ದುಡ್ಡಿನ ಭಾಗ್ಯ: ಅಕ್ಕಿ ಬದಲು ಹಣ ನೀಡಿಕೆಗೆ ನಾಳೆ ಚಾಲನೆ

By Kannadaprabha News  |  First Published Jul 9, 2023, 1:30 AM IST

ಜುಲೈ 10ರಂದು ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ನಡೆಯಲಿರುವ ಸಮಾರಂಭದಲ್ಲಿ ಐದು ಕೆ.ಜಿ. ಅಕ್ಕಿ ಬದಲಾಗಿ ಪ್ರತಿ ಪಡಿತರ ಫಲಾನುಭವಿಗಳಿಗೆ ತಲಾ 170 ರು. ಪಾವತಿ ಮಾಡುವ ಕಾರ್ಯಕ್ಕೆ ಚಾಲನೆ ನೀಡಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ


ಬೆಂಗಳೂರು(ಜು.09):  ರಾಜ್ಯದ ಕಾಂಗ್ರೆಸ್‌ ಸರ್ಕಾರದ 2ನೇ ಗ್ಯಾರಂಟಿಯಾದ ಅನ್ನಭಾಗ್ಯ ಯೋಜನೆಯಡಿ ತಲಾ 5 ಕೆ.ಜಿ. ಅಕ್ಕಿ ಹಾಗೂ ಉಳಿದ 5 ಕೆ.ಜಿ. ಅಕ್ಕಿ ಬದಲು ಹಣ ಪಾವತಿ ಮಾಡುವ ಕಾರ್ಯಕ್ಕೆ ಸೋಮವಾರ (ಜುಲೈ 10) ಅಧಿಕೃತವಾಗಿ ಚಾಲನೆ ಸಿಗಲಿದೆ.

ಜುಲೈ 10ರಂದು ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ನಡೆಯಲಿರುವ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಐದು ಕೆ.ಜಿ. ಅಕ್ಕಿ ಬದಲಾಗಿ ಪ್ರತಿ ಪಡಿತರ ಫಲಾನುಭವಿಗಳಿಗೆ ತಲಾ 170 ರು. ಪಾವತಿ ಮಾಡುವ ಕಾರ್ಯಕ್ಕೆ ಚಾಲನೆ ನೀಡಲಿದ್ದಾರೆ.

Tap to resize

Latest Videos

ಅನ್ನಭಾಗ್ಯ ಯೋಜನೆಗೆ ಮತ್ತೆರಡು ಷರತ್ತುಗಳು ಅನ್ವಯ: ನೀವು ಹಣ ಪಡೆಯಲು ಅರ್ಹರೇ..

ಈಗಾಗಲೇ ಆಹಾರ ಇಲಾಖೆ ಸಕಲ ಸಿದ್ಧತೆ ಮಾಡಿಕೊಂಡಿದ್ದು ಯೋಜನೆ ಜಾರಿಯಾದ ದಿನದಿಂದ 10 ದಿನಗಳೊಳಗೆ ಎಲ್ಲ ಪಡಿತರ ಚೀಟಿದಾರರ ಖಾತೆಗೆ ಹಣ ಪಾವತಿ ಮಾಡಲಿದೆ. ಯಾವುದೇ ರೀತಿಯ ತಾಂತ್ರಿಕ ಸಮಸ್ಯೆಗಳು ಇಲ್ಲದಿದ್ದರೆ ನಿಗದಿತ ಅವಧಿಯೊಳಗೆ ಫಲಾನುಭವಿಗಳ ಖಾತೆಗೆ ಇಲ್ಲವೇ ಪಡಿತರ ಕುಟುಂಬದ ಯಜಮಾನ ಅಥವಾ ಯಜಮಾನಿಯ ಖಾತೆಗೆ ಹಣ ಸಂದಾಯವಾಗಲಿದೆ. ಒಂದು ವೇಳೆ ಯಾವುದೇ ರೀತಿಯ ಸಮಸ್ಯೆಗಳು ಎದುರಾದರೆ, ಅದು ಇತ್ಯರ್ಥಗೊಂಡ ಬಳಿಕ ಬ್ಯಾಂಕ್‌ ಖಾತೆಗೆ ನೇರವಾಗಿ ಸಂದಾಯ ಮಾಡಲಾಗುವುದು ಎಂದು ಇಲಾಖೆ ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಅನ್ನಭಾಗ್ಯ ಯೋಜನೆಗೆ ಮುಹೂರ್ತ ಫಿಕ್ಸ್: ಯಾರಿಗೆಲ್ಲಾ ಸಿಗುತ್ತೆ ದುಡ್ಡು ?

ಆಧಾರ ಕಾರ್ಡ್‌ನೊಂದಿಗೆ ಪಡಿತರ ಚೀಟಿ ಮತ್ತು ಬ್ಯಾಂಕ್‌ ಖಾತೆ ಲಿಂಕ್‌ ಆಗಿದ್ದ ಫಲಾನುಭವಿಗಳಿಗೆ ಹಣ ಸಂದಾಯ ಆಗುವುದರಲ್ಲಿ ಯಾವುದೇ ಸಮಸ್ಯೆಯಿಲ್ಲ. ಒಂದು ವೇಳೆ ಬ್ಯಾಂಕ್‌ ಖಾತೆ ಇಲ್ಲದವರು ಹೊಸದಾಗಿ ಖಾತೆ ಆರಂಭಿಸಿ, ಅದರ ಮಾಹಿತಿ ನೀಡಬೇಕು. ಒಬ್ಬ ಫಲಾನುಭವಿಗೆ 170 ರು. ಸಂದಾಯವಾಗಲಿದೆ. ಅನ್ನಭಾಗ್ಯ ಯೋಜನೆಯಡಿ ಪ್ರತಿ ಫಲಾನುಭವಿಗೆ ತಲಾ 10 ಕೆ.ಜಿ.ಯಂತೆ ಅಕ್ಕಿ ವಿತರಣೆ ಮಾಡಲು ಅನುಕೂಲವಾಗುವಂತೆ ಸಮರ್ಪಕವಾಗಿ ಅಕ್ಕಿ ಅಥವಾ ಇತರೆ ಆಹಾರ ಧಾನ್ಯಗಳು ಲಭ್ಯವಾಗುವವರೆಗೂ ಮಾತ್ರ ಹಣ ಪಾವತಿ ಮಾಡಲಾಗುವುದು. ಇನ್ನು ಅಕ್ಕಿ ಸಿಕ್ಕ ಬಳಿಕ ಅಕ್ಕಿ ವಿತರಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಹಿಂದೆಯೇ ತಿಳಿಸಿದ್ದಾರೆ.

ಪ್ರಸ್ತುತ ರಾಜ್ಯದಲ್ಲಿ 10,89,899 ಅಂತ್ಯೋದಯ ಕಾರ್ಡುಗಳಿದ್ದು ಒಟ್ಟು 44,84,178 ಮಂದಿ ಫಲಾನುಭವಿಗಳು ಹಾಗೂ 1,17,41,561 ಬಿಪಿಎಲ್‌ ಕಾರ್ಡುಗಳಿದ್ದು, 3,97,64,489 ಮಂದಿ ಫಲಾನುಭವಿಗಳಿದ್ದಾರೆ. ಹೀಗೆ ಒಟ್ಟು 4.42 ಕೋಟಿಗೂ ಅಧಿಕ ಫಲಾನುಭವಿಗಳು ಹಣ ಪಡೆಯಲು ಅರ್ಹರಾಗಿದ್ದಾರೆ ಎಂದು ಆಹಾರ ಇಲಾಖೆ ತಿಳಿಸಿದೆ.

click me!