ಮೈಸೂರು: ಹೃದಯಾಘಾತದಿಂದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಸಾವು!

Published : Jan 27, 2025, 12:40 PM ISTUpdated : Jan 27, 2025, 12:51 PM IST
ಮೈಸೂರು: ಹೃದಯಾಘಾತದಿಂದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಸಾವು!

ಸಾರಾಂಶ

ಹೃದಯಾಘಾತದಿಂದ SSLC ವಿದ್ಯಾರ್ಥಿನಿ ಮೃತಪಟ್ಟ ದಾರುಣ ಘಟನೆ ಪಿರಿಯಾಪಟ್ಟಣ ತಾಲೂಕಿನ ಕೆಲ್ಲೂರು ಗ್ರಾಮದಲ್ಲಿ ಕಳೆದ ಮೂರು ದಿನಗಳ ಹಿಂದೆ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಮೈಸೂರು (ಜ.27): ಹೃದಯಾಘಾತದಿಂದ SSLC ವಿದ್ಯಾರ್ಥಿನಿ ಮೃತಪಟ್ಟ ದಾರುಣ ಘಟನೆ ಪಿರಿಯಾಪಟ್ಟಣ ತಾಲೂಕಿನ ಕೆಲ್ಲೂರು ಗ್ರಾಮದಲ್ಲಿ ಕಳೆದ ಮೂರು ದಿನಗಳ ಹಿಂದೆ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ದೀಪಿಕಾ(15) ಮೃತ ವಿದ್ಯಾರ್ಥಿನಿ. ಕೆಲ್ಲೂರು ಗ್ರಾಮದ ನಾಗರಾಜ್, ವಸಂತಾ ಎಂಬುವವರ ಪುತ್ರಿಯಾಗಿರುವ ಮೃತ ವಿದ್ಯಾರ್ಥಿನಿ. ರಾವಂದೂರು ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ ಹತ್ತನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಯಾವುದೇ ಕಾಯಿಲೆಗಳಿರಲಿಲ್ಲ. ಆಟ-ಪಾಠಗಳಲ್ಲಿ ತೊಡಗಿ ಆರೋಗ್ಯವಾಗಿಯೇ ಇದ್ದ ವಿದ್ಯಾರ್ಥಿನಿ ಇದ್ದಕ್ಕಿದ್ದಂತೆ ಅಸ್ವಸ್ಥಳಾಗಿದ್ದಾಳೆ. ತಕ್ಷಣ ವಿದ್ಯಾರ್ಥಿನಿಯನ್ನ ಆಸ್ಪತ್ರೆಗೆ ಕರೆದೊಯ್ಯಲು ಯತ್ನಿಸಿದರೂ ಆಸ್ಪತ್ರೆಗೆ ರವಾನಿಸುವ ವೇಳೆ ಮಾರ್ಗಮಧ್ಯೆದಲ್ಲೇ ದೀಪಿಕಾ ಸಾವನ್ನಪ್ಪಿದ್ದಾರೆ. ಮಗಳ ಅಕಾಲಿಕ ಸಾವಿನಿಂದ ಪೋಷಕರು ಶಾಕ್‌ ಒಳಗಾಗಿದ್ದಾರೆ.

ಇದನ್ನೂ ಓದಿ: ಹಠಾತ್ ಹೃದಯಾಘಾತದ ಅಪಾಯ ತಪ್ಪಿಸಲು ಈ ಸಲಹೆಗಳನ್ನು ಪಾಲಿಸಿ 

ಚಾಮರಾಜನಗರದಲ್ಲೂ ವಿದ್ಯಾರ್ಥಿನಿಗೆ ಹೃದಯಾಘಾತ:

ಇತ್ತೀಚಿಗೆ ಗಡಿನಾಡು ಚಾಮರಾಜನಗರ ಜಿಲ್ಲೆಯಲ್ಲಿ ಮೂರನೇ ತರಗತಿ ವಿದ್ಯಾರ್ಥಿನಿ ಹೃದಯಾಘಾತ ಸಂಭವಿಸಿ ಮೃತಪಟ್ಟಿದ್ದಳು. ಶಿಕ್ಷಕಿಗೆ ನೋಟ್ಸ್ ತೋರಿಸುತ್ತಿರುವಾಗಲೇ ಕುಸಿದು ಬಿದ್ದ ವಿದ್ಯಾರ್ಥಿನಿಗೆ ಕಡಿಮೆ ರಕ್ತದೊತ್ತಡ ಹೃದಯಾಘಾತದಿಂದ ಸಾವನ್ನಪ್ಪಿದ್ದಳ. ಪ್ರಕರಣ ಮಾಸುವ ಮುನ್ನವೇ ಇದೀಗ ಪಿರಿಯಾಪಟ್ಟಣದ ಹತ್ತನೇ ತರಗತಿ ವಿದ್ಯಾರ್ಥಿನಿ ಹೃದಯಾಘಾತದಿಂದ ಮೃತಪಟ್ಟಿರುವುದು ಪೋಷಕರ ಆತಂಕಕ್ಕೆ ಕಾರಣವಾಗಿದೆ.

ಹಿಂದೆಲ್ಲ ಹಿರಿಯರಲ್ಲಿ, ದಢೂತಿ ದೇಹ, ತೂಕ ಹೆಚ್ಚಳ ಇರುವವರಿಗೆ ಹೃದಯಾಘಾತ ಸಂಭವಿಸುವುದು ಸಾಮಾನ್ಯವಾಗಿತ್ತು. ಆದರೆ ಕೊರೊನಾ ಬಳಿಕ ಮಕ್ಕಳಲ್ಲಿ ಹೃದಯಾಘಾತ ಪ್ರಮಾಣ ಹೆಚ್ಚಳವಾಗಿರುವುದು ಆತಂಕ ಮೂಡಿಸಿದೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸಿಎಂ ಕುರ್ಚಿ ಪೈಪೋಟಿಯಲ್ಲಿ ರೈತ ಸಮಸ್ಯೆ ಗೌಣ: ಬಿ.ವೈ.ವಿಜಯೇಂದ್ರ ಟೀಕೆ
ಕರ್ನಾಟಕದಲ್ಲಿ ಶೇ.63 ಭ್ರಷ್ಟಾಚಾರ: ಸಿಬಿಐ ತನಿಖೆಗೆ ಒತ್ತಾಯಿಸಿದ ಆರ್‌.ಅಶೋಕ್‌