ನಾರಾಯಣಗುರುಗಳ ಹೆಸರಲ್ಲಿ ಶೀಘ್ರ ನಿಗಮ: ಸಚಿವ ಸುನೀಲ್‌

By Kannadaprabha News  |  First Published Aug 24, 2021, 7:44 AM IST
  • ಮಹಾನ್‌ ಸಮಾಜ ಸುಧಾರಕ, ಬಹ್ಮಶ್ರೀ ನಾರಾಯಣಗುರುಗಳ ಹೆಸರಲ್ಲಿ ನಿಗಮ ಸ್ಥಾಪಿಸಲು ಸಿದ್ಧತೆ
  • ರಾಜ್ಯ ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ. ಸುನಿಲ್‌ ಕುಮಾರ್‌ ಮಾಹಿತಿ 

ಉಡುಪಿ (ಆ.24): ಮಹಾನ್‌ ಸಮಾಜ ಸುಧಾರಕ, ಬಹ್ಮಶ್ರೀ ನಾರಾಯಣಗುರುಗಳ ಹೆಸರಲ್ಲಿ ನಿಗಮ ಸ್ಥಾಪಿಸಲು ಸಿದ್ಧತೆ ನಡೆಯುತ್ತಿರುವುದಾಗಿ ರಾಜ್ಯ ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ. ಸುನಿಲ್‌ ಕುಮಾರ್‌ ತಿಳಿಸಿದ್ದಾರೆ. 

ನಗರದ ಬನ್ನಂಜೆ ನಾರಾಯಣಗುರು ಸಭಾಂಗಣದಲ್ಲಿ ರಾಜ್ಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಉಡುಪಿ ಜಿಲ್ಲಾಡಳಿತ, ಬಿಲ್ಲವ ಸೇವಾ ಸಂಘಗಳ ಸಂಯುಕ್ತಾಶ್ರದಲ್ಲಿ ರಾಜ್ಯಮಟ್ಟದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಆಚರಣೆಯನ್ನು ಉದ್ಘಾಟಿಸಿ ಮಾತನಾಡುವ ವೇಳೆ ಈ ಬಗ್ಗೆ ಮಾಹಿತಿ ನೀಡಿದ ಅವರು, ರಾಜ್ಯದಲ್ಲಿ ನಾರಾಯಣಗುರು ನಿಗಮವನ್ನು ಸ್ಥಾಪಿಸುವ ಪ್ರಸ್ತಾಪ ಇದೆ. ಈ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗಿದ್ದು, ಅವರು ಒಪ್ಪಿಗೆ ನೀಡಿದ್ದಾರೆ. ನಿಗಮದ ರೂಪುರೇಷೆಗಳನ್ನು ನಿರ್ಧರಿಸಿ ಸದ್ಯವೇ ಘೋಷಣೆ ಮಾಡಲಾಗುತ್ತದೆ ಎಂದರು.

Tap to resize

Latest Videos

ರೇಷನ್‌ ಕಾರ್ಡ್‌ ಹೊಂದಿರುವ ಎಲ್ಲ ಮನೆಗೂ ವಿದ್ಯುತ್‌ ಸಂಪರ್ಕ

ಈ ನಿಗಮದ ಮೂಲಕ ಹಿಂದುಳಿದ ಸಮಾಜದ ಆರ್ಥಿಕ, ಶೈಕ್ಷಣಿಕ ಅಭಿವೃದ್ಧಿಗೆ ಕಾರ್ಯಯೋಜನೆ ಸಿದ್ಧಪಡಿಸಲಾಗುತ್ತದೆ. ಸಮುದಾಯಗಳ ಮಧ್ಯೆ ಸಂಘರ್ಷಕ್ಕೆಡೆ ಮಾಡದೆ, ಯಾರದೇ ಭಾವನೆಗಳನ್ನು ಕೆರಳಿಸದೆ ಸಮಾಜವನ್ನು ಒಗ್ಗೂಡಿಸಿದ ನಾರಾಯಣ ಗುರುಗಳ ಆದರ್ಶವನ್ನು ಇಂದು ಮತ್ತೊಮ್ಮೆ ಸಮಾಜ ಪರಿವರ್ತನೆಗೆ ಬಳಸಿಕೊಳ್ಳಬೇಕಾಗಿದೆ ಎಂದರು.

ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ರಘುಪತಿ ಭಟ್‌ ಇದ್ದರು.

click me!