
ಬೆಂಗಳೂರು(ಮೇ.15): ಕಿಡ್ನಾಪ್ ಪ್ರಕರಣದಲ್ಲಿ ಜೆಡಿಎಸ್ ಶಾಸಕ ರೇವಣ್ಣ ಅವರಿಗೆ ಜಾಮೀನು ಮಂಜೂರು ಹಾಗೂ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ ಆಗಿರುವ ತನಿಖಾ ಬೆಳವಣಿಗೆ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪೊಲೀಸರೊಂದಿಗೆ ಸಭೆ ನಡೆಸಿ ಮಾಹಿತಿ ಪಡೆದರು.
ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವರಾದ ಡಾ. ಜಿ.ಪರಮೇಶ್ವರ್, ಚೆಲುವರಾಯಸ್ವಾಮಿ, ಭೈರತಿ ಸುರೇಶ್ ಸೇರಿದಂತೆ ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು.
ಪುತ್ರ ಪ್ರಜ್ವಲ್ ಹೆಸರಲ್ಲಿ ಚಾಮುಂಡೇಶ್ವರಿಗೆ ಅರ್ಚನೆ ಮಾಡಿಸಿದ ಹೆಚ್‌ಡಿ ರೇವಣ್ಣ
ಎಸ್‌ಐಟಿ ಪೊಲೀಸರು ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದ ತನಿಖೆ ಯಾವ ಹಂತದಲ್ಲಿದೆ ಎಂಬ ಬಗ್ಗೆ ಮಾಹಿತಿ ನೀಡಿದರು. ಪ್ರಮುಖವಾಗಿ ರೇವಣ್ಣ ಅವರಿಗೆ ಜಾಮೀನು ಸಿಗಲು ಕಾರಣ. ಮಾಜಿ ಶಾಸಕ ಪ್ರೀತಂಗೌಡ ಆಪ್ತರ ಬಂಧನ ಸೇರಿದಂತೆ ಮತ್ತಿತರ ವಿಷಯಗಳನ್ನು ತಿಳಿಸಿದರು. ಈ ವೇಳೆ ಸಿಎಂ, ತನಿಖೆಯನ್ನು ಚುರುಕುಗೊಳಿಸು ವಂತೆ ತಿಳಿಸಿದರಲ್ಲದೆ, ಪಾರದರ್ಶಕವಾಗಿ ಮಾಡುವಂತೆ ಸೂಚನೆ ನೀಡಿದರು ಎಂದು ಮೂಲಗಳು ತಿಳಿಸಿವೆ.
ಸಭೆ ಮುಗಿಸಿ ಸಿಎಂ ತೆರಳಿದ ನಂತರ ಡಿ.ಕೆ. ಶಿವಕುಮಾರ್ ಮತ್ತು ಡಾ. ಜಿ. ಪರಮೇಶ್ವರ್ ಪ್ರತ್ಯೇಕವಾಗಿ ಚರ್ಚಿಸಿ ದರು. ಈ ವೇಳೆಯಲ್ಲೂ ಪ್ರಜ್ವಲ್ ರೇವಣ್ಣ ಪ್ರಕರಣ, ರೇವಣ್ಣ ಜಾಮೀನು ಪಡೆದಿರುವ ಬಗ್ಗೆ ಮಾತುಕತೆ ನಡೆಸಿದರು ಎಂದು ಹೇಳಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ