ಹೊಸ 4244 ಅಂಗನವಾಡಿಗಳ ಆರಂಭಕ್ಕೆ ರಾಜ್ಯ ಸರ್ಕಾರ ಒಪ್ಪಿಗೆ

By Govindaraj S  |  First Published Sep 4, 2022, 3:00 AM IST

ಬಡವರು ಹೆಚ್ಚಾಗಿ ವಾಸಿಸುವ ಹಾಗೂ ವಲಸೆ, ಭೂಮಿರಹಿತ ಕಾರ್ಮಿಕರು ಹೆಚ್ಚಾಗಿರುವ ರಾಜ್ಯದ ಗ್ರಾಮೀಣ ಮತ್ತು ನಗರ ಭಾಗಗಳಲ್ಲಿ 268.98 ಕೋಟಿ ರು. ವೆಚ್ಚದಲ್ಲಿ ಹೊಸದಾಗಿ 4244 ಅಂಗನವಾಡಿ ಕೇಂದ್ರಗಳನ್ನು ಪ್ರಾರಂಭಿಸಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಆಡಳಿತಾತ್ಮಕ ಅನುಮೋದನೆ ನೀಡಿದೆ.


ಬೆಂಗಳೂರು (ಸೆ.04): ಬಡವರು ಹೆಚ್ಚಾಗಿ ವಾಸಿಸುವ ಹಾಗೂ ವಲಸೆ, ಭೂಮಿರಹಿತ ಕಾರ್ಮಿಕರು ಹೆಚ್ಚಾಗಿರುವ ರಾಜ್ಯದ ಗ್ರಾಮೀಣ ಮತ್ತು ನಗರ ಭಾಗಗಳಲ್ಲಿ 268.98 ಕೋಟಿ ರು. ವೆಚ್ಚದಲ್ಲಿ ಹೊಸದಾಗಿ 4244 ಅಂಗನವಾಡಿ ಕೇಂದ್ರಗಳನ್ನು ಪ್ರಾರಂಭಿಸಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಆಡಳಿತಾತ್ಮಕ ಅನುಮೋದನೆ ನೀಡಿದೆ. 

‘ಮಕ್ಕಳ ಸಮಗ್ರ ಅಭಿವೃದ್ಧಿ ಯೋಜನೆಯ’ ಅಡಿ ಗ್ರಾಮೀಣ ಭಾಗಗಳಲ್ಲಿ 1,655 ಹಾಗೂ ನಗರ ಪ್ರದೇಶದಲ್ಲಿ 2,589 ಅಂಗನವಾಡಿ ಕೇಂದ್ರ ಸ್ಥಾಪನೆಯಾಗಲಿವೆ. ತನ್ಮೂಲಕ ರಾಜ್ಯದ ಸುಮಾರು 16 ಲಕ್ಷ ಕುಟುಂಬಗಳ ಮಕ್ಕಳ ಪೌಷ್ಟಿಕಾಂಶ ಮತ್ತು ಶಾಲೆ ಪೂರ್ವ ಶಿಕ್ಷಣಕ್ಕೆ ಅನುಕೂಲವಾಗಲಿದೆ. ಜತೆಗೆ 8100 ಮಹಿಳೆಯರಿಗೆ ಉದ್ಯೋಗಾವಕಾಶವೂ ದೊರೆಯಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧೀನ ಕಾರ್ಯದರ್ಶಿಗಳು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ. 

Tap to resize

Latest Videos

2750 ಕೋಟಿ ರೂ ಮೊತ್ತದ ಯೋಜನೆಗಳಿಗೆ ಅನುಮೋದನೆ: ಸಚಿವ ಮುರುಗೇಶ್ ನಿರಾಣಿ

ಪ್ರಸ್ತುತ ರಾಜ್ಯದಲ್ಲಿ 66,361 ಅಂಗನವಾಡಿ ಕೇಂದ್ರಗಳು ಇದ್ದು, ಅವುಗಳ ಮೂಲಕ ರಾಜ್ಯದ ಮಕ್ಕಳಿಗೆ, ಗರ್ಭಿಣಿ ಸ್ತ್ರೀಯರಿಗೆ ಹಾಗೂ ಬಾಣಂತಿಯರಿಗೆ ಪೂರಕ ಪೌಷ್ಟಿಕ ಆಹಾರ, ಶಾಲಾ ಪೂರ್ವ ಶಿಕ್ಷಣ, ಪೌಷ್ಟಿಕತೆ ಮತ್ತು ಆರೋಗ್ಯ ಶಿಕ್ಷಣ ಮುಂತಾದ 6 ಸೇವೆಗಳನ್ನು ಒದಗಿಸಲಾಗುತ್ತಿದೆ. ಪ್ರಸ್ತುತ ಈ ಯೋಜನೆಯ ಅಡಿ ಶೇ.56ರಷ್ಟು ಫಲಾನುಭವಿಗಳಿಗೆ ಮಾತ್ರ ಸೌಲಭ್ಯ ನೀಡಲು ಸಾಧ್ಯವಾಗಿದೆ. ಹೀಗಾಗಿ ಈ ಯೋಜನೆಯಿಂದ ಹೊರಗಿರುವ ಬಡವರಿಗೆ 6 ಸೇವೆಗಳನ್ನು ಒದಗಿಸುವ ನಿಟ್ಟಿನಲ್ಲಿ ಆರ್ಥಿಕ ಇಲಾಖೆ ಅನುಮೋದನೆ ಪಡೆದು ಆಡಳಿತಾತ್ಮಕ ಒಪ್ಪಿಗೆ ನೀಡಲಾಗುತ್ತಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಮುಂದಿನ ಬಜೆಟ್‌ನಲ್ಲಿ ಅಂಗನವಾಡಿ ಸಹಾಯಕಿಯರ ಬೇಡಿಕೆ ಈಡೇರಿಕೆ: ಅಂಗನವಾಡಿ ಸಹಾಯಕರು ಮತ್ತು ಕಾರ್ಯಕರ್ತೆಯರು ಅತಿ ಕಡಿಮೆ ವೇತನ ಪಡೆದು ಹೆಚ್ಚು ಕೆಲಸ ಮಾಡುವವರಾಗಿದ್ದಾರೆ. ಅವರ ಬಹುತೇಕ ಬೇಡಿಕೆಗಳು ನ್ಯಾಯಯುತವಾಗಿವೆ. ಕೊರೋನಾ ಸಂಕಷ್ಟದ ಸಮಯದಲ್ಲಿ ತಮ್ಮ ಜೀವದ ಹಂಗು ತೊರೆದು ಜನರ ಜೀವ ಉಳಿಸಿ, ಸರ್ಕಾರದ ಗೌರವವನ್ನು ಕಾಪಾಡಿದವರ ಬೇಡಿಕೆಗಳನ್ನು ಈಡೇರಿಸುವ ಬಗ್ಗೆ ಮುಂದಿನ ಬಜೆಟ್‌ ಅಧಿವೇಶನದಲ್ಲಿ ಸರ್ಕಾರದ ಗಮನ ಸೆಳೆಯುವುದಾಗಿ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.

ಪಟ್ಟಣದಲ್ಲಿ ರಾಜ್ಯ ಅಂಗನವಾಡಿ ಸಹಾಯಕರು ಮತ್ತು ಕಾರ್ಯಕರ್ತೆಯರ ತಾಲೂಕುಮಟ್ಟದ 7ನೇ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು, ಅಂಗನವಾಡಿ ಕಾರ್ಯಕರ್ತೆಯರ ಶ್ರಮದ ಫಲವಾಗಿ ಗ್ರಾಮೀಣ ಭಾಗದ ಮಹಿಳೆಯರ ಮತ್ತು ಮಕ್ಕಳ ರಕ್ಷಣೆ ಮತ್ತು ಆರೋಗ್ಯದ ಮೇಲೆ ಉತ್ತಮ ಪರಿಣಾಮ ಬೀರಿದೆ. ಆದರೆ, ಅಂಗನವಾಡಿ ಯೋಜನೆ ರಚನೆಯೇ ಸರಿಯಾಗಿಲ್ಲ. ಅಂತೆಯೇ ಬಿಸಿಯೂಟ ತಯಾರಕರು ಮತ್ತು ಗ್ರಂಥಾಲಯದ ನೌಕರರ ಸಮಸ್ಯೆಯೂ ಇದೇ ಆಗಿದೆ ಎಂದು ತಿಳಿಸಿದರು.

ಮಾಜಿ ಸಚಿವ ಕಿಮ್ಮನೆ ರತ್ನಾಕರ್‌ ಮಾತನಾಡಿ, ನೂತನ ಶಿಕ್ಷಣ ನೀತಿಯ ಸಮಸ್ಯೆ ಜಟಿಲವಾಗಿದೆ. ಈ ಸಮಸ್ಯೆಗೆ ರಾಜ್ಯ ಸರ್ಕಾರದೊಂದಿಗೆ ನೇರವಾಗಿ ಕೇಂದ್ರ ಸರ್ಕಾರ ಹೊಣೆಯಾಗಿದೆ. ಆರಂಭದಿಂದಲೇ ಇರುವ ಸಮಸ್ಯೆಯೊಂದಿಗೆ ಈಚೆಗೆ ಹೊಸದಾಗಿ ಕೆಲವು ಸೇರಿಕೊಂಡಿದ್ದು, ಹೋರಾಟದ ಮೂಲಕವೇ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಸಂಕಷ್ಟಈ ಕಾರ್ಯಕರ್ತೆಯರಿಗೆ ಎದುರಾಗಿರುವುದು ವಿಷಾದನೀಯ. ಅಂಗನವಾಡಿ ಕಾರ್ಯಕರ್ತರ ಶ್ರಮಕ್ಕೆ ಸರಿಯಾದ ವೇತನ ದೊರಕಬೇಕಿದೆ ಎಂದರು.

ಅವಳನ್ನ ರೇಪ್ ಮಾಡಿದ್ದೀನಾ..? ನಾಲಿಗೆ ಹರಿಬಿಟ್ಟ ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ

ದೇಶದಲ್ಲಿ ಸಮಾನ ಶಿಕ್ಷಣ ನೀತಿ ಇಲ್ಲದ ಕಾರಣ ಹಾಗೂ ಸಿಇಟಿ ನೀಟ್‌ ತರಬೇತಿ ಪಡೆಯಲಾಗದೇ ಬಡವರ ಮಕ್ಕಳು ತಾಂತ್ರಿಕ ಶಿಕ್ಷಣದಿಂದಲೇ ವಂಚಿತರಾಗುತ್ತಿದ್ದಾರೆ. ಸಮಾಜದಲ್ಲಿ ಮನುಷ್ಯರ ನಡುವಿನ ತಾರತಮ್ಯ ಹಾಗೂ ಅಂತರವೂ ಹೆಚ್ಚುತ್ತಿದೆ. ಖಾಸಗಿ ವಲಯದ ಪ್ರಭಾವ ಹೆಚ್ಚುತ್ತಿರುವ ಹಿನ್ನೆಲೆ ದೇಶದಲ್ಲಿ ಸುಮಾರು .5 ಕೋಟಿಗೂ ಮಿಕ್ಕಿ ಸರ್ಕಾರಿ ಹುದ್ದೆಗಳು ಖಾಲಿ ಇವೆ. ಇದರಿಂದ ಸರ್ಕಾರಿ ಕೆಲಸ ಕಾರ್ಯಗಳು ಕುಂಠಿತಗೊಳ್ಳುವಂತಾಗಿದೆ ಎಂದು ಹೇಳಿದರು.

click me!