
ಬೆಂಗಳೂರು (ಡಿ.23): ರಾಜ್ಯ,ಹೊರರಾಜ್ಯಗಳ ಸ್ಪಾಗಳಲ್ಲಿ ಹೈಟೆಕ್ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಆರೋಪಿಯನ್ನು ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಮಹಿಳಾ ಸಂರಕ್ಷಣಾ ದಳದ ಅಧಿಕಾರಿಗಳು ಗೂಂಡಾ ಕಾಯ್ದೆಯಡಿ ಬಂಧಿಸಿದ್ದಾರೆ.
ಮಹದೇವಪುರದ ಅನಿಲ್ ಕುಮಾರ್ ಅಲಿಯಾಸ್ ಅನಿಲ್ ರೆಡ್ಡಿ (40) ಬಂಧಿತ. ಆರೋಪಿ ಹೊರರಾಜ್ಯ ಹಾಗೂ ವಿದೇಶಿ ಮಹಿಳೆಯರಿಗೆ ಸ್ಪಾಗಳಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ, ಹೆಚ್ಚಿನ ಸಂಬಳದ ಆಮಿಷವೊಡ್ಡಿ ಅಕ್ರಮ ಬಂಧನದಲ್ಲಿ ಇರಿಸಿಕೊಂಡು ಹೈಟೆಕ್ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ. ಈತನ ಮಾನವ ಕಳ್ಳ ಸಾಗಣೆ ಹಾಗೂ ವೇಶ್ಯವಾಟಿಕೆ ದಂಧೆ ಪರಿಣಾಮಕಾರಿಯಾಗಿ ನಿಯಂತ್ರಿಸುವ ನಿಟ್ಟಿನಲ್ಲಿ ಗೂಂಡಾ ಕಾಯ್ದೆಯಡಿ ಬಂಧಿಸಿ ಜೈಲಿಗಟ್ಟಲಾಗಿದೆ.
ಅತೀ ಹೆಚ್ಚು ವೇಶ್ಯಾವಾಟಿಕೆ ನಡೆಯುವ ರಾಜ್ಯವಿದು: ಕರ್ನಾಟಕಕ್ಕೆ ಎಷ್ಟನೇ ಸ್ಥಾನ?
ಆರೋಪಿ ಅನಿಲ್ ಕುಮಾರ್ ವಿರುದ್ಧ ಆಂಧ್ರಪ್ರದೇಶ ಹಾಗೂ ಮಹದೇವಪುರ ಪೊಲೀಸ್ ಠಾಣೆಗಳಲ್ಲಿ ಮಾನವ ಕಳ್ಳ ಸಾಗಣೆ, ಅತ್ಯಾಚಾರ ಸೇರಿ 4 ಅಪರಾಧ ಪ್ರಕರಣಗಳು ದಾಖಲಾಗಿವೆ. ಆದರೂ ಈತ ವೃತ್ತಿಪರ ವೇಶ್ಯಾಗೃಹಗಳನ್ನು ನಡೆಸುವುದನ್ನು ಮುಂದುವರೆಸಿದ್ದ. ಹೀಗಾಗಿ ಮಹದೇವಪುರ ಠಾಣೆ ಪೊಲೀಸರು ಹಾಗೂ ಸಿಸಿಬಿ ಅಧಿಕಾರಿಗಳು ಆರೋಪಿ ಅನಿಲ್ ಕುಮಾರ್‌ನನ್ನು ಗೂಂಡಾ ಕಾಯ್ದೆಯಡಿ ಬಂಧಿಸಲು ಸಲ್ಲಿಸಿದ್ದ ಪ್ರಸ್ತಾವನೆಗೆ ನಗರ ಪೊಲೀಸ್ ಆಯುಕ್ತರು ಸಮ್ಮತಿ ನೀಡಿದ ಮೇರೆಗೆ ಆರೋಪಿಯನ್ನು ಬಂಧಿಸಿ ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ಒಪ್ಪಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ