ಹತ್ತು ವರ್ಷಗಳ ಹಿಂದೆ ನಡೆದ ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣದ ನ್ಯಾಯಬದ್ಧ ತನಿಖೆಗೆ ಮೈಸೂರಿನ ಒಡನಾಡಿ ಸಂಸ್ಥೆಯಲ್ಲಿ ನಡೆದ ಸಂವಾದ ಕಾರ್ಯಕ್ರಮದಲ್ಲಿ ಆಗ್ರಹಿಸಲಾಯಿತು.
ಮೈಸೂರು (ಜು.13): ಹತ್ತು ವರ್ಷಗಳ ಹಿಂದೆ ನಡೆದ ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣದ ನ್ಯಾಯಬದ್ಧ ತನಿಖೆಗೆ ಮೈಸೂರಿನ ಒಡನಾಡಿ ಸಂಸ್ಥೆಯಲ್ಲಿ ನಡೆದ ಸಂವಾದ ಕಾರ್ಯಕ್ರಮದಲ್ಲಿ ಆಗ್ರಹಿಸಲಾಯಿತು. ಇಂದು ಮೈಸೂರಿನ ಒಡನಾಡಿ ಸಂಸ್ಥೆಯಲ್ಲಿ ಪ್ರಕರಣದ ನ್ಯಾಯಯುತ ತನಿಖೆಗೆ ಆಗ್ರಹಿಸಿ ಪ್ರಗತಿಪರ ಸಂಘಟನೆಗಳ ಒಕ್ಕೂಟ, ಜನತಂತ್ರ ಜಾಗೃತಿ ವೇದಿಕೆ ಮತ್ತು ಒಡನಾಡಿ ಸಂಸ್ಥೆಗಳ ಸಂಯುಕ್ತಾಶ್ರಯದ ಸಂವಾದ ಕಾರ್ಯಕ್ರಮ ನಡೆಯಿತು. ಒಡನಾಡಿ ಸೇವಾ ಸಂಸ್ಥೆ ವತಿಯಿಂದ ಒಡನಾಡಿ ಸಂಸ್ಥಾಪಕರಾದ ಸ್ಟ್ಯಾನ್ಲಿ ಮತ್ತು ಪರಶುರವರ ನೇತೃತ್ವದಲ್ಲಿ ಆಯೋಜನೆ ಮಾಡಲಾಗಿತ್ತು.
ಸೌಜನ್ಯ ಅತ್ಯಾಚಾರ ಹತ್ಯೆ ಪ್ರಕರಣದಲ್ಲಿ ಆಗುತ್ತಿರುವ ನ್ಯಾಯ ವಿಳಂಬದ ಹಿನ್ನೆಲೆಯಲ್ಲಿ ಪ್ರಕರಣ ಕುರಿತು ಒಡನಾಡಿ ಸಂಸ್ಥೆ ಮುಖ್ಯಸ್ಥರು ಸ್ವಹಿತಾಸಕ್ತಿ ವಹಿಸಿದ್ದು ಸಂವಾದ ಕಾರ್ಯಕ್ರಮದಲ್ಲಿ ಮೃತ ಬಾಲಕಿ ತಾಯಿ ಸೌಜನ್ಯ, ಸಹೋದರಿ, ಸೋದರ ಮಾವ ವಿಠಲ್ ಗೌಡ, ಒಡನಾಡಿ ಸಂಸ್ಥೆಯ ಸ್ಟ್ಯಾನ್ಲಿ ಮತ್ತು ಪರಶು, ಪ್ರಗತಿಪರ ಚಿಂತಕರಾದ ಸಿ ಬಸವಲಿಂಗಯ್ಯ, ನಾ ದಿವಾಕರ್, ಪ್ರೊಫೆಸರ್ ಕಾಳೇಗೌಡ ನಾಗವಾರ, ಸವಿತಾ ಪ ಮಲ್ಲೇಶ್, ಸೇರಿದಂತೆ ಇತರ ಪ್ರಮುಖರು ಭಾಗಿಯಾಗಿದ್ದರು.
ಹಿಂದೂ ಕಾರ್ಯಕರ್ತರು ಜೋಪಾನವಾಗಿರಿ: ಶ್ರೀರಾಮುಲು ಕರೆ
ನನ್ನ ಮಗಳ ಸಾವಿಗೆ ಇನ್ನೂ ನ್ಯಾಯ ಸಿಕ್ಕಿಲ್ಲ: ಸೌಜನ್ಯ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡುವ ಅವರ ತಾಯಿ ಮಗಳನ್ನು ನೆನೆಸಿಕೊಂಡು ಕಣ್ಣೀರಿಟ್ಟಿದ್ದಾರೆ. ಜೊತೆಗೆ ಮಗಳ ಸಾವಿನ ಬಳಿಕ ನಡೆದ ಘಟನೆಗಳನ್ನು ಎಳೆ ಎಳೆಯಾಗಿ ಬಿಚ್ಚಿಟ್ಟಿದ್ದಾರೆ. ಮಗಳ ಸಾವಿನ ಸತ್ಯಾಂಶ ಮುಚ್ಚಿ ಹಾಕುವ ಸಲುವಾಗಿ ನನ್ನನ್ನು ಮಾನಸಿಕ ಅಸ್ವಸ್ಥತೆ ಎಂದು ಹೇಳಿದರು. ನನ್ನ ಮಗಳ ಸಾವಿಗೆ ಇನ್ನೂ ನ್ಯಾಯ ಸಿಕ್ಕಿಲ್ಲ. ನ್ಯಾಯ ಸಿಗುವ ಬಗ್ಗೆಯೂ ಅನುಮಾನವಿದೆ. ಆದರೂ ಇಷ್ಟಕ್ಕೆ ಸುಮ್ಮನಾಗದೇ ನನ್ನ ಮಗಳ ಸಾವಿಗೆ ನ್ಯಾಯ ಸಿಗುವವರೆಗೂ ಹೋರಾಟ ನಡೆಸುತ್ತೇನೆ ಎಂದು ಸೌಜನ್ಯ ಸಂವಾದದಲ್ಲಿ ಅವರ ತಾಯಿ ಕುಸುಮ ಹೇಳಿದರು.
ಘಟನೆ ಹಿನ್ನೆಲೆ: ಉಜಿರೆ ಎಸ್.ಡಿ.ಎಂ ಕಾಲೇಜು ವಿದ್ಯಾರ್ಥಿನಿ ಆಗಿದ್ದ ಸೌಜನ್ಯಳನ್ನು ಅಪಹರಿಸಿ ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿತ್ತು. 2012ರ ಅಕ್ಟೋಬರ್ 10 ರಂದು ಧರ್ಮಸ್ಥಳದ ಬಳಿ ಸೌಜನ್ಯ ಮೃತದೇಹ ಪತ್ತೆಯಾಗಿತ್ತು. ಪ್ರಕರಣ ಸಂಬಂಧ ಆರೋಪಿ ಸಂತೋಷ್ ರಾವ್ ಎಂಬಾತನನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದರು. ಬಳಿಕ ಪೊಲೀಸರು ಸರಿಯಾಗಿ ತನಿಖೆ ನಡೆಸಿಲ್ಲ ಎಂಬ ಆರೋಪ ವ್ಯಕ್ತವಾಗಿತ್ತು. ಹೀಗಾಗಿ ಹಲವು ಹೋರಾಟಗಳ ಬಳಿಕ ಪ್ರಕರಣವನ್ನು ಸಿಬಿಐಗೆ ಒಪ್ಪಿಸಲಾಗಿತ್ತು. ಈಗ 11 ವರ್ಷಗಳ ಸುದೀರ್ಘ ವಿಚಾರಣೆ ಬಳಿಕ ಸಿಬಿಐ ಕೋರ್ಟ್ ಅಂತಿಮ ತೀರ್ಪು ನೀಡಿದೆ.
ಜೈನಮುನಿ ಹತ್ಯೆ ಸಿಬಿಐ ತನಿಖೆಯಾಗಲಿ: ಈಶ್ವರಪ್ಪ ಒತ್ತಾಯ
ಧರ್ಮಸ್ಥಳ ಗ್ರಾಮದ ಪಾಂಗಾಳ ನಿವಾಸಿ ಚಂದಪ್ಪ ಗೌಡ ಮತ್ತು ಕುಸುಮಾವತಿ ದಂಪತಿಯ ಪುತ್ರಿ ಸೌಜನ್ಯ ನಿಗೂಢ ಕೊಲೆ ಪ್ರಕರಣದಲ್ಲಿ ಆರೋಪಿಗಳು ಯಾರು ಎನ್ನುವುದು ಇನ್ನೂ ನಿಗೂಢವಾಗಿಯೇ ಉಳಿದುಕೊಂಡಂತಾಗಿದೆ. ಉಜಿರೆಯ ಎಸ್‌ಡಿಎಂ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಸೌಜನ್ಯ 2012ರ ಅಕ್ಟೋಬರ್ 9ರಂದು ಸಂಜೆ ಕಾಲೇಜಿನಿಂದ ಮನೆಗೆ ಬರುತ್ತಿದ್ದಾಗ ನಾಪತ್ತೆಯಾಗಿದ್ದಳು. ಮರುದಿನ ರಾತ್ರಿ ಮಣ್ಣಸಂಕ ಬಳಿ ಆಕೆಯ ಮೃತದೇಹ ಪತ್ತೆಯಾಗಿತ್ತು. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಮತ್ತು ಕೊಲೆ ಪ್ರಕರಣ ದಾಖಲು ಮಾಡಲಾಗಿತ್ತು.