ಜೂನ್‌/ಜುಲೈನಲ್ಲಿ ರಾಜ್ಯದ ಜಿಪಂ ತಾಪಂ ಚುನಾವಣೆ: ಮೇ ಅಂತ್ಯದೊಳಗೆ ಮೀಸಲಾತಿ ನಿಗದಿ

Published : Feb 18, 2025, 06:39 AM ISTUpdated : Feb 18, 2025, 07:27 AM IST
ಜೂನ್‌/ಜುಲೈನಲ್ಲಿ ರಾಜ್ಯದ ಜಿಪಂ ತಾಪಂ ಚುನಾವಣೆ:  ಮೇ ಅಂತ್ಯದೊಳಗೆ ಮೀಸಲಾತಿ ನಿಗದಿ

ಸಾರಾಂಶ

ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳಿಗೆ ಮೀಸಲಾತಿ ನಿಗದಿಗೊಳಿಸಿ ಮೇ ಅಂತ್ಯದೊಳಗೆ ಅಧಿಸೂಚನೆ ಹೊರಡಿಸುವುದಾಗಿ ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಭರವಸೆ ನೀಡಿದೆ. ನ್ಯಾಯಾಲಯದ ವಾಗ್ದಾನದಂತೆ ಸರ್ಕಾರ ನಡೆದುಕೊಂಡರೆ ಜೂನ್/ಜುಲೈ ಅಥವಾ ಆಗಸ್ಟ್‌ನಲ್ಲಿ ರಾಜ್ಯದ ಜಿಪಂ, ತಾಪಂ ಚುನಾವಣೆಗಳು ನಡೆಯಲಿವೆ.

ಬೆಂಗಳೂರು : ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳಿಗೆ ಮೀಸಲಾತಿ ನಿಗದಿಗೊಳಿಸಿ ಮೇ ಅಂತ್ಯದೊಳಗೆ ಅಧಿಸೂಚನೆ ಪ್ರಕಟಿಸಲಾಗುವುದು ಎಂದು ಹೈಕೋರ್ಟ್‌ಗೆ ರಾಜ್ಯ ಸರ್ಕಾರ ಭರವಸೆ ನೀಡಿದೆ.

ನಿಗದಿತ ಅವಧಿಯಲ್ಲಿ ಜಿಪಂ ಮತ್ತು ತಾಪಂ ಕ್ಷೇತ್ರ ಪುನರ್‌ ವಿಂಗಡಣೆ ಹಾಗೂ ಮೀಸಲಾತಿ ಪ್ರಕಟಿಸಲು ವಿಫಲವಾದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ರಾಜ್ಯ ಚುನಾವಣಾ ಆಯೋಗ ಮತ್ತು ಇತರರು ಸಲ್ಲಿಸಿದ್ದ ನ್ಯಾಯಾಂಗ ನಿಂದನೆ ಅರ್ಜಿಗಳು ಮುಖ್ಯ ನ್ಯಾಯಮೂರ್ತಿ ಎನ್‌.ವಿ. ಅಂಜಾರಿಯಾ ಅವರ ನೇತೃತ್ವದ ವಿಭಾಗೀಯ ಪೀಠದ ಮುಂದೆ ಸೋಮವಾರ ವಿಚಾರಣೆಗೆ ಬಂದಿದ್ದವು. ಈ ವೇಳೆ ಸರ್ಕಾರದ ಪರ ಹಾಜರಾದ ಅಡ್ವೊಕೇಟ್‌ ಜನರಲ್‌ ಕೆ.ಶಶಿಕಿರಣ್‌ ಶೆಟ್ಟಿ, ರಾಜ್ಯ ಚುನಾವಣಾ ಆಯೋಗಕ್ಕೆ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ಪಟ್ಟಿಯನ್ನು ಮೇ ಅಂತ್ಯದೊಳಗೆ ಒದಗಿಸಲಾಗುವುದು ಎಂದು ಭರವಸೆ ನೀಡಿದರು.

ರಾಜ್ಯ ಚುನಾವಣಾ ಆಯೋಗ ಪರ ಹಿರಿಯ ವಕೀಲ ಕೆ.ಎನ್‌.ಫಣೀಂದ್ರ, ರಾಜ್ಯ ಸರ್ಕಾರ ನೀಡಿರುವ ವಾಗ್ದಾನವನ್ನು ನ್ಯಾಯಾಲಯ ದಾಖಲಿಸಿಕೊಳ್ಳಬೇಕು. ಸರ್ಕಾರ ಮೀಸಲು ಪಟ್ಟಿ ಒದಗಿಸಿದ ನಂತರ ಅಂತಿಮವಾಗಿ ಆಯೋಗ ಚುನಾವಣೆಯ ದಿನಾಂಕ ನಿಗದಿಪಡಿಸಲಿದೆ. ಒಂದೊಮ್ಮೆ ಸರ್ಕಾರ ತನ್ನ ವಾಗ್ದಾನದಂತೆ ನಡೆದುಕೊಳ್ಳಲು ವಿಫಲವಾದರೆ, ನ್ಯಾಯಾಂಗ ನಿಂದನೆ ಅರ್ಜಿಯನ್ನು ಮುಂದುವರಿಸುವ ಸ್ವಾತಂತ್ರ್ಯವನ್ನು ಆಯೋಗಕ್ಕೆ ಕಲ್ಪಿಸಬೇಕು ಎಂದು ನ್ಯಾಯಪೀಠಕ್ಕೆ ಮನವಿ ಮಾಡಿದರು.

ಉಭಯ ವಾದ ದಾಖಲಿಸಿಕೊಂಡ ನ್ಯಾಯಪೀಠ, ರಾಜ್ಯ ಸರ್ಕಾರ ತನ್ನ ವಾಗ್ದಾನದಂತೆ ನಡೆದುಕೊಳ್ಳಬೇಕು. ಇಲ್ಲದಿದ್ದರೆ ಚುನಾವಣಾ ಆಯೋಗವು ನ್ಯಾಯಾಂಗ ನಿಂದನೆ ಅರ್ಜಿ ಮುಂದುವರಿಸುವ ಸ್ವಾತಂತ್ರ್ಯ ಹೊಂದಿದೆ ಎಂದು ತಿಳಿಸಿ, ಅರ್ಜಿಗಳನ್ನು ಇತ್ಯರ್ಥಪಡಿಸಿತು. ನ್ಯಾಯಾಲಯಕ್ಕೆ ನೀಡಿರುವ ವಾಗ್ದಾನದಂತೆ ರಾಜ್ಯ ಸರ್ಕಾರ ನಡೆದುಕೊಂಡರೆ ಜೂನ್‌/ಜುಲೈ ಅಥವಾ ಆಗಸ್ಟ್‌ನಲ್ಲಿ ರಾಜ್ಯದ ಜಿಪಂ, ತಾಪಂ ಚುನಾವಣೆ ನಡೆಯಲಿದೆ.

ನಿರಂತರ ಕಾನೂನು ಹೋರಾಟ:

ಪಂಚಾಯಿತಿ ಚುನಾವಣೆ ನಡೆಸುವ ಸಂಬಂಧ ನಿರಂತರ ಕಾನೂನು ಹೋರಾಟ ನಡೆಯುತ್ತಿದೆ. ಚುನಾವಣೆ ನಡೆಸುವ ನಿಟ್ಟಿನಲ್ಲಿ ಕ್ಷೇತ್ರಗಳ ಪುನರ್‌ ವಿಂಗಡಣೆ ಮತ್ತು ಹಿಂದುಳಿದ ವರ್ಗಗಳು ಸೇರಿ ಇತರೆ ಸಮುದಾಯಗಳಿಗೆ ಕಾಲಮಿತಿಯಲ್ಲಿ ಮೀಸಲಾತಿ ನಿಗದಿಪಡಿಸಲು ವಿಫಲವಾಗಿದ್ದರಿಂದ ಕಳೆದ 2020ರ ಡಿಸೆಂಬರ್‌ನಲ್ಲಿ ರಾಜ್ಯ ಸರ್ಕಾರಕ್ಕೆ 5 ಲಕ್ಷ ರು. ದಂಡ ವಿಧಿಸಿ ಹೈಕೋರ್ಟ್‌ ಆದೇಶಿಸಿತ್ತು.

ನಂತರ 2021ರ ಏಪ್ರಿಲ್, ಮೇ ಮತ್ತು ಜೂನ್ ತಿಂಗಳಲ್ಲಿ ಅವಧಿ ಪೂರ್ಣಗೊಂಡ ಜಿಪಂ ಮತ್ತು ತಾಪಂಗಳಿಗೆ ಚುನಾವಣೆ ನಡೆಸಲು ಸಿದ್ದತೆ ಆರಂಭಿಸಿದ್ದ ಚುನಾವಣಾ ಆಯೋಗ ಕ್ಷೇತ್ರ ಪುನರ್‌ವಿಂಗಡಣೆ ಮಾಡಿ ಮತದಾರರ ಅಂತಿಮ ಪಟ್ಟಿ ಸಹ ಪ್ರಕಟಿಸಿತ್ತು. ಮೀಸಲಾತಿ ಕರಡು ಸಹ ಪ್ರಕಟಿಸಲಾಗಿತ್ತು. ದಿನಾಂಕ ಘೋಷಣೆ ಮಾಡುವ ಹೊತ್ತಿನಲ್ಲಿ ಕ್ಷೇತ್ರ ಪುನರ್‌ ವಿಂಗಡಣೆ ಮತ್ತು ಮೀಸಲಾತಿ ಅಧಿಕಾರವನ್ನು ಚುನಾವಣಾ ಆಯೋಗದಿಂದ ಸರ್ಕಾರ ಹಿಂಪಡೆದು ಹೊಸದಾಗಿ ಸೃಷ್ಟಿಸಿದ ಸೀಮಾ ನಿರ್ಣಯ ಆಯೋಗಕ್ಕೆ ವಹಿಸಿತ್ತು. ಅದನ್ನು ಚುನಾವಣಾ ಆಯೋಗ ಪ್ರಶ್ನಿಸಿತ್ತು.

ಬಳಿಕ ಜಿಪಂ ಹಾಗೂ ತಾಪಂ ಕ್ಷೇತ್ರಗಳಿಗೆ 12 ವಾರಗಳಲ್ಲಿ ಮೀಸಲಾತಿ ಪ್ರಕಟಿಸಲಾಗುವುದು ಎಂದು ರಾಜ್ಯ ಸರ್ಕಾರ 2023ರ ಡಿ.19ಕ್ಕೆ ಹೈಕೋರ್ಟ್‌ಗೆ ಭರವಸೆ ಕೊಟ್ಟಿತ್ತು. ಈ ಭರವಸೆಯಂತೆ ಸರ್ಕಾರ ನಡೆದುಕೊಂಡಿಲ್ಲ ಎಂದು ಆಕ್ಷೇಪಿಸಿ ಚುನಾವಣಾ ಆಯೋಗ ರಾಜ್ಯ ಸರ್ಕಾರದ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿತ್ತು.

ಸದ್ದಿಲ್ಲದೆ ನಿಖಿಲ್ ಕುಮಾರಸ್ವಾಮಿ ಪಕ್ಷ ಸಂಘಟನೆ; ಜೆಡಿಎಸ್ ಕಾರ್ಯಕರ್ತರನ್ನ ಹುರಿದುಂಬಿಸಲು ಉತ್ತರ ಕರ್ನಾಟಕ ಪ್ರವಾಸ!

ಫೆಬ್ರವರಿಯಲ್ಲಿ ಜಿ.ಪಂ, ತಾ.ಪಂ ಚುನಾವಣೆ: ಡಿಕೆಶಿ ಸುಳಿವು

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಮಹಿಳೆ ಬಲಿ ಪಡೆದ ಚಿರತೆ ಕೊನೆಗೂ ಸೆರೆ, ದಾಳಿ ಮಾಡಿದ ಅದೇ ಸ್ಥಳದಲ್ಲೇ ಕಾರ್ಯಾಚರಣೆ
ಕೊಂಕಣ ರೈಲ್ವೆ ಭಾರತೀಯ ರೈಲ್ವೇ ವಿಲೀನಕ್ಕೆ ರಾಜ್ಯ ಸರ್ಕಾರಗಳ ಸಹಕಾರ ಬೇಕು: ಸಚಿವ ಅಶ್ವಿನಿ ವೈಷ್ಣವ್