ಶಾಲಾ ಮಕ್ಕಳಿಗೆ ವಿಶೇಷ ಬಸ್‌ ಸೌಲಭ್ಯ: ಸಿಎಂ ಬೊಮ್ಮಾಯಿ

By Govindaraj S  |  First Published Dec 5, 2022, 2:20 AM IST

ರಾಜ್ಯಾದ್ಯಂತ ಶಾಲಾ ಮಕ್ಕಳಿಗೆ ವಿಶೇಷ ಸಾರಿಗೆ ಸೌಲಭ್ಯ ಕಲ್ಪಿಸುವ ಯೋಜನೆ ಜಾರಿಗೊಳಿಸಲಾಗುತ್ತಿದ್ದು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳಿಗೆ ಶಾಲಾರಂಭ ಹಾಗೂ ಮುಕ್ತಾಯದ ವೇಳೆ ಸಮಯಕ್ಕೆ ಸರಿಯಾಗಿ ಬಸ್‌ ಓಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.


ಹಾವೇರಿ (ಡಿ.05): ರಾಜ್ಯಾದ್ಯಂತ ಶಾಲಾ ಮಕ್ಕಳಿಗೆ ವಿಶೇಷ ಸಾರಿಗೆ ಸೌಲಭ್ಯ ಕಲ್ಪಿಸುವ ಯೋಜನೆ ಜಾರಿಗೊಳಿಸಲಾಗುತ್ತಿದ್ದು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳಿಗೆ ಶಾಲಾರಂಭ ಹಾಗೂ ಮುಕ್ತಾಯದ ವೇಳೆ ಸಮಯಕ್ಕೆ ಸರಿಯಾಗಿ ಬಸ್‌ ಓಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ದಿನವಿಡಿ ಸ್ವಕ್ಷೇತ್ರ ಸುತ್ತಿದ ಸಿಎಂ, ಹಾವೇರಿ ಜಿಲ್ಲೆ ಶಿಗ್ಗಾಂವಿಯಲ್ಲಿ ಭಾನುವಾರ ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾದರು. ಎನ್‌ಡಬ್ಲ್ಯೂಕೆಎಸ್‌ಆರ್‌ಟಿಸಿ ವಾಹನ ಚಾಲನಾ ತರಬೇತಿ ಕೇಂದ್ರಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.

ರಾಜ್ಯಾದ್ಯಂತ ಶಾಲಾ ಮಕ್ಕಳಿಗೆ ವಿಶೇಷ ಸಾರಿಗೆ ಸೌಲಭ್ಯ ಕಲ್ಪಿಸುವ ಯೋಜನೆ ಜಾರಿಗೊಳಿಸಲಾಗುವುದು. ಖಾಸಗಿಯವರ ಸಹಭಾಗಿತ್ವದಲ್ಲಿ ಈ ಯೋಜನೆ ಜಾರಿಗೆ ಚಿಂತನೆ ನಡೆದಿದ್ದು, ಈ ಯೋಜನೆಯಡಿ ಶಿಕ್ಷಕರು ಹಾಗೂ ವಿದ್ಯಾರ್ಥಿಗಳಿಗಾಗಿಯೇ ಶಾಲಾರಂಭ ಹಾಗೂ ಮುಕ್ತಾಯದ ವೇಳೆ ಸಮಯಕ್ಕೆ ಸರಿಯಾಗಿ ನಿಗದಿತ ಮಾರ್ಗದಲ್ಲಿ ಬಸ್‌ ಓಡಿಸಲಾಗುವುದು. ಇದರಿಂದಾಗಿ ವಿದ್ಯಾರ್ಥಿಗಳಿಗೆ ಸಮಯಕ್ಕೆ ಸರಿಯಾಗಿ ಶಾಲೆಗೆ ತಲುಪಲು ಅನುಕೂಲವಾಗಲಿದೆ ಎಂದರು. ಅಲ್ಲದೆ, ಈ ಯೋಜನೆಯನ್ನು ತಮ್ಮ ಕ್ಷೇತ್ರದಿಂದಲೇ ಆರಂಭಿಸುವಂತೆ ವಾಯವ್ಯ ಸಾರಿಗೆ ಸಂಸ್ಥೆಯ ಅಧಿಕಾರಿಗಳಿಗೆ ಸೂಚಿಸಿದರು.

Latest Videos

undefined

ಪರಿವಾರ ಜಾತಿಯ ಸಮಸ್ಯೆ ಪರಿಹರಿಸಲು ಸಿಎಂ ಬೊಮ್ಮಾಯಿಗೆ ಮನವಿ

437 ನಮ್ಮ ಕ್ಲಿನಿಕ್‌: ರಾಜ್ಯದಲ್ಲಿ 100 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸಮುದಾಯ ಆರೋಗ್ಯ ಕೇಂದ್ರಗಳಾಗಿ ಮೇಲ್ದರ್ಜೆಗೇರಿಸುವ ಕೆಲಸ ಈ ವರ್ಷ ಮಾಡಲಾಗುತ್ತಿದೆ. 60 ಕ್ಕಿಂತ ಅಧಿಕ ಹೊಸ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಆರಂಭಿಸಲಾಗುತ್ತಿದೆ. ಕ್ಯಾನ್ಸರ್‌ ರೋಗಿಗಳ ಅನುಕೂಲಕ್ಕಾಗಿ 12 ಹೊಸ ಕ್ಯಾನ್ಸರ್‌ ಚಿಕಿತ್ಸಾ ಕೇಂದ್ರಗಳನ್ನು ಆರಂಭಿಸಲಾಗುತ್ತಿದೆ. ಇದೇ ಡಿಸೆಂಬರ್‌ನಲ್ಲಿ 437 ‘ನಮ್ಮ ಕ್ಲಿನಿಕ್‌’ ಆರಂಭಿಸಲಾಗುತ್ತಿದೆ. ಈ ಕ್ಲಿನಿಕ್‌ಗಳಲ್ಲಿ ಸಣ್ಣಪುಟ್ಟಆರೋಗ್ಯ ಸಮಸ್ಯೆಗಳಿಗೆ ಚಿಕಿತ್ಸೆ ಪಡೆಯಬಹುದು. 60 ವರ್ಷ ಮೇಲ್ಪಟ್ಟವರ ಸಂಪೂರ್ಣ ಕಣ್ಣು ತಪಾಸಣೆ ನಡೆಸಿ ಕನ್ನಡಕ ನೀಡುವ ವಿನೂತನ ಯೋಜನೆ ಆರಂಭಿಸಲಾಗುವುದು. ಹುಟ್ಟು ಕಿವುಡರಿಗೆ ಕಾಪಿಯರ್‌ ಪ್ಲಾಂಟ್‌ ಮಾಡಲಿಕ್ಕೆ ಒಂದಕ್ಕೆ . 5ರಿಂದ 8 ಲಕ್ಷ ವೆಚ್ಚವಾಗುತ್ತದೆ. ಈ ವರ್ಷ ಆರಂಭಿಸಲಾಗಿದೆ, ಇದಕ್ಕೆ . 500 ಕೋಟಿ ಮಂಜೂರಾತಿ ನೀಡಲಾಗಿದೆ. ಮುಖ್ಯಮಂತ್ರಿಗಳ ಆರೋಗ್ಯ ಸೇವೆಗೆ ಹಾವೇರಿ ಸೇರಿದಂತೆ ರಾಜ್ಯದ ಐದು ಜಿಲ್ಲೆಗಳನ್ನು ಆಯ್ಕೆ ಮಾಡಲಾಗಿದೆ. ಜನರ ಸಮಸ್ಯೆಗಳನ್ನು ಅರ್ಥಮಾಡಿಕೊಂಡು ಸ್ಪಂದಿಸಿ ನಮ್ಮ ಸರ್ಕಾರ ಕೆಲಸ ಮಾಡುತ್ತಿದೆ ಎಂದರು.

ಈ ವರ್ಷ ಒಂದು ಕೋಟಿಗೂ ಅಧಿಕ ಜನರಿಗೆ ಆಯುಷ್ಮಾನ್‌ ಕಾರ್ಡ್‌ ಕೊಡಲಾಗುತ್ತಿದೆ. ನಮ್ಮ ಸರ್ಕಾರ ಆರೋಗ್ಯ ಕ್ಷೇತ್ರಕ್ಕೆ ಅಧಿಕ ಅನುದಾನ ನೀಡಿದೆ ಹಾಗೂ ಸಾರ್ವಜನಿಕರ ಆರೋಗ್ಯ ರಕ್ಷಣೆಗೆ ಆದ್ಯತೆ ನೀಡಿದೆ. ಈ ಭಾಗದ ಜನರ ಆರೋಗ್ಯದ ಹಿತದೃಷ್ಟಿಯಿಂದ ಹುಬ್ಬಳ್ಳಿಯಲ್ಲಿ . 360 ಕೋಟಿ ವೆಚ್ಚದಲ್ಲಿ ಜಯದೇವ ಹೃದ್ರೋಗ ಸಂಸ್ಥೆಗೆ ಮುಂದಿನ ತಿಂಗಳು ಅಡಿಗಲ್ಲು ಹಾಕಲಾಗುವುದು. ಬೆಳಗಾವಿಯಲ್ಲಿ ಕಿದ್ವಾಯಿ ಆಸ್ಪತ್ರೆ ಪ್ರಮುಖ ಘಟಕ ಆರಂಭಿಸಲಾಗುವುದು ಎಂದು ಹೇಳಿದರು.

ಆಯುರ್ವೇದಿಕ್‌ ಕಾಲೇಜಿಗೆ ಅಡಿಗಲ್ಲು: ಸವಣೂರ ಪಟ್ಟಣದಲ್ಲಿ ಸರ್ಕಾರಿ ಆಯುರ್ವೇದಿಕ್‌ ಮೆಡಿಕಲ್‌ ಕಾಲೇಜಿಗೆ 15 ದಿನಗಳಲ್ಲಿ ಅಡಿಗಲ್ಲು ಹಾಕಲಾಗುವುದು, ಹಾವೇರಿ ಮೆಡಿಕಲ್‌ ಕಾಲೇಜು ಕಟ್ಟಡ ಕಾಮಗಾರಿ ವೇಗವಾಗಿ ನಡೆಯುತ್ತಿದೆ. ಪ್ರಸಕ್ತ ಸಾಲಿನಲ್ಲಿ ವೈದ್ಯಕೀಯ ಸೀಟುಗಳನ್ನು ಪಡೆಯಲಾಗಿದೆ. ಬರುವ ಫೆಬ್ರವರಿ ಅಥವಾ ಮಾಚ್‌ರ್‍ ವೇಳೆಗೆ ಆರಂಭಕ್ಕೆ ಗುರಿ ಹಾಕಿಕೊಳ್ಳಲಾಗಿದೆ. ಹಾವೇರಿಯಲ್ಲಿಯೂ ಸಹ ಬರುವ ದಿನಗಳಲ್ಲಿ 400 ಹಾಸಿಗೆಗಳ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ ಆರಂಭವಾಗಲಿದೆ. ಬಹಳ ದಿನಗಳಿಂದ ವಂಚಿತವಾದ ಆರೋಗ್ಯ ಕ್ಷೇತ್ರದ ಯೋಜನೆಗಳಿಗೆ ನಮ್ಮ ಸರ್ಕಾರ ಸ್ಪಂದಿಸಿ ಕಾಯಕಲ್ಪ ನೀಡುವ ಕೆಲಸ ಮಾಡಿದೆ ಎಂದರು. ಕಾರ್ಯಕ್ರಮದಲ್ಲಿ ಕಾರ್ಮಿಕ ಖಾತೆ ಹಾಗೂ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವರಾದ ಅರಬೈಲ್‌ ಶಿವರಾಮ ಹೆಬ್ಬಾರ್‌, ವಿಧಾನ ಪರಿಷತ್‌ ಸದಸ್ಯ ಎಸ್‌.ವಿ. ಸಂಕನೂರ, ಜಿಲ್ಲಾಧಿಕಾರಿ ರಘುನಂದನ ಮೂರ್ತಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕುಮಾರಸ್ವಾಮಿ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

ಸಿದ್ರಾಮಣ್ಣರವರೇ 5 ವರ್ಷ ಸಿಎಂ ಆಗಿದ್ರಿ, ಏನು ಮಾಡಿದ್ರೀ?: ಸಿಎಂ ಬೊಮ್ಮಾಯಿ

ಭವಿಷ್ಯದ ವಾಣಿಜ್ಯ ಕೇಂದ್ರ: ಭವಿಷ್ಯದಲ್ಲಿ ಶಿಗ್ಗಾಂವಿ ಸವಣೂರು ಪಟ್ಟಣಗಳಲ್ಲಿ ಬಹುದೊಡ್ಡ ಬದಲಾವಣೆ ಆಗಲಿದೆ. ಬರುವ ದಿನಗಳಲ್ಲಿ ಅವಳಿ ಪಟ್ಟಣಗಳು ಪ್ರಮುಖ ವಾಣಿಜ್ಯ ಕೇಂದ್ರಗಳಾಗಿ ಬೆಳೆಯಲಿವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಶಿಗ್ಗಾಂವಿ ಪಟ್ಟಣದಲ್ಲಿ ಭಾನುವಾರ ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಶಿಗ್ಗಾಂವಿ ಪಟ್ಟಣಕ್ಕೆ ದೊಡ್ಡ ದೊಡ್ಡ ಕಾರ್ಖಾನೆಗಳನ್ನು ಆಹ್ವಾನಿಸಲಾಗಿದೆ ಎಂದರು. ಈಗಾಗಲೇ ಜವಳಿ ಪಾರ್ಕ್, ದೊಡ್ಡ ದೊಡ್ಡ ಶಿಕ್ಷಣ ಸಂಸ್ಥೆಗಳು ಸ್ಥಾಪನೆಗೊಳ್ಳುತ್ತಿವೆ. ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚು ಅನುದಾನ ಬಿಡುಗಡೆ ಮಾಡಲಾಗಿದೆ. ಕಾಲ ಬದಲಾಗಿದೆ, ಭೂಮಿ ಕಡಿಮೆಯಾಗಿದೆ, ನಾವು ನಾವು ಬೇರೆ ಬೇರೆ ವೃತ್ತಿಯಲ್ಲಿ ತೊಡಗಿದಾಗ ಮಾತ್ರ ಭವಿಷ್ಯದಲ್ಲಿ ಬದುಕಲು ಸಾಧ್ಯವಾಗುತ್ತದೆ.

click me!