
ಬೆಂಗಳೂರು (ಜು.21) : ರಾಜ್ಯದಲ್ಲಿ ಕುರುಬ ಸಮುದಾಯವನ್ನು ಪರಿಶಿಷ್ಟಪಂಗಡಕ್ಕೆ (ಎಸ್‌ಟಿ) ಸೇರಿಸುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿ ರಾಜ್ಯ ಸರ್ಕಾರವು ಗುರುವಾರ ಪತ್ರ ಬರೆದಿದೆ.
ಕುರುಬ ಸಮುದಾಯವನ್ನು ಎಸ್‌ಟಿಗೆ ಸೇರಿಸಬೇಕು ಎಂದು ದಶಕಕ್ಕೂ ಹೆಚ್ಚು ಕಾಲದಿಂದ ಹೋರಾಟ ನಡೆಯುತ್ತಿತ್ತು. ಹಿಂದಿನ ಸರ್ಕಾರದ ಅವಧಿಯಲ್ಲಿ ಕಾಗಿನೆಲೆ ಕನಕ ಗುರುಪೀಠದ ನಿರಂಜನಾನಂದಪುರಿ ಹಾಗೂ ಈಶ್ವರಾನಂದಪುರಿ ಸ್ವಾಮೀಜಿ ಅವರ ನೇತೃತ್ವದಲ್ಲಿ ಕಾಗಿನೆಲೆಯಿಂದ ಬೆಂಗಳೂರಿನವರೆಗೆ ಸಾವಿರಾರು ಮಂದಿ ಪಾದಯಾತ್ರೆ ನಡೆಸಿದ್ದರು.
ಕೆ.ಎಸ್.ಈಶ್ವರಪ್ಪ, ಎಂಟಿಬಿ ನಾಗರಾಜ್ ಸೇರಿದಂತೆ ಸಮುದಾಯದ ಹಿರಿಯ ನಾಯಕರ ನೇತೃತ್ವದಲ್ಲಿ 2021ರ ಜನವರಿಯಲ್ಲಿ ಬೆಂಗಳೂರಿನ ಮಾದವರ ಬಳಿ ಬೃಹತ್ ಸಮಾವೇಶ ನಡೆಸಿ ಎಸ್ಟಿಗೆ ಸೇರ್ಪಡೆ ಮಾಡಲು ಕೇಂದ್ರಕ್ಕೆ ಶಿಫಾರಸು ಮಾಡುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದರು. ಈ ಪಾದಯಾತ್ರೆ ಹಾಗೂ ಸಮಾವೇಶದಿಂದ ಅಂತರ ಕಾಯ್ದುಕೊಂಡಿದ್ದ ಸಿದ್ದರಾಮಯ್ಯ ಅವರು ಸಮುದಾಯದ ಕೆಲ ನಾಯಕರ ಟೀಕೆಗೂ ಗುರಿಯಾಗಿದ್ದರು.
ಜಾತಿಗೊಂದು ಜಯಂತಿ ಮಾಡಿ ತಪ್ಪು ಗ್ರಹಿಕೆ ಬೇರೂರುತ್ತಿದೆ: ಶಾಸಕ ಜಿ.ಟಿ.ದೇವೇಗೌಡ
ಪಾದಯಾತ್ರೆಗೂ ಮೊದಲೇ 2017ರಲ್ಲಿ ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರವು ಕುರುಬ ಸಮುದಾಯಕ್ಕೆ ಪರಿಶಿಷ್ಟಪಂಗಡಕ್ಕೆ ಅಗತ್ಯವಿರುವ ಗುಣಲಕ್ಷಣಗಳು ಇವೆಯೇ ಎಂಬುದನ್ನು ಅಧ್ಯಯನ ನಡೆಸಲು ಮೈಸೂರಿನ ಟಿಆರ್‌ಐ ಸಂಸ್ಥೆಗೆ ಕುಲಶಾಸ್ತ್ರೀಯ ಅಧ್ಯಯನ ನಡೆಸಿ ಶಿಫಾರಸುಗಳನ್ನು ಸಲ್ಲಿಸಲು ಆದೇಶಿಸಿತ್ತು. ಸಂಸ್ಥೆಯು ರಾಜ್ಯಾದ್ಯಂತ ಪ್ರತಿ ಜಿಲ್ಲೆಯಲ್ಲೂ ಕುರುಬ ಸಮುದಾಯದ ಸಂಸ್ಕೃತಿಗಳನ್ನು ಅಧ್ಯಯನ ನಡೆಸಿ 2023ರ ಮಾ.23ರಂದು ಕುಲಶಾಸ್ತ್ರೀಯ ಅಧ್ಯಯನ ವರದಿ ಸಲ್ಲಿಸಿತ್ತು.
ವರದಿ ಆಧರಿಸಿ 2023ರ ಮಾ.24ರಂದು ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರವು ಸಚಿವ ಸಂಪುಟ ಸಭೆ ನಡೆಸಿ ಕುರುಬ ಸಮುದಾಯವನ್ನು ಎಸ್ಟಿಮೀಸಲಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸು ಮಾಡಲು ನಿರ್ಧರಿಸಿತ್ತು.
ಕುರುಬರಿಗೆ ರಾಜಕೀಯ ಪ್ರಾತಿನಿಧ್ಯ ನೀಡಲು ಬಿಜೆಪಿ ವರುಷ್ಠರಿಗೆ ಒತ್ತಾಯ
ಶಿಫಾರಸು ಮಾಡಿ ಪತ್ರ:
ಇದೀಗ ಸಿದ್ದರಾಮಯ್ಯ ನೇತೃತ್ವದ ಸರ್ಕಾರವು ಹಿಂದಿನ ಸರ್ಕಾರದ ಸಚಿವ ಸಂಪುಟ ಸಭೆ ನಿರ್ಣಯ ಆಧರಿಸಿ ಜು.20ರಂದು ಕುರುಬ ಸಮುದಾಯವನ್ನು ಎಸ್ಟಿಪಟ್ಟಿಗೆ ಸೇರಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಪತ್ರ ಬರೆದಿದೆ. ಈ ಬಗ್ಗೆ ಸರ್ಕಾರದ ಪ್ರಧಾನ ಕಾರ್ಯದರ್ಶಿ ಮಣಿವಣ್ಣನ್ ವರು ಕೇಂದ್ರದ ಪರಿಶಿಷ್ಟಪಂಗಡಗಳ ವ್ಯವಹಾÜರಗಳ ಇಲಾಖೆ ಕಾರ್ಯದಶಿ ಅನಿಲ್‌ಕುಮಾರ್ ಜಾ ಅವರಿಗೆ ಪತ್ರ ಬರೆದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ