ಸ್ಥಗಿತವಾದ ಕಡೆ ಬಸ್ ಸಂಚಾರ : ಶಾಲಾ-ಕಾಲೇಜು ಮಾರ್ಗಕ್ಕೆ ಆದ್ಯತೆ

By Kannadaprabha News  |  First Published Sep 23, 2021, 10:50 AM IST
  • ಕೋವಿಡ್‌ನಿಂದಾಗಿ ಸ್ಥಗಿತಗೊಳಿಸಲಾಗಿದ್ದ ಬಸ್‌ಗಳ ಸಂಚಾರವನ್ನು ಪುನಃ ಆರಂಭ
  • ಪುನಃ ಆರಂಭಿಸಲು ಕ್ರಮ ಕೈಗೊಳ್ಳಲಿದ್ದು,  ಮಕ್ಕಳು ಶಾಲಾ-ಕಾಲೇಜಿಗೆ  ತೆರಳಲು ಮೊದಲ ಆದ್ಯತೆ

ವಿಧಾನಸಭೆ (ಸೆ.23): ಕೋವಿಡ್‌ (covid ) ನಿಂದಾಗಿ ಸ್ಥಗಿತಗೊಳಿಸಲಾಗಿದ್ದ ಬಸ್‌ಗಳ ಸಂಚಾರವನ್ನು ಪುನಃ ಆರಂಭಿಸಲು ಕ್ರಮ ಕೈಗೊಳ್ಳಲಿದ್ದು,  ಮಕ್ಕಳು ಶಾಲಾ-ಕಾಲೇಜಿಗೆ  ತೆರಳಲು ಮೊದಲ ಆದ್ಯತೆ ನೀಡಲಾಗುವುದು ಎಂದು ಸಾರಿಗೆ ಸಚಿವ  ಶ್ರೀ ರಾಮುಲು  ಭರವಸೆ ನೀಡಿದ್ದಾರೆ. 

ಪ್ರಶ್ನೋತ್ತರ ಅವಧಿಯಲ್ಲಿ ಬುಧವಾರ ಕಾಂಗ್ರೆಸ್ ಸದಸ್ಯ ಬಸವನಗೌಡ ದದ್ದಲ ಪ್ರಶ್ನೆಗೆ ಉತ್ತರಿಸಿದ ಅವರು  ರಾಜ್ಯದಲ್ಲಿ ಶಾಲೆ- ಕಾಲೇಜು ಪ್ರಾರಂಭವಾಗಿದೆ. 

Tap to resize

Latest Videos

ವಜಾಗೊಂಡ 4,200 ಸಾರಿಗೆ ನೌಕರರ ಮರುನೇಮಕ!

ಮಕ್ಕಳ ಅನುಕೂಲಕ್ಕಾಗಿ ಕೋವಿಡ್ ವೇಳೆ ಸ್ಥಗಿತಗೊಳಿಸಿದ್ದ ಮಾರ್ಗದಲ್ಲಿ ಸಂಚಾರವನ್ನು ಮತ್ತೆ ಆರಂಭಿಸಲಾಗುವುದು. ಹೊಸ ಬಸ್‌ (Bus) ಖರೀದಿ ಪ್ರಕ್ರಿಯೆಗೆ ಚಾಲನೆ ನೀಡಿದ ವೇಳೆ  ರಾಯಚೂರಿನ  ಘಟಕ್ಕೆ ಹೊಸ ಬಸ್‌ಗಳನ್ನು ಒದಗಿಸಲಾಗುವುದು.  ಹೊಸ  ವಾಹನಗಳ ಖರೀದಿ ಕುರಿತು ಪರಿಸ್ತಿತಿಗೆ ಅನುಗುನವಾಗಿ ತಿರ್ಮಾನ ಕೈಗೊಳ್ಳಲಾಗುವುದು ಎಂದರು. 

ದಸರಾ ದೀಪಾವಳಿಗೆ ಹೆಚ್ಚುವರಿ ಬಸ್ 

ದಸರಾ ಹಾಗೂ ದೀಪಾವಳಿ ಹಬ್ಬದ ಅವಧಿಯಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಕೆಎಸ್‌ಆರ್‌ಟಿಸಿ (KSRTC) ಬೆಂಗಳೂರಿನಿಂದ ರಾಜ್ಯ ಹಾಗೂ ಹೊರರಾಜ್ಯದ ವಿವಿಧ ಸ್ಥಳಗಳಿಗೆ ಒಂದು ಸಾವಿರ ಹೆಚ್ಚುವರಿ ಬಸ್‌ ಕಾರ್ಯಾಚರಣೆ ಮಾಡಲಿದೆ.

ಸಾರಿಗೆ ನೌಕರರಿಗೆ ಗುಡ್‌ನ್ಯೂಸ್: ಎಲ್ಲಾ ಕೇಸ್‌ಗಳನ್ನು ವಾಪಸ್ ಪಡೆಯಲು ಸರ್ಕಾರ ನಿರ್ಧಾರ

ದಸರಾ ಪ್ರಯುಕ್ತ ಅ.13ರಿಂದ 21ರ ವರೆಗೆ ಹಾಗೂ ದೀಪಾವಳಿ ಹಿನ್ನೆಲೆಯಲ್ಲಿ ಅ.29ರಿಂದ ನ.11ರ ವರೆಗೆ ಒಂದು ಸಾವಿರ ಹೆಚ್ಚುವರಿ ಬಸ್‌ಗಳನ್ನು ಕಾರ್ಯಾಚರಣೆ ಮಾಡಲಾಗುವುದು. ರಾಜ್ಯದ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ಮೈಸೂರು, ಮಡಿಕೇರಿ, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್‌ ಮೊದಲಾದ ಸ್ಥಳಗಳಿಗೆ ಹೆಚ್ಚುವರಿ ಬಸ್‌ ಸಂಚರಿಸಲಿವೆ.

ಹೊರರಾಜ್ಯದ ತಿರುಪತಿ, ವಿಜಯವಾಡ, ಹೈದರಾಬಾದ್‌, ತಿರುವನಂತಪುರಂ, ಕೊಟ್ಟಾಯಂ, ಚೆನ್ನೈ, ಕೊಯಮತ್ತೂರು, ಪೂನಾ, ಪಣಜಿ ಮೊದಲಾದ ಸ್ಥಳಗಳಿಗೆ ಹೆಚ್ಚುವರಿ ಬಸ್‌ ಕಾರ್ಯಾಚರಣೆ ಮಾಡಲಾಗುವುದು. ಹೆಚ್ಚುವರಿ ಬಸ್‌ಗಳ ಪ್ರಯಾಣ ದರದಲ್ಲಿ ಯಾವುದೇ ಹೆಚ್ಚಳ ಇರುವುದಿಲ್ಲ. ನಿಗಮದ ಅಧಿಕೃತ ಜಾಲತಾಣ ಮತ್ತು ರಾಜ್ಯ ಹಾಗೂ ಹೊರರಾಜ್ಯಗಳಲ್ಲಿರುವ ಬುಕಿಂಗ್‌ ಕೌಂಟರ್‌ಗಳಲ್ಲಿ ಮುಂಗಡ ಟಿಕೆಟ್‌ ಕಾಯ್ದಿರಿಸಬಹುದು. ಪ್ರಯಾಣಿಕರು ಈ ಹೆಚ್ಚುವರಿ ಬಸ್‌ಗಳ ಉಪಯೋಗ ಪಡೆದುಕೊಳ್ಳುವಂತೆ ಕೆಎಸ್‌ಆರ್‌ಟಿಸಿ ಕೋರಿದೆ.

click me!