ಪ್ರತಾಪ್ ಸಿಂಹಗೆ ಕೋರ್ಟ್ ಸಮನ್ಸ್

Published : Jan 22, 2019, 10:53 AM IST
ಪ್ರತಾಪ್ ಸಿಂಹಗೆ ಕೋರ್ಟ್ ಸಮನ್ಸ್

ಸಾರಾಂಶ

ಮೈಸೂರಿನ ಸಂಸದ ಪ್ರತಾಪ್ ಸಿಂಹ ವಿರುದ್ಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಸಮನ್ಸ್ ಜಾರಿಗೊಳಿಸಿದೆ. ನಟ ಪ್ರಕಾಶ್ ರಾಜ್ ಕುಟುಂಬದ ಖಾಸಗಿ ಜೀವನದ ಕುರಿತು ಹೇಳಿಕೆ ನೀಡಿದ್ದ ಹಿನ್ನೆಲೆಯಲ್ಲಿ ನೋಟಿಸ್ ನೀಡಲಾಗಿದೆ.

ಬೆಂಗಳೂರು :  ನಟ ಪ್ರಕಾಶ್ ರಾಜ್ ಕುಟುಂಬದ ಖಾಸಗಿ ಜೀವನದ ಕುರಿತು ಹೇಳಿಕೆ ನೀಡಿದ್ದ ಹಿನ್ನೆಲೆಯಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನ ಸಂಸದ ಪ್ರತಾಪ್ ಸಿಂಹ ವಿರುದ್ಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಸಮನ್ಸ್ ಜಾರಿಗೊಳಿಸಿದೆ. 

ತಮ್ಮ ಕುಟುಂಬದ ಖಾಸಗಿ ಬದುಕಿನ ಕುರಿತು ಪ್ರತಾಪ್ ಸಿಂಹ ನೀಡಿದ ಹೇಳಿಕೆಯು ಖಾಸಗಿ ಹಕ್ಕುಗಳ ಉಲ್ಲಂಘನೆಯಾಗಿದೆ ಎಂದು ಆರೋಪಿಸಿ ಪ್ರಕಾಶ್ ರಾಜ್ ಮೈಸೂರಿನ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. 

ಪ್ರತಾಪ್ ಸಿಂಹ ಜನಪ್ರತಿನಿಧಿ ಯಾಗಿರುವ ಕಾರಣ ಪ್ರಕರಣವು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ವರ್ಗಾವಣೆಯಾಗಿದೆ. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಹೇಳಿಕೆ ದಾಖಲಿಸುವ ಸಂಬಂಧ ಸಿಂಹ ಅವರಿಗೆ ಸಮನ್ಸ್ ಜಾರಿಗೊಳಿಸಿದೆ. 

ನಾನು ಸಂವಿಧಾನಬದ್ಧವಾದ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಉಲ್ಲಂಘಿಸುವ ಉದ್ದೇಶ ಹೊಂದಿಲ್ಲ ಹಾಗೂ ಯಾರದ್ದೇ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಮೊಟಕುಗೊಳಿಸಿಲ್ಲ ಎಂದು ಪ್ರಕಾಶ್ ರಾಜ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

Karnataka News Live: ಬಿಗ್‌ಬಾಸ್ ಶೋ ನಡೆಯುತ್ತಿರೋ ಜಾಲಿವುಡ್ ಸ್ಟುಡಿಯೋ ಮತ್ತೆ ಓಪನ್
ಕಾಂಗ್ರೆಸ್ ಒಳಜಗಳಕ್ಕೆ ಪ್ರತಿಪಕ್ಷ ಕಿಡಿ.. ನಾಯಕತ್ವವಿಲ್ಲದೆ ರಾಜ್ಯದ ಅಭಿವೃದ್ಧಿ ಅಸಾಧ್ಯ: ಆರ್.ಅಶೋಕ್‌