಡುತ್ತಿವೆ. ಇನ್ನು ಈ ಬಗ್ಗೆ ಸಿದ್ದರಾಮಯ್ಯ ಸಹ ಸ್ಪಷ್ಟನೆ ಕೊಟ್ಟಿದ್ದು, ಅದು ಈ ಕೆಳಗಿನಂತಿದೆ.
ರೈತರ ಹತ್ಯೆ ಕೇಸ್: ಬಿಜೆಪಿ ತನ್ನ ತಾಲಿಬಾನಿ ಮನಸ್ಥಿತಿಯನ್ನು ಬೆತ್ತಲು ಮಾಡಿಕೊಳ್ಳುತ್ತಿದೆ ಎಂದ ಸಿದ್ದು
ಸೋನಿಯಾ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಂಯ್ಯ, ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ ನನ್ನ ಬಳಿ ರಾಷ್ಟ್ರ ರಾಜಕೀಯದ ಬಗ್ಗೆ ಚರ್ಚೆ ಮಾಡಿಲ್ಲ. ಅವರ ಬಳಿ ಕೇವಲ ಕರ್ನಾಟಕ ರಾಜಕೀಯದ ಬಗ್ಗೆ ಚರ್ಚೆ ಮಾಡಿದ್ದೇನೆ. ರಾಷ್ಟ್ರ ರಾಜಕಾರಣಕ್ಕೆ ಸೋನಿಯಾಗಾಂಧಿ ನನ್ನ ಕರೆದಿಲ್ಲ ಎಂದು ಸ್ಪಷ್ಟಪಡಿಸಿದರು.
ಈ ಹಿಂದೆ ರಾಹುಲ್‌ಗಾಂಧಿ ಅವರು ಪ್ರಧಾನ ಕಾರ್ಯದರ್ಶಿ ಆಗು ಎಂದಿದ್ದರು, ನಾನೇ ನಿರಾಕರಿಸಿದ್ದೆ. ನಾನು ರಾಜ್ಯ ರಾಜಕಾರಣದಲ್ಲಿ ಕಂಪರ್ಟ್ ಆಗಿದ್ದೇನೆ. ಹಿಂದೆ ಕಾರ್ಯಕಾರಿ ಸಮಿತಿಗೂ ರಾಜೀನಾಮೆ ನೀಡಿದ್ದೆ ಎಂದರು. ಈ ಮೂಲಕ ಸಿದ್ದರಾಮಯ್ಯನವರು ರಾಷ್ಟ್ರ ರಾಜಕಾರಣಕ್ಕೆ ಹೋಗುತ್ತಾರೆ ಎನ್ನುವ ಊಹಾಪೋಹಗಳಿಗೆ ಅವರೇ ತೆರೆ ಎಳೆದರು
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ