ಗಾಂಧೀಜಿ ಚಿಂತನೆಗಳನ್ನು ಆಧಾರವಾಗಿಟ್ಟುಕೊಂಡು ರಾಜ್ಯ ಸರ್ಕಾರ ಆಡಳಿತ : ಸಿಎಂ

Published : Oct 03, 2023, 06:59 AM IST
ಗಾಂಧೀಜಿ ಚಿಂತನೆಗಳನ್ನು ಆಧಾರವಾಗಿಟ್ಟುಕೊಂಡು ರಾಜ್ಯ ಸರ್ಕಾರ ಆಡಳಿತ : ಸಿಎಂ

ಸಾರಾಂಶ

ಮಹಾತ್ಮ ಗಾಂಧೀಜಿ ಅವರ ಚಿಂತನೆಗಳನ್ನು ಆಧಾರವಾಗಿಟ್ಟುಕೊಂಡು ರಾಜ್ಯ ಸರ್ಕಾರ ಕಾರ್ಯಕ್ರಮಗಳನ್ನು ರೂಪಿಸಿ, ಅನುಷ್ಠಾನಗೊಳಿಸುತ್ತಿದೆ. ಆ ಮೂಲಕ ಮಹಾತ್ಮ ಗಾಂಧಿ ಅವರ ಚಿಂತನೆಗಳಿಗೆ ಗೌರವ ನೀಡುವ ಕೆಲಸ ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಬೆಂಗಳೂರು (ಅ.3) :  ಮಹಾತ್ಮ ಗಾಂಧೀಜಿ ಅವರ ಚಿಂತನೆಗಳನ್ನು ಆಧಾರವಾಗಿಟ್ಟುಕೊಂಡು ರಾಜ್ಯ ಸರ್ಕಾರ ಕಾರ್ಯಕ್ರಮಗಳನ್ನು ರೂಪಿಸಿ, ಅನುಷ್ಠಾನಗೊಳಿಸುತ್ತಿದೆ. ಆ ಮೂಲಕ ಮಹಾತ್ಮ ಗಾಂಧಿ ಅವರ ಚಿಂತನೆಗಳಿಗೆ ಗೌರವ ನೀಡುವ ಕೆಲಸ ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಗಾಂಧಿ ಸ್ಮಾರಕ ನಿಧಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸೇರಿದಂತೆ ಇನ್ನಿತರ ಇಲಾಖೆ, ಸಂಸ್ಥೆಗಳ ಸಹಯೋಗದಲ್ಲಿ ಸೋಮವಾರ ಗಾಂಧಿ ಭವನದಲ್ಲಿ ಏರ್ಪಡಿಸಲಾಗಿದ್ದ ಮಹಾತ್ಮ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

 

ಲೋಕಸಭಾ ಚುನಾವಣೆ ಹೊತ್ತಲ್ಲೇ ಮತ್ತೆ ಮುನ್ನಲೆಗೆ ಬಂದ ಕುರುಬ ಸಮಾಜ ಎಸ್‌ಟಿ ಮೀಸಲಾತಿ ಹೋರಾಟ!

ಮಹಾತ್ಮ ಗಾಂಧಿ ಅವರು ಹಳ್ಳಿಗಳ ಅಭಿವೃದ್ಧಿಯಿಂದಷ್ಟೇ ದೇಶದ ಅಭಿವೃದ್ಧಿ ಸಾಧ್ಯ ಎಂದು ಬಲವಾಗಿ ನಂಬಿದ್ದರು. ಅದಕ್ಕಾಗಿಯೇ ದೇಶಕ್ಕಾಗಿ ಸರಳ ಆರ್ಥಿಕ ನೀತಿಯನ್ನು ಅವರು ಪ್ರತಿಪಾದಿಸಿ, ಹಳ್ಳಿಗಳ ಬೆಳವಣಿಗೆ ಬಗ್ಗೆ ತಿಳಿಸಿದ್ದರು. ಮಹಾತ್ಮ ಗಾಂಧೀಜಿ ಅವರು ಹಾಕಿಕೊಟ್ಟ ಮಾರ್ಗ ಹಾಗೂ ಅವರ ಚಿಂತನೆಯಂತೆ ಈಗ ರಾಜ್ಯ ಸರ್ಕಾರ ಕೆಲಸ ಮಾಡುತ್ತಿದೆ. ರಾಜ್ಯದ ಎಲ್ಲ ವಲಯ, ಪ್ರದೇಶ ಅಭಿವೃದ್ಧಿ ಆಗುವಂತಹ ಕಾರ್ಯವನ್ನು ಮಾಡುತ್ತಿದೆ. ಸರ್ಕಾರದ ಕಾರ್ಯಕ್ರಮಗಳು ಗಾಂಧೀಜಿ ಅವರ ಚಿಂತನೆಯಂತೆಯೇ ರೂಪಿಸಿ, ಅನುಷ್ಠಾನಗೊಳಿಸಲಾಗುತ್ತಿದೆ. ಆ ಮೂಲಕ ಮಹಾತ್ಮ ಗಾಂಧಿಗೆ ಗೌರವ ಸೂಚಿಸಲಾಗುತ್ತಿದೆ ಎಂದರು.

ಗಾಂಧೀಜಿ ಅವರ ಜೀವನ ಶೈಲಿ, ಚಿಂತನೆಗಳಿಂದಾಗಿ ರವೀಂದ್ರನಾಥ ಠಾಗೋರ್‌ ಅವರು ಗಾಂಧಿ ಅವರನ್ನು ಮಹಾತ್ಮ ಎಂದು ಕರೆದರೆ, ಸುಭಾಷಚಂದ್ರ ಬೋಸ್‌ ಅವರು ರಾಷ್ಟ್ರಪಿತ ಎಂದು ಸಂಭೋಧಿಸಿದ್ದರು. ದೇಶಕ್ಕೆ ಸ್ವಾತಂತ್ರ್ಯ ಬಂದಾಗಲೂ ಅದನ್ನು ಸಂಭ್ರಮಿಸದೆ ದೇಶ ವಿಭಜನೆಯಿಂದ ಉಂಟಾದ ಸಮಸ್ಯೆಗಳನ್ನು ನಿವಾರಿಸುವಲ್ಲಿ ಗಾಂಧೀಜಿ ಮಗ್ನರಾಗಿದ್ದರು. ಹೀಗಾಗಿ ದೇಶಕ್ಕೆ ಗಾಂಧಿ ಮಾತ್ರ ಮಹಾತ್ಮ, ರಾಷ್ಟ್ರಪಿತ ಎಂಬುದನ್ನು ಎಲ್ಲರೂ ತಿಳಿಯಬೇಕು. ಗಾಂಧೀಜಿ ಅವರು ಬದುಕಿದ ರೀತಿಯಲ್ಲಿ ಬದುಕಲು ಸಾಧ್ಯವಾಗದಿದ್ದರೂ, ಅವರ ಚಿಂತನೆ, ಹಾಕಿಕೊಟ್ಟ ದಾರಿಯಲ್ಲಿ ಸಾಗುವಂತಹ ಪ್ರಯತ್ನ ನಾವೆಲ್ಲರೂ ಮಾಡಬೇಕು. ಆಮೂಲಕ ಅವರಿಗೆ ಗೌರವ ನೀಡಲು ಪ್ರತಿಯೊಬ್ಬರೂ ಮುಂದಾಗಬೇಕು ಎಂದು ಹೇಳಿದರು.

ಗಾಂಧೀಜಿ ಅವರಂತೆ ದೇಶ ಕಂಡ ಮತ್ತೊಬ್ಬ ಸರಳ ವ್ಯಕ್ತಿತ್ವ ಎಂದರೆ ಮಾಜಿ ಪ್ರಧಾನಿ ಲಾಲ್‌ ಬಹದ್ದೂರ್‌ ಶಾಸ್ತ್ರಿ ಅವರದ್ದು. ದೇಶ ಕಂಡ ಅತ್ಯಂತ ಪ್ರಾಮಾಣಿಕ ರಾಜಕಾರಣಿ. ಅವರು ಬಿಟ್ಟು ಹೋಗಿರುವ ಮೌಲ್ಯಗಳನ್ನು ನಾವೆಲ್ಲರೂ ಅಳವಡಿಸಿಕೊಳ್ಳಬೇಕು. ಆಮೂಲಕ ದೇಶದಲ್ಲಿ ಪ್ರಾಮಾಣಿಕತೆ ನೆಲೆ ನಿಲ್ಲುವಂತೆ ಮಾಡಬೇಕು ಎಂದು ಅಭಿಪ್ರಾಯಪಟ್ಟರು.

ಗಾಂಧಿ ಸ್ಮಾರಕ ನಿಧಿ ಅಧ್ಯಕ್ಷ ವೂಡೇ ಪಿ.ಕೃಷ್ಣ ಮಾತನಾಡಿ, ದೇಶಕ್ಕೆ ತಮ್ಮ ಜೀವನವನ್ನೇ ತ್ಯಾಗ ಮಾಡಿದ ಮಹಾತ್ಮ ಗಾಂಧೀಜಿ ಅವರ ಮಹತ್ವವನ್ನು ನಾವೆಲ್ಲರೂ ಅರಿಯಬೇಕು. ಆದರೆ, ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಮಹಾತ್ಮ ಗಾಂಧಿ ಕುರಿತಂತೆ ತಪ್ಪು ಮಾಹಿತಿ ಹರಡುತ್ತಾ, ಅವರಿಗೆ ಅವಹೇಳನ ಮಾಡಲಾಗುತ್ತಿದೆ. ಗಾಂಧಿ ಅವರಿಗೆ ಅಪಮಾನ ಮಾಡುವ ಕುತಂತ್ರಿಗಳನ್ನು ಪತ್ತೆ ಶಿಕ್ಷಿಸುವ ಕೆಲಸವನ್ನು ರಾಜ್ಯ ಸರ್ಕಾರ ಮಾಡಬೇಕು ಎಂದರು.

 

ಬಿಜೆಪಿ-ಜೆಡಿಎಸ್ ಮೈತ್ರಿ: ಸಭೆಯಲ್ಲಿ ಸರ್ವಾನುಮತದಿಂದ ಒಪ್ಪಿಗೆ ನೀಡಿದ ಜೆಡಿಎಸ್ ಶಾಸಕರು 

ಕಾರ್ಯಕ್ರಮದಲ್ಲಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್‌.ಕೆ. ಪಾಟೀಲ್‌, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್‌ ಅಹಮದ್‌, ಗಾಂಧಿ ಸ್ಮಾರಕ ನಿಧಿ ಉಪಾಧ್ಯಕ್ಷ ವಿಶು ಕುಮಾರ್‌ ಸೇರಿದಂತೆ ಇತರರಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಅಂಕಣ | ರಾಜ್ಯದಲ್ಲಿ ಕಾಂಗ್ರೆಸ್‌ನಿಂದ ಉದ್ಯೋಗದ ನವಯುಗ!
ಗ್ರಾಪಂ ಅಧ್ಯಕ್ಷರೂ ಮತ್ತು ಹಸಿರು ಪೆನ್ನೂ...!