ಶೀಘ್ರ ಬದಲಾಗಲಿದೆ ರಾಜ್ಯ ಸಚಿವ ಸಂಪುಟ..?

Published : Jul 16, 2018, 07:25 AM IST
ಶೀಘ್ರ ಬದಲಾಗಲಿದೆ ರಾಜ್ಯ ಸಚಿವ ಸಂಪುಟ..?

ಸಾರಾಂಶ

ರಾಜ್ಯ ನಾಯಕರು ದಿಲ್ಲಿಗೆ ಕೊಂಡೊಯ್ಯುವ ಅಂತಿಮ ಪಟ್ಟಿಗೆ ಹೈಕಮಾಂಡ್ ಸಮ್ಮತಿಸಿದರೆ ನಂತರದ ಒಂದೆರಡು ದಿನಗಳಲ್ಲೇ ನಿಗಮ ಮಂಡಳಿ ನೇಮಕಾತಿ ಆದೇಶ ಹೊರಬೀಳುವ ಸಾಧ್ಯತೆ ಇದೆ. 

ಬೆಂಗಳೂರು :  ರಾಜ್ಯ ಸಚಿವ ಸಂಪುಟ ವಿಸ್ತರಣೆ ಮತ್ತು ನಿಗಮ ಮಂಡಳಿ ನೇಮಕ ವಿಚಾರದ ಸಂಬಂಧ ಪಕ್ಷದ ವರಿಷ್ಠರೊಂದಿಗೆ ಸಮಾಲೋಚನೆ ನಡೆಸಲು ರಾಜ್ಯ ಕಾಂಗ್ರೆಸ್ಸಿನ ಹಿರಿಯ ನಾಯಕರು ಇದೇ ತಿಂಗಳ 18ರಂದು ದೆಹಲಿಗೆ ತೆರಳಲಿದ್ದಾರೆ. ರಾಜ್ಯ ನಾಯಕರು ಕೊಂಡೊಯ್ಯುವ  ಅಂತಿಮ ಪಟ್ಟಿಗೆ ಹೈಕಮಾಂಡ್ ಸಮ್ಮತಿಸಿದರೆ ನಂತರದ ಒಂದೆರಡು ದಿನಗಳಲ್ಲೇ ನಿಗಮ ಮಂಡಳಿ ನೇಮಕಾತಿ ಆದೇಶ ಹೊರಬೀಳುವ ಸಾಧ್ಯತೆ ಇದೆ. 

ಆದರೆ, ಸಚಿವ ಸಂಪುಟ ವಿಸ್ತರಣೆ ವಿಚಾರ ಚರ್ಚೆಯಾದರೂ ಆಷಾಢ ಮುಗಿಯು ವವರೆಗೆ ವಿಸ್ತರಣೆ ನಡೆಯುವ ಸಾಧ್ಯತೆ ಕಡಿಮೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ. ಪಕ್ಷದ ಯಾವ್ಯಾವ ಶಾಸಕರು ಹಾಗೂ  ನಾಯಕರುಗಳಿಗೆ ಯಾವ್ಯಾವ ನಿಗಮ ಮಂಡಳಿ ಸ್ಥಾನಗಳನ್ನು ನೀಡಬೇಕು ಎಂಬುದರ ಬಗ್ಗೆ ಈಗಾಗಲೇ ಕಾಂಗ್ರೆಸ್‌ನಲ್ಲಿ ನಿರ್ಧರಿಸಲಾಗಿದೆ. 

ಆ ಪ್ರಕಾರ ರಾಜ್ಯ ನಾಯಕರು ಅಂತಿಮ ಪಟ್ಟಿ ಸಿದ್ಧಪಡಿಸಿಕೊಂಡು ದೆಹಲಿಗೆ ತೆರಳಲಿದ್ದಾರೆ. ಪಟ್ಟಿಗೆ ಹೈಕಮಾಂಡ್ ಬುಧವಾರ ಒಪ್ಪಿಗೆ ಸೂಚಿ ಸಿದರೆ ನಂತರದ ಜು.19 ಅಥವಾ 20 ರಂದು ನೇಮಕಾತಿ ಆದೇಶ ಹೊರಬೀಳುವ ಸಾಧ್ಯತೆ ಇದೆ. ರಾಜ್ಯ ನಾಯಕರ ಭೇಟಿ ಸಂದರ್ಭದಲ್ಲಿ ಸಚಿವ ಸಂಪುಟ ವಿಸ್ತರಣೆ ವಿಚಾರವನ್ನು ಹೈಕಮಾಂಡ್ ನಾಯಕರು ಚರ್ಚಿಸಬಹುದು. ಆದರೆ, ಆಷಾಢ ಮುಗಿಯುವವರೆಗೆ ವಿಸ್ತರಣೆ ನಡೆಯುವ ಸಾಧ್ಯತೆ ಕಡಿಮೆ. 

ಆದರೆ, ಯಾವುದೇ ಕ್ಷಣದಲ್ಲಿ ಬೇಕಾದರೂ ಸಚಿವ ಸಂಪುಟ ವಿಸ್ತರಣೆಯೂ ನಡೆಯಬಹುದು ಎಂದು ರಾಜ್ಯ ನಾಯಕರು ಹೇಳುತ್ತಿರುವುದರಿಂದ ಹೈಕಮಾಂಡ್ ಸೂಚಿಸಿದರೆ ಸಂಪುಟ ವಿಸ್ತರಣೆ ನಡೆದರೂ ಆಶ್ಚರ್ಯವಿಲ್ಲ ಎನ್ನಲಾಗಿದೆ. ಬುಧವಾರ ದೆಹಲಿಗೆ ಹೋಗ್ತೀವಿ: ನಗರದಲ್ಲಿ  ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರು, ಜು.18ರಂದು ನಾನು, ಸಮನ್ವಯ ಸಮಿತಿ ಅಧ್ಯಕ್ಷರಾದ ಸಿದ್ದರಾಮಯ್ಯ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಿ.ಕೆ.ಶಿವಕುಮಾರ್ ಅವರು ದೆಹಲಿಗೆ ತೆರಳಲಿದ್ದು, ಹೈಕಮಾಂಡ್ ಯಕರೊಂದಿಗೆ ಸಚಿವ ಸಂಪುಟ ವಿಸ್ತರಣೆ ಮತ್ತು ನಿಗಮ ಮಂಡಳಿ ನೇಮಕಾತಿ ವಿಚಾರ ಚರ್ಚಿಸುವುದಾಗಿ ಹೇಳಿದ್ದಾರೆ. 

ಬುಧವಾರ ದೆಹಲಿಯಲ್ಲಿ ಕಾವೇರಿ ನಿರ್ವಹಣಾ ಮಂಡಳಿ ವಿಚಾರದ ಚರ್ಚೆಗೆ ಸಭೆ ಇದೆ. ಇದರಲ್ಲಿ ಪಾಲ್ಗೊಳ್ಳಲು ನಾವು ಮೂವರು ದೆಹಲಿಗೆ ತೆರಳಲಿದ್ದೇವೆ. ಇದೇ ವೇಳೆ ಈ ವೇಳೆ ಹೈಕಮಾಂಡ್ ನಾಯಕರನ್ನು ಭೇಟಿಯಾಗಿ ಸಚಿವ ಸಂಪುಟ ವಿಸ್ತರಣೆ ಮತ್ತು ನಿಗಮ ಮಂಡಳಿ ನೇಮಕಾತಿ ಬಗ್ಗೆಯೂ ಚರ್ಚೆ ನಡೆಸಲಿದ್ದೇವೆ. ಹೈಕಮಾಂಡ್ ಸಮ್ಮತಿ ನೀಡಿದರೆ ಬಾಕಿ ಇರುವ ಎಲ್ಲ ಸಚಿವ ಸಂಪುಟ ಸ್ಥಾನಗಳನ್ನೂ ಭರ್ತಿ ಮಾಡಲಾಗುವುದು. 

ನಿಗಮ ಮಂಡಳಿ ನೇಮಕಾತಿ ನಡೆಸಲಾಗುವುದು. ಇದರಲ್ಲಿ ಯಾವುದೇ ಅನುಮಾನ ಬೇಡ ಎಂದು ತಿಳಿಸಿದರು. ಮುಂಬರುವ ಲೋಕಸಭಾ ಚುನಾವಣೆಗೆ ಪಕ್ಷ ಸಕಲ ಸಿದ್ಧತೆಯಲ್ಲಿ ತೊಡಗಿದ್ದು, ಸಾಮೂಹಿಕ ನಾಯಕತ್ವದಡಿ ಚುನಾವಣೆ ಎದುರಿಸುತ್ತೇವೆ. ಕೆಪಿಸಿಸಿ ನೂತನ ಅಧ್ಯಕ್ಷ  ದಿನೇಶ್ ಗುಂಡೂರಾವ್, ಲೋಕಸಭೆಯ ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಎಲ್ಲರೂ ಇದ್ದಾರೆ. 

ಸಿದ್ದರಾಮಯ್ಯನವರೇ ನಮ್ಮ ನಾಯಕರು. ಎಲ್ಲರೂ ಅವರು ಇವರು ಎಂಬ ಗೊಂದಲವಿಲ್ಲ ಎಂದು ಇದೇ ವೇಳೆ ಪರಮೇಶ್ವರ್  ಸ್ಪಷ್ಟಪಡಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

'ನಿಮ್ಮ ಸುರಕ್ಷತೆ ನನಗೂ ಮುಖ್ಯ..' ಮಹಿಳಾ ಪ್ರಯಾಣಿಕರ ಮನ ಗೆದ್ದ ಆಟೋ ಚಾಲಕ, ಸಂದೇಶ ವೈರಲ್ ಮಾಡಿದ ಬೆಂಗಳೂರು ಪೊಲೀಸರು!
ರಾಜ್ಯದಲ್ಲಿ ಕೈ ಮೀರಿದ ಕಳ್ಳರ ಹಾವಳಿ, ಕಾನೂನು ವ್ಯವಸ್ಥೆ ಸಂಪೂರ್ಣ ವಿಫಲ? ಪೊಲೀಸರ ಮನೆಗಳನ್ನೇ ಬಿಡುತ್ತಿಲ್ಲ ಖದೀಮರು!