ಸಿದ್ದುಗೆ ಮತ್ತೊಂದು ಅಗ್ನಿಪರೀಕ್ಷೆ: ವಿಶೇಷ ಕೋರ್ಟ್‌ ತೀರ್ಪು ಇಂದು..!

By Kannadaprabha NewsFirst Published Sep 25, 2024, 8:32 AM IST
Highlights

ಮಂಗಳವಾರ ರಾಜ್ಯಪಾಲರ ಆದೇಶವನ್ನು ಪ್ರಶ್ನಿಸಿದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದ ಹಿನ್ನೆಲೆಯಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು(ಬುಧವಾರ) ಕಾಯ್ದಿರಿಸಿರುವ ತೀರ್ಪನ್ನು ಪ್ರಕಟಿಸುವ ಸಾಧ್ಯತೆ ಇದೆ. 

ಬೆಂಗಳೂರು(ಸೆ.25):  ಮುಡಾ ಹಗರಣದ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ರಾಜ್ಯಪಾಲರು ನೀಡಿದ ಅಭಿಯೋಜನೆಯನ್ನು ಹೈಕೋರ್ಟ್ ಎತ್ತಿ ಹಿಡಿದ ಬೆನ್ನಲ್ಲೇ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆಗೆ ಆದೇಶ ನೀಡುವ ಕುರಿತು ಕಾಯ್ದಿರಿಸಿರುವ ತೀರ್ಪು ಬುಧವಾರ ಪ್ರಕಟವಾಗುವ ಸಾಧ್ಯತೆ ಇದೆ. ಹೀಗಾಗಿ, ಸಿದ್ದರಾಮಯ್ಯ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗುವ ಸಂಭವವಿದೆ. 

ಮೈಸೂರಿನ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಸಲ್ಲಿಸಿರುವ ದೂರಿನ ವಿಚಾರಣೆ ಮುಕ್ತಾಯಗೊಂಡಿದ್ದು, ತೀರ್ಪನ್ನು ಕಾಯ್ದಿರಿಸಲಾಗಿದೆ. ರಾಜ್ಯಪಾಲರ ಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹೈಕೋರ್ಟ್ ನಲ್ಲಿ ಪ್ರಶ್ನಿಸಿದ್ದರು. ಈ ಹಿನ್ನೆಲೆಯಲ್ಲಿ ಹೈಕೋರ್ಟ್ ತನ್ನ ವಿಚಾರಣೆ ಮುಕ್ತಾಯವಾಗುವವರೆಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಕಾಯ್ದಿರಿಸಿರುವ ತೀರ್ಪಿಗೆ ತಡೆ ನೀಡಿತ್ತು. 

Latest Videos

ಮುಡಾ ಹಗರಣ: ಸಿದ್ದು ತನಿಖೆಗೆ 11 ಸಮರ್ಥನೆ ನೀಡಿದ ಹೈಕೋರ್ಟ್‌

ಮಂಗಳವಾರ ರಾಜ್ಯಪಾಲರ ಆದೇಶವನ್ನು ಪ್ರಶ್ನಿಸಿದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದ ಹಿನ್ನೆಲೆಯಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಬುಧವಾರ ಕಾಯ್ದಿರಿಸಿರುವ ತೀರ್ಪನ್ನು ಪ್ರಕಟಿಸುವ ಸಾಧ್ಯತೆ ಇದೆ. ಒಂದು ವೇಳೆ ಮುಖ್ಯಮಂತ್ರಿಗಳು ಹೈಕೋಟ್ ೯ನ ಆದೇಶವನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿ ಕೆಳ ನ್ಯಾಯಾಲಯ ಕಾಯ್ದಿರಿಸಿರುವ ತೀರ್ಪಿಗೆ ತಡೆ ತಂದರೆ ಮಾತ್ರ ವಿಚಾರಣೆಗೆ ಆದೇಶ ನೀಡುವುದಕ್ಕೆ ತಡೆ ಸಿಗಲಿದೆ.

click me!