ಶಿಕ್ಷಕರ ತಾತ್ಕಾಲಿಕ ಆಯ್ಕೆ ಪಟ್ಟಿ ರದ್ದು: ಭಾನುವಾರವೂ ಕಲಾಪ ನಡೆಸಿದ ಹೈಕೋರ್ಟ್‌ ಸಿಜೆ

Published : Sep 04, 2023, 03:20 AM IST
ಶಿಕ್ಷಕರ ತಾತ್ಕಾಲಿಕ ಆಯ್ಕೆ ಪಟ್ಟಿ ರದ್ದು: ಭಾನುವಾರವೂ ಕಲಾಪ ನಡೆಸಿದ ಹೈಕೋರ್ಟ್‌ ಸಿಜೆ

ಸಾರಾಂಶ

ರಾಜ್ಯದಲ್ಲಿ ಖಾಲಿ ಇರುವ 15 ಸಾವಿರ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ(6-8 ತರಗತಿ) ನೇಮಕಕ್ಕೆ ಸಾರ್ವಜನಿಕ ಶಿಕ್ಷಣ ಇಲಾಖೆ 2022ರ ಫೆ.22ರಂದು ಅಧಿಸೂಚನೆ ಹೊರಡಿಸಿತ್ತು.

ಬೆಂಗಳೂರು (ಸೆ.04): ರಾಜ್ಯದ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ ಸರ್ಕಾರ ಹೊರಡಿಸಿದ್ದ ತಾತ್ಕಾಲಿಕ ಆಯ್ಕೆಪಟ್ಟಿ ರದ್ದುಪಡಿಸಿ, ಅಭ್ಯರ್ಥಿಗಳ ತಂದೆಯ ಆದಾಯ ಮತ್ತು ಜಾತಿ ಪ್ರಮಾಣಪತ್ರವನ್ನು ಪರಿಗಣಿಸಿ ಹೊಸದಾಗಿ ತಾತ್ಕಾಲಿಕ ಪಟ್ಟಿ ಪ್ರಕಟಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ್ದ ಹೈಕೋರ್ಟ್‌ ಏಕ ಸದಸ್ಯ ನ್ಯಾಯಪೀಠ ಆದೇಶ ಪ್ರಶ್ನಿಸಿ ಸಲ್ಲಿಸಲಾಗಿದ್ದ ಮೇಲ್ಮನವಿಯನ್ನು ಹೈಕೋರ್ಟ್‌ ವಿಭಾಗೀಯ ಪೀಠ ರಜಾದಿನವಾದ ಭಾನುವಾರಂದು ವಿಶೇಷ ಕಲಾಪದಲ್ಲಿ ವಿಚಾರಣೆ ನಡೆಸಿತು.

ಏಕ ಸದಸ್ಯ ನ್ಯಾಯಪೀಠ 2023ರ ಜ.30ರಂದು ಪ್ರಕಟಿಸಿದ್ದ ಆದೇಶ ಪ್ರಶ್ನಿಸಿ ಜಿ.ವಿ. ನಾಗೇಂದ್ರ ಬಾಬು, ಭಾರತಿ ಪಾಟೀಲ್‌, ಗಣೇಶ್‌ ಪ್ರಸಾದ್‌ ಮತ್ತು ಮಮತಾ ಸೇರಿದಂತೆ 130ಕ್ಕೂ ಅಧಿಕ ಅಭ್ಯರ್ಥಿಗಳು ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆಯನ್ನು ಭಾನುವಾರ ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಾಳೆ ಮತ್ತು ನ್ಯಾಯಮೂರ್ತಿ ಎಂಜಿಎಸ್‌ ಕಮಲ್‌ ಅವರಿದ್ದ ವಿಭಾಗೀಯ ಪೀಠ ವಿಶೇಷ ಕಲಾಪದಲ್ಲಿ ವಿಚಾರಣೆ ನಡೆಸಿತು. ಮೇಲ್ಮನವಿಯನ್ನು ಬೆಳಗ್ಗೆ 11.30ರ ಸುಮಾರಿಗೆ ವಿಚಾರಣೆ ಆರಂಭಿಸಿದ ನ್ಯಾಯಪೀಠ, ಎರಡೂವರೆಗೂ ತಾಸಿಗೂ ಅಧಿಕ ಕಾಲ ಮೇಲ್ಮನವಿದಾರರ ಪರ ವಕೀಲರ ಸುದೀರ್ಘ ವಾದ ಆಲಿಸಿದ ನಂತರ ವಿಚಾರಣೆಯನ್ನು ಸೆ.8ಕ್ಕೆ ಮುಂದೂಡಿತು.

ನೀರು ಅಮೂಲ್ಯವಾದುದು, ರೈತರ ನಿಜವಾದ ಜೀವನಾಡಿ: ವೀರೇಂದ್ರ ಹೆಗ್ಗಡೆ

ರಾಜ್ಯದಲ್ಲಿ ಖಾಲಿ ಇರುವ 15 ಸಾವಿರ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ(6-8 ತರಗತಿ) ನೇಮಕಕ್ಕೆ ಸಾರ್ವಜನಿಕ ಶಿಕ್ಷಣ ಇಲಾಖೆ 2022ರ ಫೆ.22ರಂದು ಅಧಿಸೂಚನೆ ಹೊರಡಿಸಿತ್ತು. ಉಡುಪಿಯ ಯಡತಾಡಿ ಗ್ರಾಮದ ಅನಿತಾ ಸೇರಿ 40ಕ್ಕೂ ಅಧಿಕ ಮಹಿಳಾ ಹುದ್ದೆ ಆಕಾಂಕ್ಷಿಗಳು ನೇಮಕಾತಿ ಕೋರಿ ಅರ್ಜಿ ಸಲ್ಲಿಸಿದ್ದರು. ನಂತರ ಲಿಖಿತ ಪರೀಕ್ಷೆಗೆ ಹಾಜರಾಗಿ ಉತ್ತಮ ರಾರ‍ಯಂಕ್‌ ಗಳಿಸಿದ್ದರು. ಅಲ್ಲದೆ, 1:2 ಅನುಪಾತದ ತಾತ್ಕಾಲಿಕ ಪಟ್ಟಿಯಲ್ಲಿ ದಾಖಲೆಗಳ ಪರಿಶೀಲನೆಗೆ ಅವರು ಅರ್ಹರಾಗಿದ್ದರು. 2022ರ ನ.18ರಂದು 1:1 ತಾತ್ಕಾಲಿಕ ಆಯ್ಕೆ ಪಟ್ಟಿಪ್ರಕಟಿಸಿದ್ದು, ಅದರಲ್ಲಿ ಅವರು ಸ್ಥಾನ ಪಡೆದಿರಲಿಲ್ಲ. ಇದರಿಂದ ಪಟ್ಟಿಯನ್ನು ಪ್ರಶ್ನಿಸಿ ಅನಿತಾ ಸೇರಿ 40 ಮಂದಿ ಅಧಿಕ ಮಹಿಳಾ ಆಕಾಂಕ್ಷಿಗಳು ಹೈಕೋರ್ಟ್‌ಗೆ ತಕರಾರು ಅರ್ಜಿ ಸಲ್ಲಿಸಿದ್ದರು.

ಅರ್ಜಿಗಳನ್ನು ಪುರಸ್ಕರಿಸಿದ್ದ ಸಲ್ಲಿಸಿದ್ದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಪೀಠ, ತಾತ್ಕಾಲಿಕ ಪಟ್ಟಿಯನ್ನು ರದ್ದುಪಡಿಸಿತ್ತು. ಅರ್ಜಿದಾರ ಅಭ್ಯರ್ಥಿಗಳ ತಂದೆಯ ಆದಾಯ ಮತ್ತು ಜಾತಿ ಪ್ರಮಾಣಪತ್ರವನ್ನು ಪರಿಗಣಿಸಿ ಹೊಸದಾಗಿ ತಾತ್ಕಾಲಿಕ ಪಟ್ಟಿಯನ್ನು ಸಿದ್ಧಪಡಿಸುವಂತೆ ನಿರ್ದೇಶಿಸಿತ್ತು. ಈ ಆದೇಶದಿಂದ ನೇಮಕಾತಿಯ ಪರಿಗಣನೆಗೆ ಒಳಪಡದ ಹಾಲಿ ಮೇಲ್ಮನವಿದಾರರು ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದರು.

ಕಾಂಗ್ರೆಸ್ ಸೇರುತ್ತೇನೆಂದು ಎಲ್ಲೂ ಹೇಳಿಲ್ಲ: ಮಾಜಿ ಸಚಿವ ರೇಣುಕಾಚಾರ್ಯ

ಹಿಂದುಳಿದ ವರ್ಗಕ್ಕೆ ಪರಿಗಣಿಸುವಾಗ ಪತಿಯ ಆದಾಯ ಆಧಾರವಾಗಿತ್ತು. ಮಹಿಳೆ ಆದಾಯ ಪ್ರಮಾಣಪತ್ರಕ್ಕೆ ಪತಿಯ ಆದಾಯ ಪರಿಗಣಿಸಲಾಗುತ್ತಿತ್ತು. ರಾಜ್ಯ ಸರ್ಕಾರದ ಈ ನೀತಿಯನ್ನು ಏಕಸದಸ್ಯ ಪೀಠ ಅಮಾನ್ಯಗೊಳಿಸಿ, ಅಭ್ಯರ್ಥಿ ತಂದೆಯ ಜಾತಿ-ಆದಾಯ ಪ್ರಮಾಣಪತ್ರ ಪರಿಗಣಿಸಿ ಹೊಸದಾಗಿ ಆಯ್ಕೆ ಪಟ್ಟಿಪ್ರಕಟಿಸುವಂತೆ ಸೂಚಿಸಿರುವುದು ಸರಿಯಿಲ್ಲ. ಹಾಗಾಗಿ, ಏಕಸದಸ್ಯ ಪೀಠದ ಆದೇಶ ರದ್ದುಪಡಿಸಬೇಕು ಎಂದು ಅರ್ಜಿಯಲ್ಲಿ ಕೋರಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ, ಇಂಗ್ಲೀಷ್ ಶಾಲೆಗಳ ಪೋಷಕರಿಂದ ಸಡಿಲಿಕೆಗೆ ಮನವಿ
ಚಿನ್ನಸ್ವಾಮಿಗೆ ಅಂತಾರಾಷ್ಟ್ರೀಯ ಮತ್ತು IPL ಪಂದ್ಯಗಳು ವಾಪಸ್; ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ