ಕನ್ನಡಿಗರ ನೆರವಿಗೆ ನಿಂತ ಕೇಂದ್ರ: ಲಾಕ್‌ಡೌನ್ ಮಧ್ಯೆ ವಿಶೇಷ ರೈಲು, ವಿಮಾನ ವ್ಯವಸ್ಥೆ

Published : May 07, 2020, 08:55 PM IST
ಕನ್ನಡಿಗರ ನೆರವಿಗೆ ನಿಂತ ಕೇಂದ್ರ: ಲಾಕ್‌ಡೌನ್ ಮಧ್ಯೆ ವಿಶೇಷ ರೈಲು, ವಿಮಾನ ವ್ಯವಸ್ಥೆ

ಸಾರಾಂಶ

ಕೊರೋನಾ ವೈರಸ್‌ನಿಂದ ದೆಹಲಿ ಹಾಗೂ ಅರಬ್ ದೇಶಗಳಲ್ಲಿರುವ ಕನ್ನಡಿಗರು ಸ್ವದೇಶಕ್ಕೆ ಮರಳಲು ವಿಶೇಷ ರೈಲು ಹಾಗೂ ವಿಮಾನ ಓಡಾಡಕ್ಕೆ ಕೇಂದ್ರ ಸರ್ಕಾರ ಅನುಮತಿ ಕೊಟ್ಟಿದೆ

ನವದೆಹಲಿ, (ಮೇ.07): ಕೊರೊನಾ ಲಾಕ್‍ಡೌನ್‍ನಿಂದಾಗಿ ಉತ್ತರ ಭಾರತದಲ್ಲಿ ಸಿಲುಕಿಕೊಂಡಿರುವ ಕನ್ನಡಿಗರ ರಕ್ಷಣೆಗೆ ಕೇಂದ್ರ ಸರ್ಕಾರ ಮುಂದಾಗಿದೆ. ದೆಹಲಿಯಿಂದ ಕರ್ನಾಟಕಕ್ಕೆ ಇನ್ನೆರಡು ದಿನಗಳಲ್ಲಿ ವಿಶೇಷ ರೈಲಿನ ವ್ಯವಸ್ಥೆ ಮಾಡಲಾಗುವುದು ಎಂದು ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ ತಿಳಿಸಿದ್ದಾರೆ.

ಈ ಸಂಬಂಧ ಇಂದು (ಗುರುವಾರ) ಮಾಧ್ಯಮ ಪ್ರಕಟಣೆ ಹೊರಡಿಸಿರುವ ಅವರು, ಉತ್ತರ ಭಾರತದಲ್ಲಿ ಸಿಲುಕಿರುವ ಕನ್ನಡಿಗರು ರಾಜ್ಯಕ್ಕೆ ಮರಳುವುದಕ್ಕಾಗಿ ವಿಶೇಷ ರೈಲೊಂದನ್ನು ಓಡಿಸಲು ರೈಲ್ವೆ ಇಲಾಖೆಯು ಒಪ್ಪಿಗೆ ನೀಡಿದೆ. ಈ ಸಂಬಂಧ ರೈಲ್ವೆ ಸಚಿವ ಪಿಯುಶ್ ಗೋಯಲ್ ಜೊತೆಗೆ ನಡೆಸಿದ ಮಾತುಕತೆ ಯಶಸ್ವಿಯಾಗಿದೆ. ಒಂದೆರಡು ದಿನದಲ್ಲಿ ದೆಹಲಿಯಿಂದ ಬೆಂಗಳೂರಿಗೆ ವಿಶೇಷ ರೈಲು ಸಂಚರಿಸಲಿದೆ ಎಂದು ಮಾಹಿತಿ ನೀಡಿದ್ದಾರೆ. 

ವಿದೇಶದಿಂದ ಬರುವವರಿಗೆ 365 ಕಡೆ ಕ್ವಾರಂಟೈನ್, 6500 ಕೊಠಡಿ ಬುಕ್!

ದೆಹಲಿಯ ಹೊರತಾಗಿ ಹರ್ಯಾಣ, ಪಂಜಾಬ್ ಮತ್ತಿತರ ಸಮೀಪದ ಸ್ಥಳಗಳಿಂದಲೂ ಜನರು ರಾಜ್ಯಕ್ಕೆ ವಾಪಸ್ ಆಗಬಹುದಾಗಿದೆ. ಈ ನಿಟ್ಟಿನಲ್ಲಿ ದೆಹಲಿಯ ಸುತ್ತ ಬೇರೆ ನೇರ ಪ್ರದೇಶಗಳಲ್ಲಿರುವ ಕನ್ನಡಿಗರನ್ನು ಕೂಡಲೇ ದೆಹಲಿಗೆ ಕರೆಸಿಕೊಂಡು ಅವರನ್ನೂ ಇದೇ ರೈಲಿನಲ್ಲಿ ಕರ್ನಾಟಕಕ್ಕೆ ಕಳುಹಿಸಿಕೊಡಲು ಕೇಂದ್ರ ಸಚಿವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ದೆಹಲಿ ಮತ್ತಿತರ ಸ್ಥಳಗಳಿಂದ ತಮ್ಮ ಸ್ವಂತ ವಾಹನದಲ್ಲಿ ಕರ್ನಾಟಕಕ್ಕೆ ಮರಳಲು ಇಚ್ಛಿಸಿದ ಅನೇಕ ದೆಹಲಿ ಕನ್ನಡಿಗರು ಹಾಗೂ ಯಾತ್ರಾರ್ಥಿಳಿಗೂ ಅಗತ್ಯ ಪರವಾನಿಗೆ ನೀಡಲಾಗುತ್ತಿದೆ.

ದುಬೈನಿಂದ 2 ವಿಶೇಷ ವಿಮಾನ:
ಅರಬ್ ದೇಶಗಳಲ್ಲಿರುವ ಕನ್ನಡಿಗರು ಸ್ವದೇಶಕ್ಕೆ ಮರಳಲು ಎರಡು ವಿಶೇಷ ವಿಮಾನಗಳ ವ್ಯವಸ್ಥೆ ಮಾಡಲಾಗಿದ್ದು, ಮೇ 12ರಂದು ಯುಎಇನಿಂದ ಮಂಗಳೂರಿಗೆ ವಿಮಾನ ಸಂಚರಿಸುವುದನ್ನು ವಿದೇಶಾಂಗ ಸಚಿವರು ಖಚಿತಪಡಿಸಿದ್ದಾರೆ. ಇನ್ನೊಂದು ವಿಮಾನ ಬೆಂಗಳೂರಿಗೆ ಬರಲಿದ್ದು, ಅದರ ವೇಳಾಪಟ್ಟಿ ಪ್ರಕಟವಾಗಬೇಕಿದೆ ಎಂದು ಸದಾನಂದಗೌಡ ಅವರು ತಿಳಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಶಾಲೆಯಿಂದ ಮರಳುತ್ತಿದ್ದ ವೇಳೆ ಬೀದಿ ನಾಯಿ ದಾಳಿ, 5 ವರ್ಷದ LKG ಬಾಲಕಿಗೆ ಗಂಭೀರ ಗಾಯ
ಕರ್ನಾಟಕದಲ್ಲಿ ನಿಮ್ಹಾನ್ಸ್ ಮಾದರಿಯ ಮತ್ತಷ್ಟು ಸಂಸ್ಥೆಗಳು ಅಗತ್ಯ: ಸಚಿವ ಶರಣ ಪ್ರಕಾಶ್ ಪಾಟೀಲ್