
ಬೆಂಗಳೂರು (ಏ.21): ಲಾಕ್‌ಡೌನ್ ವಿಸ್ತರಣೆಯಾಗಿರುವುದರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ಮುಂದೆ ಹೋಗುತ್ತಿವೆ. ಈ ವೇಳೆ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳು ಆಂತಕಕ್ಕೆ ಒಳಗಾಗಬಾರೆಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ವಿದ್ಯಾರ್ಥಿಗಳಿಗೆ ಕರೆ ಮಾಡಿ ಆತ್ಮವಿಶ್ವಾಸ ತುಂಬಿದ್ದಾರೆ.
ಸೋಮವಾರ ಸಚಿವರು ಕೆಲವು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಕರೆ ಮಾಡಿ ದೂರವಾಣಿಯಲ್ಲಿ ಮಾತನಾಡಿದ್ದಾರೆ. ಪರೀಕ್ಷೆಯ ಬಗ್ಗೆ ವಿದ್ಯಾರ್ಥಿಗಳು ಆತಂಕಕ್ಕೊಳಗಾಗುವುದು ಬೇಡ. ಆರೋಗ್ಯದ ಬಗ್ಗೆ ಹೆಚ್ಚು ಗಮನ ನೀಡಿ. ದೂರದರ್ಶನ, ಆಕಾಶವಾಣಿ ಸೇರಿದಂತೆ ಹಲವು ಮಾಧ್ಯಮಗಳ ಮೂಲಕ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಪೂರ್ವ ಸಿದ್ಧತೆಗೆ ಮಾರ್ಗದರ್ಶಿ ತರಗತಿಗಳನ್ನು ಶೀಘ್ರದಲ್ಲೇ ಪ್ರಸಾರ ಮಾಡಲಿದ್ದೇವೆ. ಇದನ್ನು ಫಾಲೋ ಮಾಡಬೇಕೆಂದು ಸಲಹೆ ನೀಡಿದರು.
ಲಾಕ್‌ಡೌನ್ ವಿಸ್ತರಣೆ: SSLC, PUC ವಿದ್ಯಾರ್ಥಿಗಳಿಗೆ ಸುರೇಶ್ ಕುಮಾರ್ ಕಿವಿ ಮಾತು..!
ಬಳ್ಳಾರಿ, ಕೊಪ್ಪಳ, ರಾಯಚೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಸಚಿವರು ಕರೆ ಮಾಡಿದ್ದರು. ಕರೊನಾ ವೇಳೆ ಜಾಗೃತರಾಗಿರಬೇಕು. ಮಾÓ್ಕ… ಹಾಕಿಕೊಳ್ಳಬೇಕು. ಇದೇ ವೇಳೆ ಪರೀಕ್ಷೆಗೂ ಸಜ್ಜುಗೊಳ್ಳಬೇಕು. ಲಾಕ್‌ಡೌನ್ ಮುಗಿದ ಬಳಿಕ ಪರೀಕ್ಷೆ ಆಯೋಜಿಸುತ್ತೇವೆ, ಇದರಲ್ಲಿ ಯಾವುದೇ ಗೊಂದಲ ಬೇಡವೆಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ