
ಹಿರೇಕೆರೂರು (ಆ.29): ಸಾರ್ವಜನಿಕ ಗಣೇಶೋತ್ಸವಕ್ಕೆ ಅನುಮತಿ ನೀಡುವ ಕುರಿತಂತೆ ಭಿನ್ನಾಭಿಪ್ರಾಯಗಳೇನೂ ಇಲ್ಲ. ಎಲ್ಲರೂ ಅವರವರ ಅಭಿಪ್ರಾಯ ಹೇಳಿದ್ದಾರೆ ಎಂದಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಆ.30ರಂದು ತಜ್ಞರ ಸಭೆ ಇದೆ. ಸಭೆಯಲ್ಲಿ ಚರ್ಚಿಸಿ ಗಣೇಶೋತ್ಸವದ ಕುರಿತು ನಿರ್ಧರಿಸುತ್ತೇವೆ ಎಂದು ಸ್ಪಷ್ಟಪಡಿಸಿದ್ದಾರೆ.
ಪಟ್ಟಣದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಸಭೆ ಬಳಿಕ ಸಾರ್ವಜನಿಕ ಗಣೇಶೋತ್ಸವದ ಬಗ್ಗೆ ನಿರ್ಧಾರ ತಿಳಿಸುವುದಾಗಿ ಹೇಳಿದರು.
ಮಾಲಿನ್ಯ ಮಂಡಳಿಯಿಂದ ವಿಶೇಷವಾದ ಯೋಜನೆ : 10 ಲಕ್ಷ ಅರಿಶಿಣ ಗಣಪತಿ ಅಭಿಯಾನ
ಸಾರ್ವಜನಿಕ ಗಣೇಶೋತ್ಸವಕ್ಕೆ ಸರ್ಕಾರ ನಿರ್ಬಂಧ ಹೇರಿದ ಬೆನ್ನಲ್ಲೇ, ಕೆಲ ಬಿಜೆಪಿಗರಿಂದಲೇ ವಿರೋಧ ವ್ಯಕ್ತವಾಗಿತ್ತು.
ಮಸೀದಿಗಳಲ್ಲಿ ಸಾಮೂಹಿಕ ನಮಾಜ್ ಮಾಡುತ್ತಿದ್ದಾರೆ ಅಲ್ಲಾ, ಚಚ್‌ರ್‍ಗಳಲ್ಲಿ ಸಾಮೂಹಿಕ ಪ್ರಾರ್ಥನೆ ಮಾಡುತ್ತಿಲ್ಲವೇ. ಅಲ್ಲಿ ಅವರಿಗೆ ಅವಕಾಶ ಮಾಡಿಕೊಟ್ಟಿದ್ದೀರಿ ಎನ್ನುವುದಾರೆ ಗಣೇಶೋತ್ಸವಕ್ಕೂ ಅವಕಾಶ ಕೊಡಲಿ ಎಂದು ಸಂಸದ ಪ್ರತಾಪ್ ಸಿಂಹ ಆಗ್ರಹಿಸಿದರು. ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕೂಡ ಸಾರ್ವಜನಿಕ ಗಣೇಶೋತ್ಸವ ಮಾಡಿಯೇ ತೀರುತ್ತೇವೆ ಎಂದಿದ್ದರು.
ಚಿಂತಕ ಚಕ್ರವರ್ತಿ ಸೂಲಿಬೆಲೆ, ನಿಬಂಧೆಗಳನ್ನು ವಿಧಿಸಿಯಾದರೂ ಸರ್ಕಾರ ಗಣೇಶೋತ್ಸವಕ್ಕೆ ಅವಕಾಶ ನೀಡಬೇಕೆಂದು ಒತ್ತಾಯಿಸಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ