ದೀಪಾವಳಿಗೆ ಪ್ರಯಾಣಿಕ ದಟ್ಟಣೆ ನಿವಾರಿಸಲು ಕ್ರಮ : ವಿಶೇಷ ಎಕ್ಸ್‌ಪ್ರೆಸ್ ರೈಲು ಸಂಚಾರ

Published : Oct 10, 2025, 08:43 AM IST
Dirtiest train

ಸಾರಾಂಶ

ದೀಪಾವಳಿ ಪ್ರಯುಕ್ತ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು ನೈಋತ್ಯ ರೈಲ್ವೆಯು ಕೆಎಸ್‌ಆರ್ ಬೆಂಗಳೂರು– ಡಾ.ಎಂಜಿಆರ್ ಚೆನ್ನೈ ಸೆಂಟ್ರಲ್‌ ನಿಲ್ದಾಣಗಳ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲುಗಳನ್ನು ಓಡಿಸಲು ನಿರ್ಧರಿಸಿದೆ.

 ಬೆಂಗಳೂರು :  ದೀಪಾವಳಿ ಪ್ರಯುಕ್ತ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು ನೈಋತ್ಯ ರೈಲ್ವೆಯು ಕೆಎಸ್‌ಆರ್ ಬೆಂಗಳೂರು– ಡಾ.ಎಂಜಿಆರ್ ಚೆನ್ನೈ ಸೆಂಟ್ರಲ್‌ ನಿಲ್ದಾಣಗಳ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲುಗಳನ್ನು ಓಡಿಸಲು ನಿರ್ಧರಿಸಿದೆ.

ಕೆಎಸ್‌ಆರ್ ಬೆಂಗಳೂರು- ಡಾ.ಎಂಜಿಆರ್ ಚೆನ್ನೈ ಸೆಂಟ್ರಲ್ ವಿಶೇಷ ಎಕ್ಸ್‌ಪ್ರೆಸ್ (06255) ಅ.18, 21 ಮತ್ತು 25ರಂದು ಬೆಳಗ್ಗೆ 8.05 ಗಂಟೆಗೆ ಬೆಂಗಳೂರಿನಿಂದ ಹೊರಟು, ಅದೇ ದಿನ ಮಧ್ಯಾಹ್ನ 2.45 ಗಂಟೆಗೆ ಚೆನ್ನೈ ತಲುಪಲಿದೆ.

ಎಂಜಿಆರ್ ಚೆನ್ನೈ ಸೆಂಟ್ರಲ್ – ಕೆಎಸ್‌ಆರ್ ಬೆಂಗಳೂರು ವಿಶೇಷ ಎಕ್ಸ್‌ಪ್ರೆಸ್ (06256) ಅ. 18, 21 ಮತ್ತು 25 ರಂದು ಸಂಜೆ 4.30 ಗಂಟೆಗೆ ಡಾ.ಎಂಜಿಆರ್ ಚೆನ್ನೈ ಸೆಂಟ್ರಲ್ ನಿಲ್ದಾಣದಿಂದ ಹೊರಟು, ಅದೇ ದಿನ ರಾತ್ರಿ 10.45 ಗಂಟೆಗೆ ಕೆಎಸ್‌ಆರ್ ಬೆಂಗಳೂರು ನಿಲ್ದಾಣ ತಲುಪಲಿದೆ.

ಈ ರೈಲು ಮಾರ್ಗದಲ್ಲಿ ಯಶವಂತಪುರ, ಕೃಷ್ಣರಾಜಪುರಂ, ಬಂಗಾರಪೇಟೆ, ಜೋಲಾರ್‌ಪೇಟೆ ಕಾಟ್ಪಾಡಿ, ಅರಕ್ಕೋಣಂ ತಿರುವಳ್ಳೂರ್ ಮತ್ತು ಪೆರಂಬೂರು ನಿಲ್ದಾಣಗಳಲ್ಲಿ ನಿಲ್ಲಲಿದೆ. 11 ಸಾಮಾನ್ಯ ದ್ವಿತೀಯ ದರ್ಜೆಯ ಕೋಚ್‌, 1 ಎಸಿ ಚೇರ್ ಕಾರ್, 1 ಎಸಿ 3-ಟೈರ್ ಕೋಚ್, 4 ಸೆಕೆಂಡ್ ಕ್ಲಾಸ್ ಸಿಟ್ಟಿಂಗ್ ಕೋಚ್‌ ಹಾಗೂ 2 ಎಸ್‌ಎಲ್‌ಆರ್‌ಡಿ ಕೋಚ್‌ ಹೊಂದಿರಲಿದೆ ಎಂದು ಪ್ರಕಟಣೆ ತಿಳಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸಿಎಂ ಕುರ್ಚಿ ಪೈಪೋಟಿಯಲ್ಲಿ ರೈತ ಸಮಸ್ಯೆ ಗೌಣ: ಬಿ.ವೈ.ವಿಜಯೇಂದ್ರ ಟೀಕೆ
ಕರ್ನಾಟಕದಲ್ಲಿ ಶೇ.63 ಭ್ರಷ್ಟಾಚಾರ: ಸಿಬಿಐ ತನಿಖೆಗೆ ಒತ್ತಾಯಿಸಿದ ಆರ್‌.ಅಶೋಕ್‌