
ಮಸ್ಕಿ (ಮಾ.21): ನಾಯಕ ಸಮುದಾಯದ ಬಹುದಿನಗಳ ಬೇಡಿಕೆಯಾದ ಶೇ.7.5 ಮೀಸಲಾತಿಯನ್ನು ಶೀಘ್ರದಲ್ಲೇ ಈಡೇರಿಸುವುದಾಗಿ ರಕ್ತದಲ್ಲಿ ಬರೆದುಕೊಡುವೆ ಎಂದು ಸಮಾಜ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಘೋಷಿಸಿದ್ದಾರೆ.
ಪಟ್ಟಣದಲ್ಲಿ ಶನಿವಾರ ನಡೆದ ಬಿಜೆಪಿ ಕಾರ್ಯಕರ್ತರ ಬೃಹತ್ ಸಮಾವೇಶದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಹಿಂದುಳಿದ ಸಮುದಾಯಗಳ ಹಕ್ಕುಗಳ ಒದಗಿಸಿಕೊಡಲು ನಿರಂತರವಾಗಿ ಪ್ರಯತ್ನಿಸಿಕೊಡಲಾಗುತ್ತಿದೆ. ಅದರಂತೆ ಪರಿಶಿಷ್ಟಜಾತಿಗೆ ಶೇ.15ರಿಂದ 16 ಮೀಸಲಾತಿ ಒದಗಿಸಲು ಮುಖ್ಯಮಂತ್ರಿ ಯಡಿಯೂರಪ್ಪ ಮುಂದಾಗಿದ್ದು, ಕೆಲವೇ ದಿನಗಳಲ್ಲಿ ಮೀಸಲಾತಿ ಕಲ್ಪಿಸಿಕೊಡಲಾಗುವುದು ಎಂದು ಭರವಸೆ ನೀಡಿದರು.
ಭದ್ರಾವತಿಯನ್ನು ಕಾಂಗ್ರೆಸ್ಸಿಗರು ಪಾಕಿಸ್ತಾನ ಮಾಡೋಕೆ ಹೊರಟಿದ್ದಾರಾ?: ರಾಮುಲು
ಸುದೀರ್ಘ ರಾಜಕೀಯ ಅನುಭವ ಹೊಂದಿರುವ ಯಡಿಯೂರಪ್ಪ ಅವರು ರಾಜಕೀಯದಲ್ಲಿ ಅಶ್ವಮೇಧ ಕುದುರೆಯಂತಿದ್ದು ಅವರನ್ನು ಕಟ್ಟಿಹಾಕಲು ಯಾರಿಂದಲೂ ಸಾಧ್ಯವಿಲ್ಲ. ಪರಿಣಾಮ ಮುಂದಿನ ಅವಧಿಗೂ ಅವರೇ ಮುಖ್ಯಮಂತ್ರಿಗಳಾಗಿ ಮುಂದುವರಿಯಲಿದ್ದು, ಮಸ್ಕಿ ಉಪಕದನದಲ್ಲಿ ಬಿಜೆಪಿ ಅಭ್ಯರ್ಥಿ ಗೆಲ್ಲಿಸಿದರೆ ಅಭಿವೃದ್ಧಿಗೆ ಮತ್ತಷ್ಟುಬಲ ಸಿಗಲಿದೆ ಎಂದು ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ