ರಾಜ್ಯದಲ್ಲಿ ಬಿತ್ತನೆ ಬೀಜ ದರ ಭಾರೀ ಏರಿಕೆ: ರೈತರಿಗೆ ಶಾಕ್..!

By Kannadaprabha News  |  First Published May 29, 2024, 9:39 AM IST

ಬಿತ್ತನೆ ಬೀಜಕ್ಕಾಗಿ ರೈತ ಸಂಪರ್ಕ ಕೇಂದ್ರಗಳನ್ನು ಸಂಪರ್ಕಿಸಿದವರಿಗೆ ದೊಡ್ಡ ಆಘಾತ ಕಾದಿದೆ. ಬಿತ್ತನೆ ಬೀಜದ ದರ ಗಗನಕ್ಕೇರಿದ್ದು, ಬರದಿಂದ ಕಂಗೆಟ್ಟ ರೈತರಿಗೆ ಬೆಲೆ ಏರಿಕೆಯ ಬರೆ ಬಿದ್ದಿದೆ. 


• ಸಂದೀಪ್ ವಾಗ್ಗೆ/ಮಹೇಶ ಛಬ್ಬಿ 

ಮಂಗಳೂರು/ ಗದಗ(ಮೇ.29):  ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಉತ್ತಮವಾಗಿರುವುದರಿಂದ ಈ ಬಾರಿಯ ಮುಂಗಾರು ಹಂಗಾಮಿನ ಬಿತ್ತನೆಗೆ ರಾಜ್ಯಾದ್ಯಂತ ರೈತರು ಸಜ್ಜಾಗಿದ್ದಾರೆ. ಆದರೆ, ಬಿತ್ತನೆ ಬೀಜಕ್ಕಾಗಿ ರೈತ ಸಂಪರ್ಕ ಕೇಂದ್ರಗಳನ್ನು ಸಂಪರ್ಕಿಸಿದವರಿಗೆ ದೊಡ್ಡ ಆಘಾತ ಕಾದಿದೆ. ಬಿತ್ತನೆ ಬೀಜದ ದರ ಗಗನಕ್ಕೇರಿದ್ದು, ಬರದಿಂದ ಕಂಗೆಟ್ಟ ರೈತರಿಗೆ ಬೆಲೆ ಏರಿಕೆಯ ಬರೆ ಬಿದ್ದಿದೆ! ವಿವಿಧ ಭತ್ತದ ತಳಿಗಳ ಬಿತ್ತನೆ ಬೀಜದ ದರ ಕ್ವಿಂಟಾಲ್‌ಗೆ 675 ರು.ನಿಂದ 1,875 ರು. ವರೆಗೂ ಏರಿಕೆಯಾಗಿದೆ. ಹೆಸರು (5 ಕೆಜಿ) 501 ರಿಂದ 785ರವರೆಗೆ, ತೊಗರಿ (5 ಕೆಜಿ) 525 ರಿಂದ 770ರವರೆಗೆ ಏರಿಕೆಯಾಗಿದೆ.  2 (3 ໖) 202 0 2850 ವರೆಗೂ ಏರಿಕೆಯಾಗಿದೆ. ಹೀಗಾಗಿ, ಸದ್ಯಕ್ಕೆ ಬಿತ್ತನೆ ಬೀಜದ ದಾಸ್ತಾನು ಸಾಕಷ್ಟಿದ್ದರೂ, ದರ ಏರಿಕೆಯಾಗಿರುವುದು ಮಾತ್ರ ಬಡ ರೈತರಿಗೆ ಹೊರೆಯಾಗಿದೆ.

Tap to resize

Latest Videos

undefined

ಭತ್ತದ ಯಾವ ತಳಿಗೆ ಎಷ್ಟು?: 

ಕಳೆದ ವರ್ಷಕ್ಕೆ ಹೋಲಿಸಿದರೆ ವಿವಿಧ ಭತ್ತದ ತಳಿಗಳ ದರ ಕ್ವಿಂಟಾಲ್‌ವೊಂದಕ್ಕೆ 675 ರು.ನಿಂದ 1,875 ರು.ವರೆಗೂ ಏರಿಕೆಯಾಗಿದೆ.

ಭೀಕರ ಬರದಿಂದ ಕಂಗೆಟ್ಟಿದ್ದ ಜನತೆಗೆ ಸಂತಸದ ಸುದ್ದಿ: ಈ ಸಲ ವಾಡಿಕೆಗಿಂತ ಹೆಚ್ಚು ಮಳೆ

ದರ ಹೆಚ್ಚಳ ಏಕೆ?:

ಭತ್ತದ ಬಿತ್ತನೆ ಬೀಜಕ್ಕೆ ಪ್ರತಿ ವರ್ಷದಂತೆ ಈ ಬಾರಿಯೂ ರಾಜ್ಯ ಸರ್ಕಾರ ಕ್ವಿಂಟಾಲ್‌ಗೆ 800 ರು. ಸಬ್ಸಿಡಿ ನೀಡಿದೆ. ಆದರೆ, ಭತ್ತದ ಮಾರುಕಟ್ಟೆ ದರ ಭಾರೀ ಏರಿಕೆಯಾಗಿರುವುದರಿಂದ ಬಿತ್ತನೆ ಬೀಜಕ್ಕೂ ಅದರ ಬಿಸಿ ತಟ್ಟಿದೆ.

ಸರ್ಕಾರಿ ಸ್ವಾಮ್ಯದ ಕರ್ನಾಟಕ ರಾಜ್ಯ ಬೀಜ ನಿಗಮವು ಪ್ರತಿ ವರ್ಷ ರೈತರಿಂದ ಬೀಜ ಖರೀದಿ ಮಾಡಲು ಒಪ್ಪಂದ ಮಾಡಿಕೊಳ್ಳುತ್ತದೆ. ಅದರಂತೆ ಕಳೆದ ವರ್ಷ ಒಪ್ಪಂದ ಮಾಡುವಾಗ ಆಗಿನ ದರದಂತೆ ನಿಗದಿ ಮಾಡಲಾಗಿತ್ತು. ನಂತರದ ದಿನಗಳಲ್ಲಿ ರಾಜ್ಯದಲ್ಲಿ ಭತ್ತ ಉತ್ಪಾದನೆ ತೀವ್ರವಾಗಿ ಕುಸಿದಿದ್ದರಿಂದ ಮಾರುಕಟ್ಟೆ ದರ ದಿಢೀರನೆ ಹೆಚ್ಚಳವಾಗಿತ್ತು. ಬೀಜ ನಿಗಮವು ರೈತರಿಂದ ಮಾರುಕಟ್ಟೆ ದರಕ್ಕೆ ಬಿತ್ತನೆ ಬೀಜ ಕೊಳ್ಳದೆ ಇದ್ದರೆ ರೈತರು ಹೆಚ್ಚು ದರ ಸಿಗುವ ಮುಕ್ತ ಮಾರುಕಟ್ಟೆಯಲ್ಲಿ ಮಾರಾಟ ಮಾಡುವ ಸಾಧ್ಯತೆಯಿತ್ತು. ಹಾಗಾಗಿ, ಮಾರುಕಟ್ಟೆ ದರಕ್ಕೆ ಅನುಗುಣವಾಗಿ ಬಿತ್ತನೆ ಬೀಜ ಖರೀದಿಸಿದ್ದರಿಂದ ಈ ಬಾರಿ ದರ ಏರಿಕೆಗೆ ಕಾರಣವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಳೆದ ವರ್ಷ ಭತ್ತದ ಉತ್ಪಾದನೆ ತೀವ್ರವಾಗಿ ಕುಸಿದಿದ್ದರಿಂದ ಖರೀದಿ ದರ ಹೆಚ್ಚಳ ವಾಗಿತ್ತು. ಸಹಜವಾಗಿ ಬಿತ್ತನೆ ಬೀಜದ ದರವೂ ಜಾಸ್ತಿಯಾಗಿದೆ. ಬಿತ್ತನೆ ಬೀಜವನ್ನು ರೈತರಿಂದಲೇ ಖರೀದಿ ಮಾಡುವುದರಿಂದ ದರ ಹೆಚ್ಚಳದ ಲಾಭವೂ ರೈತರಿಗೇ ತಲುಪಿದೆ ಎಂದು ದ.ಕ. ಜಿಲ್ಲಾ ಕೃಷಿ ಇಲಾಖೆ ಜಂಟಿ ನಿರ್ದೇಶಕ ಕೆಂಪೇಗೌಡ ತಿಳಿಸಿದ್ದಾರೆ.  

ಕರ್ನಾಟಕಕ್ಕೆ ಮಹಾರಾಷ್ಟ್ರದೊಂದಿಗೂ ಶುರುವಾಗುತ್ತಾ ನೀರಿನ ಸಮರ? ಇದೇನಿದು ಹೊಸ ಕುತಂತ್ರ?

ಹೆಸರು ಬೀಜವನ್ನು ಹೊರಗಡೆ ಖರೀದಿಸಿದರೆ 1 ಕೆಜಿಗೆ ₹130ರಂತೆ ಸಿಗುತ್ತದೆ. ರೈತ ಸಂಪರ್ಕ ಕೇಂದ್ರದಲ್ಲಿ ಸಬ್ಸಿಡಿ ದರದಲ್ಲಿ 5 ಕೆಜಿಗೆ ₹785 ಸರ್ಕಾರ ದರ ನಿಗದಿ ಮಾಡಿದೆ. ಯಾವ ಅರ್ಥದಲ್ಲಿ ರೈತರಿಗೆ ಸಬ್ಸಿಡಿ ದರದಲ್ಲಿ ಬೀಜ ವಿತರಣೆ ಮಾಡಲಾಗುತ್ತಿದೆ ಎಂಬುದೇ ತಿಳಿಯದಂತಾಗಿದೆ ಎಂದು ಗದಗ ಜಿಲ್ಲೆಯ ರೈತ ದೇವರಾಜ ಸಂಗನಪೇಟಿ ಹೇಳಿದ್ದಾರೆ. 

ಬೇರೆ ರಾಜ್ಯಗಳಿಗಿಂತ ನಮ್ಮಲ್ಲೇ ಕಡಿಮೆ ದರ

2023-24ನೇ ಸಾಲಿನಲ್ಲಿ ಭೀಕರ ಬರಗಾಲದಿಂದಾಗಿ ರಾಜ್ಯದಲ್ಲಿ ಬೀಜೋತ್ಪಾದನೆ ಗಣನೀಯವಾಗಿ ಕುಂಠಿತ ವಾಗಿತ್ತು. ಈ ಹಿನ್ನೆಲೆಯಲ್ಲಿ ಬಿತ್ತನೆ ಬೀಜದ ಮಾರಾಟದ ದರ ಏರಿಕೆಯಾಗಿದೆ. ಬಿತ್ತನೆ ಬೀಜಗಳ ದರ ಏರಿಕೆಯು ಎಲ್ಲ ರಾಜ್ಯಗಳಲ್ಲಿಯೂ ಆಗಿದ್ದು, ಉಳಿದ ರಾಜ್ಯಗಳಿಗೆ ಹೋಲಿಸಿದರೆ ನಮ್ಮ ರಾಜ್ಯದಲ್ಲಿ ಬಿತ್ತನೆ ಬೀಜಗಳ ದರ ಕಡಿಮೆ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. 

click me!