
ಬೆಂಗಳೂರು, (ನ.30): ನೈರುತ್ಯ ರೈಲ್ವೆ ಇಲಾಖೆಯು ರೈಲು ನಿಲ್ದಾಣಗಳಲ್ಲಿ ಪ್ಲಾಟ್ ಫಾರ್ಮ್ ಟಿಕೆಟ್ ದರ ಹೆಚ್ಚಳ ಮಾಡಿದೆ. ರೈಲ್ವೆ ನಿಲ್ದಾಣದ ಪ್ಲಾಟ್ ಫಾರ್ಮ್ ಟಿಕೆಟ್ 10 ರೂಪಾಯಿ ಇದ್ದಿದ್ದನ್ನು 50 ರೂ.ಗೆ ಏರಿಕೆ ಮಾಡಲಾಗಿದೆ.
ಕೊರೋನಾ ವೈರಸ್ ತಡೆಗಟ್ಟುವ ನಿಟ್ಟಿನಲ್ಲಿ ಹೆಚ್ಚು ಜನ ಸೇರದಂತೆ ಈ ನಿರ್ಧಾರ ಕೈಗೊಂಡಿದೆಯಂತೆ. ಅಂದ್ರೆ ಕೊರೋನಾ ಹೆಸರಲ್ಲಿ ಜನರ ಹಣ ಲೂಟಿಗಿಳಿದಂತಾಗಿದೆ.
ಪ್ಲಾಸ್ಟಿಕ್ ಮುಕ್ತ ಭಾರತ: ರೈಲು ನಿಲ್ದಾಣಗಳಲ್ಲಿನ್ನು ಮಣ್ಣಿನ ಕಪ್‌ನಲ್ಲಿ ಚಹಾ!
ಪ್ರಮುಖ ರೈಲ್ವೆ ನಿಲ್ದಾಣಗಳಾದ ಕೃಷ್ಣರಾಜಪುರಂ, ಬಂಗಾರ ಪೇಟೆ, ತುಮಕೂರು, ಹೊಸೂರು, ಧರ್ಮಪುರಿ, ಕೆಂಗೇರಿ, ಮಂಡ್ಯ , ಹಿಂದೂಪುರ, ಪೆನುಕೊಂಡ, ಯಲಹಂಕ, ಬಾಣಸವಾಡಿ, ಕಾರ್ಮೆಲಾರಂ ಮತ್ತು ವೈಟ್ ಫೀಲ್ಡ್ ರೈಲ್ವೆ ನಿಲ್ದಾಣದಲ್ಲಿ ಪ್ಲಾಟ್ ಫಾರ್ಮ್ ಟಿಕೆಟ್ 10 ರೂಪಾಯಿ ಇದ್ದಿದ್ದನ್ನು 50 ರೂ.ಗೆ ಏರಿಕೆ ಮಾಡಲಾಗಿದೆ. ಇಂದಿನಿಂದ ಅಂದ್ರೆ 30-11-2020 ರಿಂದ 31-12-2020ರ ವರೆಗೆ ಪರಿಷ್ಕೃತ ದರ ಜಾರಿ ಬರಲಿದೆ.
ಜನಸಂದಣೆ ತಡೆಯಲು ಇದೊಂದೇ ಮಾರ್ಗ ನಾ..? ಪ್ರಯಾಣಿಕರಿಗೆ ಮಾತ್ರ ರೈಲ್ವೆ ನಿಲ್ದಾಣದೊಳಗೆ ಪ್ರವೇಶ ಮಾಡುವ ಮೂಲಕ ಜನಸಂದಣೆ ತಡೆಯಬಹುದಲ್ಲವೇ? ಇಲ್ಲ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ