ಲೋಕಸಭಾ ಚುನಾವಣೆ ಹೊತ್ತಲ್ಲೇ ಮತ್ತೆ ಮುನ್ನಲೆಗೆ ಬಂದ ಕುರುಬ ಸಮಾಜ ಎಸ್‌ಟಿ ಮೀಸಲಾತಿ ಹೋರಾಟ!

Published : Oct 01, 2023, 08:34 PM IST
ಲೋಕಸಭಾ ಚುನಾವಣೆ ಹೊತ್ತಲ್ಲೇ ಮತ್ತೆ ಮುನ್ನಲೆಗೆ ಬಂದ ಕುರುಬ ಸಮಾಜ ಎಸ್‌ಟಿ ಮೀಸಲಾತಿ ಹೋರಾಟ!

ಸಾರಾಂಶ

ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಕುರುಬ ಸಮುದಾಯದ ಎಸ್‌ಟಿ ಮೀಸಲಾತಿ ಹೋರಾಟ ಮತ್ತೆ ಮುನ್ನಲೆಗೆ ಬಂದಿದೆ. ಅಕ್ಟೋಬರ್ 2 ಮತ್ತು 3 ರಂದು ಬೆಳಗಾವಿಯಲ್ಲಿ ನಡೆಯಲಿರುವ ಸಮುದಾಯದ ಒಂಬತ್ತನೇ ವಾರ್ಷಿಕ ಸಭೆಯಲ್ಲಿ ಕುರುಬರು ತಮ್ಮ ರಾಜಕೀಯ ಶಕ್ತಿಯನ್ನು ವೃದ್ದಿಸಿಕೊಳ್ಳುವ ನಿಟ್ಟಿನಲ್ಲಿ  ಸಿದ್ಧತೆ ನಡೆಸಿದ್ದಾರೆ.

ಚಿಕ್ಕೋಡಿ (ಅ.1): ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಕುರುಬ ಸಮುದಾಯದ ಎಸ್‌ಟಿ ಮೀಸಲಾತಿ ಹೋರಾಟ ಮತ್ತೆ ಮುನ್ನಲೆಗೆ ಬಂದಿದೆ.

ಅಕ್ಟೋಬರ್ 2 ಮತ್ತು 3 ರಂದು ಬೆಳಗಾವಿಯಲ್ಲಿ ನಡೆಯಲಿರುವ ಸಮುದಾಯದ ಒಂಬತ್ತನೇ ವಾರ್ಷಿಕ ಸಭೆಯಲ್ಲಿ ಕುರುಬರು ತಮ್ಮ ರಾಜಕೀಯ ಶಕ್ತಿಯನ್ನು ವೃದ್ದಿಸಿಕೊಳ್ಳುವ ನಿಟ್ಟಿನಲ್ಲಿ  ಸಿದ್ಧತೆ ನಡೆಸಿದ್ದಾರೆ.

ಅಖಿಲ ಭಾರತ ರಾಷ್ಟ್ರೀಯ ಕುರುಬ ಸಮುದಾಯದ ಮಹಾಅಧಿವೇಶನ ನೆಡಸುತ್ತಿರುವ ವಿಚಾರ ಸಂಬಂಧ ಸಿದ್ದರಾಮಯ್ಯರ ಆಪ್ತ, ಚಿಕ್ಕೋಡಿ ಸಂಘಟನಾತ್ಮಕ ಜಿಲ್ಲೆ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಲಕ್ಷ್ಮಣರಾವ್  ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದರು. 

ಬಿಜೆಪಿ-ಜೆಡಿಎಸ್ ಮೈತ್ರಿ: ಸಭೆಯಲ್ಲಿ ಸರ್ವಾನುಮತದಿಂದ ಒಪ್ಪಿಗೆ ನೀಡಿದ ಜೆಡಿಎಸ್ ಶಾಸಕರು !

ಕುರುಬ ಸಮುದಾಯಕ್ಕೆ ಎಸ್‌ಟಿ ಮೀಸಲಾತಿ ಜೊತೆ ಲೋಕಸಭಾ ಚುನಾವಣೆ ಟಿಕೆಟ್‌ಗೂ ಬೆಳಗಾವಿಯ ಕುರುಬ ಸಮಾಜದ ಕಾಂಗ್ರೆಸ್ ನಾಯಕರ ಡಿಮ್ಯಾಂಡ್.  ಮಹಾ ಅಧಿವೇಶನದಲ್ಲಿ ಕುರುಬ ಸಮುದಾಯಕ್ಕೆ ಎಸ್‌ಟಿ ಮೀಸಲಾತಿ ನೀಡಲು ಕೇಂದ್ರಕ್ಕೆ ಆಗ್ರಹಿಸುತ್ತೇವೆ

ಕುರುಬ ಸಮುದಾಯಕ್ಕೆ ಎಸ್ ಟಿ ಮೀಸಲಾತಿ ಕುರಿತು ಕುಲಶಾಸ್ತ್ರೀಯ ಅಧ್ಯಯನ ವರದಿಗಾಗಿ ಈಗಾಗಲೇ ಆಗಿನ ಸಿಎಂ ಬಸವರಾಜ ಬೊಮ್ಮಾಯಿ ಪಡೆದಿದ್ರು. ಹೊಸ ಸರಕಾರ ಬಂದ ನಂತರ ಸಿಎಂ ಸಿದ್ದರಾಮಯ್ಯನವರು ಕೇಂದ್ರಕ್ಕೆ ಶಿಫಾರಸು ಮಾಡಿ ಕಳಿಸಿದ್ದಾರೆ. ಕೇಂದ್ರ ಸರ್ಕಾರ ಜಾರಿ ಮಾಡಬೇಕೆಂಬುದು ನಮ್ಮ ಮೊದಲನೇ ಬೇಡಿಕೆ. ಕಳೆದ 50 ವರ್ಷಗಳಲ್ಲಿ ರಾಜಕೀಯ ರಂಗದಲ್ಲಿ ಕುರುಬ ಸಮುದಾಯಕ್ಕೆ ಪ್ರಾತಿನಿಧ್ಯ ಸಿಕ್ಕಿಲ್ಲ. ಲೋಕಸಭೆ, ರಾಜ್ಯಸಭೆ, ವಿಧಾನ ಪರಿಷತ್‌ನಲ್ಲಿ ಕುರುಬ ಸಮುದಾಯಕ್ಕೆ ಪ್ರಾತಿನಿಧ್ಯ ಸಿಕ್ಕಿಲ್ಲ. ಹೀಗಾಗಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮಿಸಲಾತಿ ಜೊತೆಗೆ ಕುರುಬ ಸಮುದಾಯಕ್ಕೆ ಟಿಕೆಟ್ ನೀಡಬೇಕು. ಬೆಳಗಾವಿ, ಚಿಕ್ಕೋಡಿ ಎರಡು ಲೋಕಸಭಾ ಕ್ಷೇತ್ರ ಪೈಕಿ ಒಂದನ್ನ ಕುರುಬ ಸಮುದಾಯಕ್ಕೆ ನೀಡಬೇಕು ಅ.3ರಂದು ನಡೆಯುವ ಮಹಾಅಧಿವೇಶನದಲ್ಲಿ ಈ ಕುರಿತು ಒತ್ತಾಯಿಸುತ್ತೇವೆ ಎಂದರು.

ಇನ್ನೀಗ ಮೀಸಲಾತಿ ಜಾರಿ ಮಾಡಬೇಕಿರುವುದು ಕೇಂದ್ರ ಸರ್ಕಾರ. ನಾಳೆ ನಡೆಯಲಿರುವ ಕುರುಬ ಸಮುದಾಯದ ಸಮಾವೇಶದಲ್ಲಿ ಕೇಂದ್ರ ಸರ್ಕಾರ  ಜಾರಿ ಮಾಡಬೇಕೆಂದು ಸಮಾವೇಶ ಮೂಲಕ ಒತ್ತಾಯಿಸುತ್ತೇವೆ.

ಕಾಂಗ್ರೆಸ್ ಹೈಕಮಾಂಡ್ ವಿರುದ್ಧ ಅಸಮಾಧಾನ:

ಕುರುಬ ಸಮುದಾಯಕ್ಕೆ ಲೋಕಸಭಾ ಟಿಕೆಟ್ ನೀಡಬೇಕು. ಬೆಳಗಾವಿ, ಚಿಕ್ಕೋಡಿ ಎರಡು ಕ್ಷೇತ್ರಗಳ ಪೈಕಿ ಒಂದು ಟಿಕೆಟ್ ಕುರುಬ ಸಮುದಾಯಕ್ಕೆ ನೀಡಲಿ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕುರುಬ ಸಮುದಾಯಕ್ಕೆ ಟಿಕೆಟ್ ನೀಡಿಲ್ಲ. 1972ರಿಂದ ಕಿತ್ತೂರು ಕರ್ನಾಟಕ, ಕಲ್ಯಾಣ ಕರ್ನಾಟಕದಲ್ಲಿ ವಿಧಾನ ಪರಿಷತ್, ರಾಜ್ಯಸಭಾ ಸ್ಥಾನ ವಿಚಾರಕ್ಕೆ ಕುರುಬ ಸಮುದಾಯಕ್ಕೆ ಪ್ರಾತಿನಿಧ್ಯ ಸಿಕ್ಕಿಲ್ಲ. ಈ ಬಾರಿ ಲೋಕಸಭಾ ಚುನಾವಣೆಗೆ ಟಿಕೆಟ್ ನೀಡುವಂತೆ ಆಗ್ರಹಿಸುವ ಮೂಲಕ ಕಾಂಗ್ರೆಸ್ ಹೈಕಮಾಂಡ್ ವಿರುದ್ಧ ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸಿದರು.

ಕುಲಶಾಸ್ತ್ರೀಯ ಅಧ್ಯಯನದ ವರದಿ ಅಂಗೀಕರಿಸಲು ಆಗ್ರಹ

ಕಾಂಗ್ರೆಸ್ ಟಿಕೆಟ್‌ಗೆ ಕುರುಬ ಸಮುದಾಯದಲ್ಲೇ ಪೈಪೋಟಿ:

ಮುಂಬರುವ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಟಿಕೆಟ್‌ ಪಡೆಯಲು ಕುರುಬ ಸಮುದಾಯದಲ್ಲೇ ತೀವ್ರ ಪೈಪೋಟಿ ಏರ್ಪಟ್ಟಿರುವ ವಿಚಾರ ಸಂಬಂಧ ಮಾತನಾಡಿದ ಅವರು, ಕಾಂಗ್ರೆಸ್ ಹೈಕಮಾಂಡ್ ಯಾರಿಗೆ ಕೊಡ್ತಾರೋ ಕೊಡಲಿ, ಒಟ್ಟಿನಲ್ಲಿ ಕುರುಬ ಸಮುದಾಯಕ್ಕೆ ಟಿಕೆಟ್ ನೀಡಲಿ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಶ್ರೀರಂಗಪಟ್ಟಣ ಮಸೀದಿ ಕೆಡವುತ್ತೇವೆಂದರೆ? ನಾವು ಕೈಗೆ ಬಳೆ ತೊಟ್ಟು ಕೂತಿಲ್ಲ-ಅಬ್ದುಲ್ ರಜಾಕ್!
ಐಷಾರಾಮಿ ಕಾರ್ಟಿಯರ್ ವಾಚ್‌: ಲೋಕಾಯುಕ್ತ ಅಫಿಡವಿಟ್ ರಿವೀಲ್ ಮಾಡಿದ ಡಿ.ಕೆ. ಶಿವಕುಮಾರ್!