ಎಸ್ಸೆಸ್ಸೆಲ್ಸಿ ಉತ್ತರ ಪತ್ರಿಕೆ ಕೇಂದ್ರಕ್ಕೆ ಸ್ಟ್ರಾಂಗ್‌ರೂಮ್‌ನಷ್ಟೇ ಭದ್ರತೆ

Published : Jun 05, 2020, 09:41 AM ISTUpdated : Jun 05, 2020, 09:49 AM IST
ಎಸ್ಸೆಸ್ಸೆಲ್ಸಿ ಉತ್ತರ ಪತ್ರಿಕೆ ಕೇಂದ್ರಕ್ಕೆ  ಸ್ಟ್ರಾಂಗ್‌ರೂಮ್‌ನಷ್ಟೇ ಭದ್ರತೆ

ಸಾರಾಂಶ

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಕುರಿತಂತೆ ಜಿಲ್ಲಾ ಮಟ್ಟದಲ್ಲಿ ಸಹಾಯವಾಣಿ ಆರಂಭಿಸಬೇಕು, ಪರೀಕ್ಷೆಗೂ ಮುನ್ನ ಕೊನೇ ಗಳಿಗೆಯಲ್ಲಿ ಕಂಟೈನ್ಮೆಂಟ್‌ ವಲಯಗಳಾಗಿ ಘೋಷಿತವಾದರೆ ತಕ್ಷಣದ ಅನುಕೂಲಕ್ಕಾಗಿ ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಲ್ಲಿ ಬದಲಿ ಐದು ಕೇಂದ್ರಗಳನ್ನು ಗುರುತಿಸಿ ಸಿದ್ಧವಾಗಿಟ್ಟುಕೊಳ್ಳುವಂತೆ ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳು ಹಾಗೂ ಪೊಲೀಸ್‌ ವರಿಷ್ಠಾಧಿಕಾರಿಗಳಿಗೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್‌. ಸುರೇಶ್‌ಕುಮಾರ್‌ ಸೂಚಿಸಿದ್ದಾರೆ.

ಬೆಂಗಳೂರು (ಜೂ. 05): ಎಸ್‌ಎಸ್‌ಎಲ್‌ಸಿ ಪರೀಕ್ಷೆ ಕುರಿತಂತೆ ಜಿಲ್ಲಾ ಮಟ್ಟದಲ್ಲಿ ಸಹಾಯವಾಣಿ ಆರಂಭಿಸಬೇಕು, ಪರೀಕ್ಷೆಗೂ ಮುನ್ನ ಕೊನೇ ಗಳಿಗೆಯಲ್ಲಿ ಕಂಟೈನ್ಮೆಂಟ್‌ ವಲಯಗಳಾಗಿ ಘೋಷಿತವಾದರೆ ತಕ್ಷಣದ ಅನುಕೂಲಕ್ಕಾಗಿ ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಲ್ಲಿ ಬದಲಿ ಐದು ಕೇಂದ್ರಗಳನ್ನು ಗುರುತಿಸಿ ಸಿದ್ಧವಾಗಿಟ್ಟುಕೊಳ್ಳುವಂತೆ ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳು ಹಾಗೂ ಪೊಲೀಸ್‌ ವರಿಷ್ಠಾಧಿಕಾರಿಗಳಿಗೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್‌. ಸುರೇಶ್‌ಕುಮಾರ್‌ ಸೂಚಿಸಿದ್ದಾರೆ.

ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತೆ ಕುರಿತು ವಿಕಾಸಸೌಧದಲ್ಲಿ ಗುರುವಾರ ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳು, ಜಿಪಂ ಸಿಇಒ, ಎಸ್‌ಪಿ, ಜಿಲ್ಲಾ ಮತ್ತು ತಾಲೂಕು ಖಜಾನೆ ಅಧಿಕಾರಿಗಳು, ಡಿಡಿಪಿಐ, ಬಿಇಒರೊಂದಿಗೆ ವಿಡಿಯೋ ಸಂವಾದದಲ್ಲಿ ಮಾತನಾಡಿದ ಅವರು, ಎಸ್‌ಎಸ್‌ಎಲ್‌ಸಿ ಉತ್ತರ ಪತ್ರಿಕೆಗಳ ಸಂಗ್ರಹಣಾ ಕೇಂದ್ರಗಳಿಗೆ ಚುನಾವಣಾ ಸ್ಟ್ರಾಂಗ್‌ರೂಮ್‌ಗಳಷ್ಟೇ ಭದ್ರತೆ ಕಲ್ಪಿಸಬೇಕು,ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಸುರಕ್ಷಿತವಾಗಿ ನಡೆಸುವಂತೆ ತಿಳಿಸಿದರು.

ಎಸ್ಸೆಸ್ಸೆಲ್ಸಿ ಪರೀಕ್ಷೆ: ಗೃಹ ಇಲಾಖೆಯೊಂದಿಗಿನ ಮಹತ್ವದ ಸಭೆಯಲ್ಲಿ ಏನೇನಾಯ್ತು..?

ಸಭೆಯಲ್ಲಿ ಕೈಗೊಂಡ ಕ್ರಮಗಳು:

ಜಿಲ್ಲಾಡಳಿತಗಳು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಕುರಿತಂತೆ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಕೂಡಲೇ ಸಹಾಯವಾಣಿ ಪ್ರಾರಂಭಿಸಿ ಈ ಬಗ್ಗೆ ವ್ಯಾಪಕ ಪ್ರಚಾರ ನೀಡಬೇಕು. ಮಳೆಗಾಲವಾಗಿರುವ ಕಾರಣ ಪರೀಕ್ಷಾ ಕೇಂದ್ರಗಳನ್ನು ಪರಿಶೀಲಿಸಿ ದುರಸ್ತಿ ಕಾರ್ಯ ಕೈಗೊಂಡು ವಿದ್ಯುತ್‌ ಸೌಲಭ್ಯ ಕಲ್ಪಿಸಬೇಕು. ಗಡಿಯಾಚೆಯಿಂದ ಬರುವ ಮಕ್ಕಳಿಗೆ ಪರೀಕ್ಷಾ ಕೇಂದ್ರಕ್ಕೆ ಬಂದು ಹೋಗಲು ಸಾರಿಗೆ ವ್ಯವಸ್ಥೆ ಮಾಡುವುದು, ಪ್ರತಿ ಪರೀಕ್ಷಾ ಕೇಂದ್ರಗಳಲ್ಲಿ ಆರೋಗ್ಯ ಕಾರ್ಯಕರ್ತರನ್ನು ನೇಮಿಸಬೇಕು. ಪರೀಕ್ಷಾ ಕೇಂದ್ರ ಬದಲಾಯಿಸಿಕೊಂಡ ವಿದ್ಯಾರ್ಥಿಗಳಿಗೆ ತಾವು ಇಚ್ಛಿಸಿರುವ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲು ಸಿದ್ಧತೆ ಮಾಡಿಕೊಡುವಂತೆ ಸೂಚಿಸಿದರು.

ವಿಡಿಯೋ ಕಾನ್ಫರೆನ್ಸ್‌ನಲ್ಲಿ ಪ್ರಾಥಮಿಕ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಎಸ್‌.ಆರ್‌. ಉಮಾಶಂಕರ್‌, ಆಯುಕ್ತ ಡಾ. ಕೆ.ಜಿ. ಜಗದೀಶ್‌, ಎಸ್‌ಎಸ್‌ಎ ಎಸ್‌ಪಿಡಿ ಡಾ. ಎಂ.ಟಿ. ರೇಜು ಸೇರಿದಂತೆ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

‘ನೆಕ್ಸ್ಟ್‌ ಸಿಎಂ’ ಬೆಟ್ಟಿಂಗ್‌ ನಿಯಂತ್ರಿಸಿ: ವಿ.ಸುನೀಲ್‌ ಕುಮಾರ್‌ ಆಗ್ರಹ
ಉತ್ತರ ಕರ್ನಾಟಕದ ಅಭಿವೃದ್ಧಿಗೆ ಆದ್ಯತೆ ಅಗತ್ಯ: ಛಲವಾದಿ ನಾರಾಯಣಸ್ವಾಮಿ