ಮೊದಲ ದಿನವೇ ಸುರೇಶ್‌ ಕುಮಾರ್‌ ಫಸ್ಟ್‌ ರ‍್ಯಾಂಕ್..!

By Kannadaprabha NewsFirst Published Jun 26, 2020, 9:25 AM IST
Highlights

ಸಾಕಷ್ಟುವಿರೋಧ, ಟೀಕೆ ಮತ್ತು ಒತ್ತಡವನ್ನು ಎದುರಿಸಿ ಧೈರ್ಯದಿಂದಲೇ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸುವ ನಿರ್ಧಾರ ಪ್ರಕಟಿಸಿದ್ದ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್‌. ಸುರೇಶ್‌ಕುಮಾರ್‌ ಮೊದಲ ದಿನದ ಪರೀಕ್ಷೆಯಲ್ಲಿ ಮೊದಲ ದಿನವೇ ಫಸ್ಟ್‌ ರ‍್ಯಾಂಕ್ ಪಡೆದಿದ್ದಾರೆ.

ಬೆಂಗಳೂರು(ಜೂ.26): ಸಾಕಷ್ಟುವಿರೋಧ, ಟೀಕೆ ಮತ್ತು ಒತ್ತಡವನ್ನು ಎದುರಿಸಿ ಧೈರ್ಯದಿಂದಲೇ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸುವ ನಿರ್ಧಾರ ಪ್ರಕಟಿಸಿದ್ದ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್‌. ಸುರೇಶ್‌ಕುಮಾರ್‌ ಮೊದಲ ದಿನದ ಪರೀಕ್ಷೆಯಲ್ಲಿ ಮೊದಲ ದಿನವೇ ಫಸ್ಟ್‌ ರ‍್ಯಾಂಕ್ ಪಡೆದಿದ್ದಾರೆ.

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮೂಲಕ ಸುರೇಶ್‌ ಕುಮಾರ್‌ ಅವರ ಕಾರ್ಯಕ್ಷಮತೆ ತಿಳಿಯಲಿದೆ, ಇಂತಹ ಆತಂಕದ ಪರಿಸ್ಥಿತಿಯಲ್ಲಿ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗುವುದು ಅಷ್ಟಕಷ್ಟೇ ಎಂಬ ಮಾತುಗಳು ಕೇಳಿಬಂದಿದ್ದವು. ಆದರೆ, ಶೇ.98.3ರಷ್ಟುವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗುವ ಮೂಲಕ ಕಳೆದ ಒಂದು ತಿಂಗಳಿನಿಂದ ನಿರಂತರವಾಗಿ ಪರೀಕ್ಷಾ ಸಿದ್ಧತಾ ಕಾರ್ಯಗಳನ್ನು ಕೈಗೊಂಡ ಸಚಿವರ ಕ್ರಮಕ್ಕೆ ಮೊದಲ ದಿನವೇ ಯಶಸ್ಸು ಸಿಕ್ಕಿದೆ.

SSLC ಎಕ್ಸಾಂ: 10 ಕಿ.ಮೀ ನಡೆದು ಬಂದು ಪರೀಕ್ಷೆ ಬರೆದ ವಿದ್ಯಾರ್ಥಿಗಳು..!

ನೆರೆ ರಾಜ್ಯಗಳಾದ ತಮಿಳುನಾಡು, ತೆಲಂಗಾಣ ಮತ್ತು ಪುದುಚೇರಿಯಲ್ಲಿ ಹತ್ತನೇ ತರಗತಿ ಪರೀಕ್ಷೆ ರದ್ದುಗೊಳಿಸಲಾಗಿದೆ. ಆದ್ದರಿಂದ ರಾಜ್ಯದಲ್ಲಿಯೂ ಪರೀಕ್ಷೆ ರದ್ದುಗೊಳಿಸಬೇಕು ಎಂಬ ಆಗ್ರಹಕ್ಕೆ ಉತ್ತರಿಸಿದ್ದ ಸಚಿವರು, ಮಕ್ಕಳ ಭವಿಷ್ಯದ ದೃಷ್ಟಿಯಿಂದ ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಹತ್ವದ ಪಾತ್ರ ವಹಿಸಲಿದೆ. ಹೀಗಾಗಿ ಎಲ್ಲ ಸುರಕ್ಷತಾ ಕ್ರಮಗಳೊಂದಿಗೆ ಸುರಕ್ಷಿತವಾಗಿ ಪರೀಕ್ಷೆ ನಡೆಸಲಾಗುವುದು ಎಂದಿದ್ದರು. ಬುಧವಾರದ ಮಟ್ಟಿಗೆ ಈ ವಿಚಾರದಲ್ಲಿ ಅವರು ಗೆದ್ದಿದ್ದಾರೆ.

ಪ್ರತಿ ವಿದ್ಯಾರ್ಥಿ ಮನೆ ಬಿಡುವುದರಿಂದ ಹಿಡಿದು ಪರೀಕ್ಷೆ ಬರೆದು ನಂತರ ಮನೆ ತಲುಪುವ ತನಕ ಎಲ್ಲಾ ಹಂತದಲ್ಲಿಯೂ ಪೋಷಕರಿಗಿಂತ ಒಂದು ಹೆಜ್ಜೆ ಮುಂದೆ ನಿಂತು ವಿದ್ಯಾರ್ಥಿಗಳ ಸುರಕ್ಷತೆ ಕಾಪಾಡಿಕೊಳ್ಳಲು ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಆದ್ಯತೆ ನೀಡಿತ್ತು. ವಿದ್ಯಾರ್ಥಿಗಳಿಗೆ ಸಾರಿಗೆ ವ್ಯವಸ್ಥೆ ಕಲ್ಪಿಸಿ, ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಗಳು ನೋಂದಣಿ ಸಂಖ್ಯೆ ನೋಡುವುದಕ್ಕೆ ಗುಂಪು ಸೇರುವುದನ್ನು ತಪ್ಪಿಸಲು ಮೊಬೈಲ್‌ ನಂಬರ್‌ಗಳಿಗೆ ಪರೀಕ್ಷಾ ಕೊಠಡಿ ಸಂಖ್ಯೆ ಕಳುಹಿಸಲಾಗಿತ್ತು.

ಅಬ್ಬಬ್ಬಾ..! ಶಿಕ್ಷಕಿ ಮನೆಯಲ್ಲಿ ಪರೀಕ್ಷೆ ಬರೆದ ವಿದ್ಯಾರ್ಥಿನಿ!

ಪರೀಕ್ಷಾ ಕೇಂದ್ರಕ್ಕೆ ಬಂದ ವಿದ್ಯಾರ್ಥಿಯು ಮಾಸ್ಕ್‌ ಧರಿಸಿರದಿದ್ದರೆ ಮಾಸ್ಕ್‌ ನೀಡುವುದು, ಥರ್ಮಲ್‌ ಸ್ಕಾ್ಯನರ್‌ನಿಂದ ದೈಹಿಕ ತಾಪಮಾನ ತಪಾಸಣೆ ಮಾಡಿಯೇ ಕೊಠಡಿಯೊಳಗೆ ಬಿಡುವುದು, ಪರೀಕ್ಷಾ ಕೇಂದ್ರಕ್ಕೆ ಸೋಂಕು ನಿವಾರಕ ದ್ರಾವಣ ಸಿಂಪಡಣೆ, ಕೊಠಡಿಯಲ್ಲಿರುವ ಪ್ರತಿ ಪೀಠೋಪಕರಣಗಳಿಗೂ ಸ್ಯಾನಿಟೈಸರ್‌, ಪರೀಕ್ಷೆ ಬರೆದ ವಿದ್ಯಾರ್ಥಿಗಳು ಗುಂಪು ಸೇರಿದಂತೆ ನೋಡಿಕೊಳ್ಳುವುದಕ್ಕಾಗಿ ಒಂದೇ ಬಾರಿಗೆ ಕೊಠಡಿಯಿಂದ ಹೊರಗಡೆ ಕಳುಹಿಸದೆ ಇರುವುದು ಹೀಗೆ ನಾನಾ ಕ್ರಮಗಳನ್ನು ಕೈಗೊಳ್ಳಲಾಗಿತ್ತು.

ಸಚಿವರ ಖುದ್ದು ಭೇಟಿ, ಪರಿಶೀಲನೆ:

ಸರ್ಕಾರದ ಮಾರ್ಗಸೂಚಿಗಳನ್ನು ಪರೀಕ್ಷಾ ಕೇಂದ್ರಗಳು ಎಷ್ಟರ ಮಟ್ಟಿಗೆ ಅನುಷ್ಠಾನ ಮಾಡುತ್ತಿವೆ ಎಂಬುದನ್ನು ಖಾತ್ರಿ ಮಾಡಿಕೊಳ್ಳುವುದಕ್ಕಾಗಿ ಖುದ್ದು ಸಚಿವರು ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ರಾಜ್ಯದ ಎಂಟೂವರೆ ಲಕ್ಷ ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗಬಾರದು ಎಂಬ ಎಚ್ಚರಿಕೆ ವಹಿಸಿ ಅವರು ಕೆಲಸ ಮಾಡಿದ್ದು ಎದ್ದು ಕಾಣುತ್ತಿತ್ತು.

click me!