ತೋಟದ ಮನೆಯಲ್ಲಿ ಹಾಯಾಗಿರುವ ಸ್ಪೀಕರ್‌ ರಮೇಶ್‌ ಕುಮಾರ್‌

Published : Jan 19, 2019, 08:51 AM IST
ತೋಟದ ಮನೆಯಲ್ಲಿ ಹಾಯಾಗಿರುವ ಸ್ಪೀಕರ್‌ ರಮೇಶ್‌ ಕುಮಾರ್‌

ಸಾರಾಂಶ

ಕರ್ನಾಟಕ ರಾಜಕೀಯ ಕ್ಷೇತ್ರದಲ್ಲಿ ಪಕ್ಷಗಳ ನಡುವೆ ಬಿರುಸಿನ ಚಟುವಟಿಕೆಗಳು ನಡೆಯುತ್ತಿವೆ. ಒಂದೆಡೆ ಬಿಜೆಪಿ ಅತೃಪ್ತ ಶಾಸಕರನ್ನು ಒಲಿಸಿಕೊಳ್ಳಲು ಯತ್ನಿಸುತ್ತಿದ್ದರೆ, ಇತ್ತ ಕಾಂಗ್ರೆಸ್ ಶಾಸಕರು ರೆಸಾರ್ಟ್ಗೆ ತೆರಳಿದ್ದಾರೆ. ಇಷ್ಟೆಲ್ಲಾ ಬೆಳವಣಿಗಗಳು ನಡೆಯುತ್ತಿದ್ದರೂ ಸ್ಪೀಕರ್ ರಮೇಶ್ ಕುಮಾರ್ ಮಾತ್ರ ತಮ್ಮ ತೋಟದ ಮನೆಯಲ್ಲಿ ಹಾಯಾಗಿದ್ದಾರೆ.

ಕೋಲಾರ[ಜ.19]: ‘ಆಪರೇಷನ್‌ ಕಮಲ’ದ ಆತಂಕ ರಾಜ್ಯ ಸರ್ಕಾರದಲ್ಲಿ ಮನೆ ಮಾಡಿದ್ದರೂ ಸ್ಪೀಕರ್‌ ರಮೇಶ್‌ ಕುಮಾರ್‌ ಅವರು ಊರಿನಲ್ಲಿ ಹಾಯಾಗಿ ಓಡಾಡಿಕೊಂಡಿದ್ದಾರೆ. ತಮ್ಮೂರು ಅಡ್ಡಗಲ್‌ನ ತೋಟದ ಫಾರಂನಲ್ಲಿ ಪತ್ನಿ ವಿಜಯಮ್ಮ ಜತೆಗೆ ಆರಾಮಾಗಿ ದಿನ ಕಳೆಯುತ್ತಿದ್ದಾರೆ. ತೋಟ, ಕುರಿ, ಕೋಳಿ, ಬೆಳೆಗಳ ಮಧ್ಯೆ ಹಾಯಾಗಿದ್ದಾರೆ.

ಎರಡು ದಿನಗಳ ಹಿಂದೆ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಜತೆ ರಾಜ್ಯ ರಾಜಕೀಯ ಬೆಳವಣಿಗೆಗಳ ಕುರಿತು ರಮೇಶ್‌ ಕುಮಾರ್‌ ಗಂಭೀರವಾದ ಚರ್ಚೆ ನಡೆಸಿದ್ದರು ಎನ್ನಲಾಗಿದೆ. ಇದಾದ ಬಳಿಕ ಶ್ರೀನಿವಾಸಪುರಕ್ಕೆ ತೆರಳಿದ್ದರು ಎನ್ನಲಾಗುತ್ತಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಕರ್ನಾಟಕದಲ್ಲಿ ನಿಮ್ಹಾನ್ಸ್ ಮಾದರಿಯ ಮತ್ತಷ್ಟು ಸಂಸ್ಥೆಗಳು ಅಗತ್ಯ: ಸಚಿವ ಶರಣ ಪ್ರಕಾಶ್ ಪಾಟೀಲ್
ಡಿಕೆಶಿ ಸಿಎಂ ಆದ್ರೆ ಅವರ ಸಂಪುಟದಲ್ಲಿ ನಾನು ಸಚಿವ ಆಗೋಲ್ಲ: ಕೆಎನ್ ರಾಜಣ್ಣ ದೊಡ್ಡ ನಿರ್ಧಾರ!