ರಾಜ್ಯಕ್ಕೆ ಆಘಾತ ನೀಡಿದ IAS ಅಧಿಕಾರಿ ಮಹಾಂತೇಶ್ ಬೀಳಗಿ ಸಾವು, ಸಿಎಂ ಸೇರಿ ಹಲವರಿಂದ ಸಂತಾಪ

Published : Nov 25, 2025, 09:19 PM IST
Mahantesh Bilagi death

ಸಾರಾಂಶ

ರಾಜ್ಯಕ್ಕೆ ಆಘಾತ ನೀಡಿದ IAS ಅಧಿಕಾರಿ ಮಹಾಂತೇಶ್ ಬೀಳಗಿ ಸಾವು, ಸಿಎಂ ಸೇರಿ ಹಲವರಿಂದ ಸಂತಾಪ, ಜೇವರ್ಗಿಯಲ್ಲಿ ನಡೆದ ಕಾರು ಅಪಘಾತದಲ್ಲಿ ಮಹಾಂತೇಶ ಬೀಳಗಿ ಮೃತಪಟ್ಟಿದ್ದಾರೆ. ಇವರ ಜೊತೆ ಸೋದರ ಸಂಬಂಧಿಗಳು ಮೃತಪಟ್ಟಿದ್ದಾರೆ.

ಬೆಂಗಳೂರು (ನ.25) ದಕ್ಷ ಐಎಎಸ್ ಅಧಿಕಾರಿ,ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ್ ಬೀಳಗಿ ಭೀಕರ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಜೇವರ್ಗಿಯಲ್ಲಿ ನಡೆದ ಅಪಘಾತದಲ್ಲಿ ಮಹಾಂತೇಶ್ ಬೀಳಗಿ ಹಾಗೂ ಸೋದರ ಸಂಬಂಧಿಗಳು ಸಂಚರಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಈ ಅಪಘಾತದಲ್ಲಿ ತೀವ್ರಗಾಯಗೊಂಡ ಮಹಾಂತೇಶ್ ಬೀಳಗಿ ಮೃತಪಟ್ಟಿದ್ದಾರೆ. ಮಹಾಂತೇಶ್ ಬೀಳಗಿ ಸಾವಿನ ಸುದ್ದಿ ರಾಜ್ಯಕ್ಕೆ ಆಘಾತ ನೀಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವುಕಮಾರ್ ಸೇರಿದಂತೆ ಗಣ್ಯರು ತೀವ್ರ ನೋವು ವ್ಯಕ್ತಪಡಿಸಿದ್ದರೆ. ಇದೇ ವೇಳೆ ಕುಟುಂಬಕ್ಕೆ ಸಂತಾಪ ಸೂಚಿಸಿದ್ದಾರೆ.

ಮಹಾಂತೇಶ್ ಬೀಳಗಿ ಸಾವು ನೋವುಂಟು ಮಾಡಿದೆ.

ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರು ರಸ್ತೆ ಅಪಘಾತದಲ್ಲಿ ನಿಧನರಾದ ಸುದ್ದಿ ನೋವುಂಟು ಮಾಡಿದೆ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. ಹಲವು ಜಿಲ್ಲೆಗಳಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ, ಜಿಲ್ಲಾಧಿಕಾರಿಯಾಗಿ ಪ್ರಾಮಾಣಿಕ ಸೇವೆ ಸಲ್ಲಿಸಿದ್ದರು. ಮಹಾಂತೇಶ್ ಅವರು ಕರ್ತವ್ಯ ನಿರ್ವಹಿಸುತ್ತಿದ್ದ ಎಲ್ಲ ಕಡೆಗಳಲ್ಲಿಯೂ ತಮ್ಮ ದಕ್ಷತೆಯಿಂದಾಗಿ ಹೆಜ್ಜೆ ಗುರುತುಗಳನ್ನು ಉಳಿಸಿ ಹೋಗಿದ್ದಾರೆ. ಮೃತರ ಆತ್ಮಕ್ಕೆ ಶಾಂತಿ ದೊರಕಲೆಂದು ಪ್ರಾರ್ಥಿಸುತ್ತೇನೆ. ಅವರ ದುಃಖತಪ್ತ ಕುಟುಂಬಕ್ಕೆ ನನ್ನ ಸಂತಾಪಗಳು ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

 

 

ಮಹಾಂತೇಶ ನಿಧನರಾಗಿರುವುದು ಅತ್ಯಂತ ದುಃಖಕರ

ಮಹಾಂತೇಶ್ ನಿಧನ ಕುರಿತು ತೀವ್ರ ಆಘಾತ ವ್ಯಕ್ತಪಡಿಸಿರುವ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ , ಸಮಾಜಕ್ಕೆ ತುಂಬಲಾರದ ನಷ್ಟ ಎಂದಿದ್ದಾರೆ. ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಹಿರಿಯ ಐಎಎಸ್ ಅಧಿಕಾರಿಗಳಾದ ಮಹಾಂತೇಶ್ ಬೀಳಗಿ ಅವರು ಕಾರು ಅಪಘಾತದಲ್ಲಿ ವಿಧಿವಶರಾಗಿರುವುದು ಅತ್ಯಂತ ದುಃಖಕರ ಸಂಗತಿಯಾಗಿದೆ. ಮಹಾಂತೇಶ್ ಬೀಳಗಿ ಅವರು ಬೆಸ್ಕಾಂ ಎಂಡಿ ಸಹ ಆಗಿದ್ದರು, ಜೊತೆಗೆ ದಾವಣಗೆರೆ, ಉಡುಪಿ ಸೇರಿದಂತೆ ಕರ್ನಾಟಕದ ಬೇರೆ ಬೇರೆ ಕಡೆ ಕಾರ್ಯನಿರ್ವಹಿಸಿದ್ದರು. ಜನಪರ ಕಾರ್ಯಗಳ‌ ಮೂಲಕ ಹೆಸರುವಾಸಿಯಾಗಿದ್ದ ದಕ್ಷ ಅಧಿಕಾರಿಯ ನಿಧನ ಸಮಾಜಕ್ಕೆ ತುಂಬಲಾರದ ನಷ್ಟವಾಗಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ, ಕುಟುಂಬದವರಿಗೆ ನೋವು ಭರಿಸುವ ಶಕ್ತಿಯನ್ನು ‌ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.

 

 

ರಾಜ್ಯ ದಕ್ಷ ಮತ್ತು ಉತ್ತಮ ಅಧಿಕಾರಿಯನ್ನು ಕಳೆದುಕೊಂಡಿದೆ

ಮಹಾಂತೇಶ್ ಬೀಳಗಿ ಸಾವಿಗೆ ತೀವ್ರ ನೋವು ವ್ಯಕ್ತಪಡಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಮಹಾಂತೇಶ್ ಬೀಳಗಿ ಕಾರಿನಲ್ಲಿ ಮೃತಪಟ್ಟ ಮೂವರ ಕುಟುಂಬಕ್ಕೂ ಸಂತಾಪ ಸೂಚಿಸಿದ್ದಾರೆ. ರಾಜ್ಯದ ಹಿರಿಯ IAS ಅಧಿಕಾರಿ ಶ್ರೀ ಮಹಾಂತೇಶ್ ಬೀಳಗಿ ಅವರು ಕಲಬುರ್ಗಿ ಸಮೀಪ ಸಂಭವಿಸಿರುವ ಭೀಕರ ರಸ್ತೆ ಅಪಘಾತದಲ್ಲಿ ವಿಧಿವಶರಾದ ಸುದ್ದಿ ಅತೀವ ಆಘಾತವನ್ನು ಉಂಟುಮಾಡಿದೆ. ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಶ್ರೀ ಮಹಾಂತೇಶ್ ಬೀಳಗಿ ಅವರು ಈ ಹಿಂದೆ ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಾಗಿಯೂ ಸೇವೆ ಸಲ್ಲಿಸಿದ್ದರು. ಅವರ ಅಕಾಲಿಕ ನಿಧನದಿಂದ ರಾಜ್ಯ ಒಬ್ಬ ಹಿರಿಯ, ದಕ್ಷ, ಮತ್ತು ಉತ್ತಮ ಅಧಿಕಾರಿಯನ್ನು ಕಳೆದುಕೊಂಡಿದೆ. ಅಗಲಿದ ಹಿರಿಯ ಅಧಿಕಾರಿಯ ಆತ್ಮಕ್ಕೆ ಚಿರಶಾಂತಿಯನ್ನು ಪ್ರಾರ್ಥಿಸುತ್ತಾ, ಅವರ ಕುಟುಂಬದ ಸದಸ್ಯರಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ನನ್ನ ತೀವ್ರ ಸಂತಾಪಗಳನ್ನು ಸಲ್ಲಿಸುತ್ತೇನೆ. ಈ ಭೀಕರ ಅಪಘಾತದಲ್ಲಿ ಶ್ರೀಯುತ ಬೀಳಗಿ ಅವರೊಂದಿಗೆ ಪ್ರಯಾಣಿಸುತ್ತಿದ್ದ ಇನ್ನೂ ಇಬ್ಬರು ಕೂಡ ಸಾವನ್ನಪ್ಪಿದ್ದು, ಅವರಿಗೂ ದೇವರು ಸದ್ಗತಿಯನ್ನು ಕರುಣಿಸಲಿ, ಅವರ ಕುಟುಂಬದ ಸದಸ್ಯರಲ್ಲಿ ಕೂಡ ನನ್ನ ಸಂತಾಪಗಳನ್ನು ವ್ಯಕ್ತಪಡಿಸುತ್ತೇನೆ ಎಂದು ಬಿವಿ ವಿಜಯೇಂದ್ರ ಟ್ವೀಟ್ ಮಾಡಿದ್ದಾರೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬೆಂಗಳೂರು ಅಪಾರ್ಟ್‌ಮೆಂಟ್‌ನ 16 ಕುಟುಂಬಗಳಿಗೆ ರೌಡಿಸಂ ದರ್ಶನ; ಮಾಟ-ಮಂತ್ರ ಮಾಡಿಸಿ ಕಿರುಕುಳ!
'63% ಭ್ರಷ್ಟಾಚಾರ' ಹೇಳಿಕೆ ವಿವಾದ: 'ನನ್ನ ಹೇಳಿಕೆ ತಿರುಚಲಾಗಿದೆ' ಉಪಲೋಕಾಯುಕ್ತ ನ್ಯಾ. ವೀರಪ್ಪ ಸ್ಪಷ್ಟನೆ