
ಬೆಂಗಳೂರು(ಮೇ.05): ಲಾಕ್‌ಡೌನ್ ಕಟ್ಟು ನಿಟ್ಟಿನ ನಿಯಮದ ನಡುವೆ ಸ್ಯಾಂಡಲ್‌ವುಡ್ ನಟ, ಮಾಜಿ ಮುಖ್ಯಮಂತ್ರಿ ಪುತ್ರ ನಿಖಿಲ್ ಕುಮಾರಸ್ವಾಮಿ ಮದುವೆ ವಿವಾದಕ್ಕೆ ಕಾರಣವಾಗಿತ್ತು. ರಾಮನಗರ ಜಿಲ್ಲೆಯಲ್ಲಿ ನಡೆದ ವಿವಾಹ ಮಹತೋತ್ಸವ ಹೈಕೋರ್ಟ್ ಮೆಟ್ಟಿಲೇರಿತ್ತು. ಈ ಕುರಿತ ವರದಿ ನೀಡುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ. ಇದೀಗ ರಾಜ್ಯ ಸರ್ಕಾರ ನಿಖಿಲ್ ಮದುವೆ ವಿಚಾರವಾಗಿ ವಿವರಣೆಯನ್ನು ಹೈಕೋರ್ಟ್‌ಗೆ ಸಲ್ಲಿಸಿದೆ.
7-10 ಕೋಟಿ ವೆಚ್ಚದ ಮದುವೆ ಹಣದಿಂದ ರಾಮನಗರ ಜನತೆಗೆ ನಿಖಿಲ್ ಸಹಾಯ!
ಏ.17 ರಂದು ರಾಮನಗರ ಜಿಲ್ಲೆಯ ಕೇತಿಗಾನಹಳ್ಳಿಯಲ್ಲಿ ನಿಖಿಲ್ ಕುಮಾರಸ್ವಾಮಿ ಮದುವೆ ನಡೆದಿತ್ತು. ಈ ಕುರಿತು ರಾಜ್ಯ ಸರ್ಕಾರದ ವಕೀಲ ವಿಕ್ರಮ್ ಹುಯಿಲ್ಗೊಳ್ ವರದಿ ಸಲ್ಲಿಸಿದ್ದಾರೆ. ನಿಖಿಲ್ ಕುಮಾರಸ್ವಾಮಿ ಮದುವೆಯಲ್ಲಿ 80-95 ಕುಟುಂಬಸ್ಥರು ಭಾಗವಹಿಸಿದ್ದರು. ಮದುವೆಗೆ ರಾಮನಗರ ಡಿಸಿ ಅನುಮತಿ ನೀಡಿದ್ದರು. ಇಷ್ಟೇ ಅಲ್ಲ ಮದುವೆಗೆ ಆಗಮಿಸಿದ ಎಲ್ಲರಿಗೂ ಮಾಸ್ಕ್, ಸ್ಯಾನಿಟೈಸರ್ ವಿತರಿಸಲಾಗಿತ್ತು ಎಂದು ವರದಿಯಲ್ಲಿ ಹೇಳಿದೆ.
ಮದುವೆಗೆ ಆಗಮಿಸಿದವರೆಲ್ಲರು ಸಾಮಾಜಿಕ ಅಂತರ ಕಾಯ್ದುಕೊಂಡಿದ್ದರು. ಮದುವೆ ಸಮಾರಂಭದಲ್ಲಿ ಎಲ್ಲರೂ ಮಾಸ್ಕ್ ಧರಿಸಿದ್ದರು. ಆದರೆ ಮಾಂಗಲ್ಯ ಧಾರಣೆ ವೇಳೆ ಮಾಸ್ಕ್ ಧರಿಸಿಲ್ಲ. ಸಂಪೂರ್ಣ ಸಮಾರಂಭ 2 ಗಂಟೆಯಲ್ಲಿ ಮುಗಿಸಲಾಗಿದೆ. ಬೆಳಗ್ಗೆ 8 ರಿಂದ 10 ಗಂಟೆಯೊಳಗೆ ಮದುವೆ ಸಮಾರಂಭ ನಡೆದಿದೆ ಎಂದು ಸರ್ಕಾರಿ ಪರ ವಕೀಲ್ ವಿಕ್ರಮ್ ಹೈಕೋರ್ಟ್‌ಗೆ ತಿಳಿಸಿದ್ದಾರೆ.
ಕೊರೋನಾ ವೈರಸ್ ಆರ್ಭಟ ಹೆಚ್ಚಾದಂತೆ ಕೇಂದ್ರ ಸರ್ಕಾರ ಲಾಕ್‌ಡೌನ್ ಹೇರಲಾಗಿತ್ತು. ಮಾರ್ಚ್ 24 ರಂದು ಹಾಗೂ ಏಪ್ರಿಲ್ 15 ರಂದು ಕೇಂದ್ರ ಸರ್ಕಾರ ಹೊರಡಿಸಿದ್ದ ಮಾರ್ಗಸೂಚಿ ಪ್ರಕಾರ ಯಾವುದೇ ಸಭೆ ಸಮಾರಂಭ ನಡೆಸುವಂತಿರಲಿಲ್ಲ. ಇಷ್ಟೇ ಅಲ್ಲ ಮದುವೆ ಕೂಡ ನಡೆಸುವಂತಿಲ್ಲ. ಆದರೆ ಹೆಚ್.ಡಿ.ಕುಮಾರಸ್ವಾಮಿ ಸರ್ಕಾರದಿಂದ ಪಾಸ್ ಪಡೆದಿದ್ದಾರೆ. ಮದುವೆಯಲ್ಲಿ 80 ರಿಂ 90 ಮಂದಿ ಭಾಗವಹಿಸಿದ್ದಾರೆ. ಈ ಮೂಲಕ ಮಾರ್ಗ ಸೂಚಿ ಉಲ್ಲಂಘಿಸಲಾಗಿದೆ ಎಂದು ವಕೀಲ್ ಜಿಆರ್ ಮೋಹನ್ ಹೈಕೋರ್ಟ್ ಗಮನಕ್ಕೆ ತಂದಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ