ಶೀಘ್ರ ಸಾವಿರಾರು ವೈದ್ಯ ವಿದ್ಯಾರ್ಥಿಗಳು ಕೋವಿಡ್ ಕರ್ತವ್ಯಕ್ಕೆ

By Suvarna News  |  First Published Aug 15, 2020, 10:54 AM IST

ಶೀಘ್ರ ವೈದ್ಯಕೀಯ ವಿದ್ಯಾರ್ಥಿಗಳು ಕೋವಿಡ್ ಕರ್ತವ್ಯಕ್ಕೆ ಹಾಜರಾಗಲಿದ್ದಾರೆ ಎಂದು ಸಚಿವ ಸುಧಾಕರ್ ಹೇಳಿದ್ದಾರೆ.


ಬೆಂಗಳೂರು (ಆ.15): ಸ್ನಾತಕೋತ್ತರ ವೈದ್ಯಕೀಯ ಪದವಿ ಪರೀಕ್ಷಾ ಫಲಿತಾಂಶ ಶೀಘ್ರದಲ್ಲೇ ಪ್ರಕಟವಾಗಲಿರುವ ಹಿನ್ನೆಲೆಯಲ್ಲಿ ವಾರಾಂತ್ಯದ ವೇಳೆಗೆ ವೈದ್ಯ ವೃತ್ತಿ ತರಬೇತಿಗೆ ಬರುವ ಸುಮಾರು ಎರಡು ಸಾವಿರ ವೈದ್ಯ ವಿದ್ಯಾರ್ಥಿಗಳು ಕೋವಿಡ್‌ ಚಿಕಿತ್ಸೆಗೆ ಹೆಚ್ಚುವರಿಯಾಗಿ ಲಭ್ಯವಾಗಲಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್‌ ತಿಳಿಸಿದ್ದಾರೆ.

ಕೆಂಗೇರಿ ಬಳಿಯ ಬಿಜಿಎಸ್‌ ಗ್ಲೋಬಲ್‌ ಆಸ್ಪತ್ರೆಯಲ್ಲಿ ಶುಕ್ರವಾರ ನೂತನ ಕೋವಿಡ್‌ 19 ಪ್ರಯೋಗಾಲಯ ಮತ್ತು ಸ್ನಾತಕೋತ್ತರ ಪದವಿ ತರಗತಿಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ಇನ್ನು ಒಂದೆರಡು ದಿನಗಳಲ್ಲಿ ಸ್ನಾತಕೋತ್ತರ ವೈದ್ಯಕೀಯ ಪದವಿ ವಿದ್ಯಾರ್ಥಿಗಳ ಫಲಿತಾಂಶ ಪ್ರಕಟವಾಗಲಿದೆ. ಫಲಿತಾಂಶ ಪ್ರಕಟವಾದ ಬಳಿಕ ಉತ್ತೀರ್ಣರಾದವರು ವೈದ್ಯ ತರಬೇತಿ ಆರಂಭಿಸಲಿದ್ದಾರೆ. ಇದರಿಂದ ಇಂತಹ ಸುಮಾರು ಎರಡು ಸಾವಿರ ಇಂಟರ್ನಿ ವೈದ್ಯರು ಈ ವಾರಾಂತ್ಯದ ವೇಳೆಗೆ ಕೋವಿಡ್‌ ಚಿಕಿತ್ಸೆಗೆ ಹೆಚ್ಚುವರಿಯಾಗಿ ಲಭ್ಯವಾಗಲಿದ್ದಾರೆ ಎಂದರು.

Latest Videos

undefined

ಕೊರೋನಾ ಅಟ್ಟಹಾಸ: ಸಾಯುವ ಮುನ್ನ ಪತ್ರಕರ್ತ ಕಣ್ಣೀರು, ವಿಡಿಯೋ ವೈರಲ್‌ ...

ಭಾರತ ಕೋವಿಡ್‌ ವಿರುದ್ಧದ ಹೋರಾಟದಲ್ಲಿ ಅಮೇರಿಕಾದಂತಹ ಮುಂದುವರಿದ ರಾಷ್ಟ್ರಗಳಿಗಿಂತ ಉತ್ತಮ ಸಾಧನೆ ಮಾಡಿದೆ. ನಮ್ಮಲ್ಲಿ ಆ ದೇಶಗಳಿಗಿಂತ ವೈದ್ಯಕೀಯ ಸೌಲಭ್ಯಗಳ ಕೊರತೆ ಇದ್ದರೂ ಮರಣ ಪ್ರಮಾಣ ಕಡಿಮೆಯಿದೆ. ವೈದ್ಯರಿಂದ ಜನರು ಹೆಚ್ಚಿನದನ್ನು ನಿರೀಕ್ಷಿಸುತ್ತಿದ್ದಾರೆ. ಇದೊಂದು ಪವಿತ್ರ ಹೊಣೆಗಾರಿಕೆಯಿರುವ ವೃತ್ತಿಯಾಗಿದ್ದು, ಭವಿಷ್ಯದಲ್ಲಿ ಇದರ ಮೌಲ್ಯಗಳನ್ನು ಎತ್ತಿ ಹಿಡಿಯಬೇಕು ಎಂದು ವೈದ್ಯ ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಭಯಬೇಡ, ಕೊರೋನಾ ಗಾಳಿಯಲ್ಲಿ ಹರಡೋದು ಅಷ್ಟು ಸುಲಭವಲ್ಲ..!.

ಬಿಜಿಎಸ್‌ ಗ್ಲೋಬಲ್‌ ಇನ್‌ಸ್ಟಿಟ್ಯೂಟ್‌ ಆಫ್‌ ಮೆಡಿಕಲ್‌ ಸೈನ್ಸಸ್‌ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಡಾ. ಪ್ರಕಾಶನಾಥ ಸ್ವಾಮೀಜಿ, ಆರೋಗ್ಯ ವಿಶ್ವವಿದ್ಯಾಲಯದ ಸಿಂಡಿಕೇಟ್‌ ಸದಸ್ಯ ಡಾ. ಬಿ.ಸಿ. ಭಗವಾನ್‌ ಮತ್ತು ಕಾಲೇಜಿನ ಪ್ರಾಂಶುಪಾಲ ಡಾ. ಮೋಹನ್‌ ಕಾರ್ಯಕ್ರಮದಲ್ಲಿ ಹಾಜರಿದ್ದರು.

click me!