ರಾಜ್ಯದಲ್ಲಿ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮರಳಿ ಶಾಲೆಗೆ ಕರೆತರುವ ಕುರಿತು ಉನ್ನತಾಧಿಕಾರ ಸಮಿತಿ ನಡೆಸಿರುವ ಸಭೆಯ ನಡಾವಳಿ ಕುರಿತು ಅಂತಿಮ ವರದಿ ಸಲ್ಲಿಸಲು ಪ್ರಕರಣ ಸಂಬಂಧ ನೇಮಕಗೊಂಡಿರುವ ಕೋರ್ಟ್ ಸಹಾಯಕರಿಗೆ (ಅಮಿಕಸ್ ಕ್ಯೂರಿ) ಹೈಕೋರ್ಟ್ 2 ವಾರ ಕಾಲಾವಕಾಶ ನೀಡಿದೆ.
ಬೆಂಗಳೂರು (ಜು.28): ರಾಜ್ಯದಲ್ಲಿ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮರಳಿ ಶಾಲೆಗೆ ಕರೆತರುವ ಕುರಿತು ಉನ್ನತಾಧಿಕಾರ ಸಮಿತಿ ನಡೆಸಿರುವ ಸಭೆಯ ನಡಾವಳಿ ಕುರಿತು ಅಂತಿಮ ವರದಿ ಸಲ್ಲಿಸಲು ಪ್ರಕರಣ ಸಂಬಂಧ ನೇಮಕಗೊಂಡಿರುವ ಕೋರ್ಟ್ ಸಹಾಯಕರಿಗೆ (ಅಮಿಕಸ್ ಕ್ಯೂರಿ) ಹೈಕೋರ್ಟ್ 2 ವಾರ ಕಾಲಾವಕಾಶ ನೀಡಿದೆ. ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮರಳಿ ಶಾಲೆಗೆ ಕರೆತರುವ ವಿಚಾರವಾಗಿ 2013ರಲ್ಲಿ ದಾಖಲಿಸಿಕೊಂಡಿರುವ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ್ ಅರಾಧೆ ಅವರ ನೇತೃತ್ವದ ವಿಭಾಗೀಯ ಪೀಠ ಬುಧವಾರ ವಿಚಾರಣೆ ನಡೆಸಿತು.
ಅಮಿಕಸ್ ಕ್ಯೂರಿಯಾಗಿ ನೇಮಕಗೊಂಡಿರುವ ಹಿರಿಯ ವಕೀಲ ಕೆ.ಎನ್. ಫಣೀಂದ್ರ ಅವರು ವಿಚಾರಣೆಗೆ ಹಾಜರಾಗಿ, 2022ರ ಜು.6ರಂದು ಹೈಕೋರ್ಟ್ ನೀಡಿದ ನಿರ್ದೇಶನದಂತೆ ಉನ್ನತಾಧಿಕಾರ ಸಮಿತಿ ಜು.16ರಂದು ನಡೆಸಿದ ಸಭೆಯ ನಡಾವಳಿ ಕುರಿತ ಕರಡು ಪಟ್ಟಿಯನ್ನು ತಮಗೆ ಕಳುಹಿಸಿಕೊಡಲಾಗಿದೆ. ಅದನ್ನು ಅಂತಿಮಗೊಳಿಸಿ ವರದಿ ಸಲ್ಲಿಸಲು ಎರಡು ವಾರ ಕಾಲಾವಕಾಶ ನೀಡಬೇಕು ಎಂದು ಕೋರಿದರು. ಅದನ್ನು ಪರಿಗಣಿಸಿದ ನ್ಯಾಯಪೀಠ, ಎರಡು ವಾರ ಕಾಲಾವಕಾಶ ನೀಡಿ ವಿಚಾರಣೆ ಮುಂದೂಡಿತು. ಅರ್ಜಿಯು ಜು.6ರಂದು ನಡೆದ ವಿಚಾರಣೆಗೆ ವೇಳೆ ರಾಜ್ಯದಲ್ಲಿ ಅಂಗನವಾಡಿಗಳಿಂದ 6 ವರ್ಷದೊಳಗಿನ 9.8 ಲಕ್ಷಕ್ಕೂ ಅಧಿಕ ಮಕ್ಕಳು ಹಾಗೂ 14 ವರ್ಷ ವಯೋಮಾನದ ಅಂದಾಜು 25 ಸಾವಿರ ಮಕ್ಕಳು ಶಾಲೆಗಳಿಂದ ಹೊರಗುಳಿದಿದ್ದಾರೆ.
ಅರ್ಹರಿಗೆ ಭೂಸ್ವಾಧೀನ ಪರಿಹಾರ ವಿಳಂಬ ಸಲ್ಲದು: ಹೈಕೋರ್ಟ್ ಚಾಟಿ
ಒಟ್ಟಾರೆ 10 ಲಕ್ಷಕ್ಕೂ ಅಧಿಕ ಮಕ್ಕಳು ಶಿಕ್ಷಣದಿಂದ ವಂಚಿತರಾಗಿದ್ದಾರೆ ಎಂದು ಅಮಿಕಸ್ ಕ್ಯೂರಿ ಹೈಕೋರ್ಟ್‌ಗೆ ವರದಿ ಸಲ್ಲಿಸಿದ್ದರು. ಆ ವರದಿ ದಾಖಲಿಸಿಕೊಂಡಿದ್ದ ನ್ಯಾಯಪೀಠ, ಈ ಪ್ರಕರಣದಲ್ಲಿ ಹೈಕೋರ್ಟ್ ರಚಿಸಿರುವ ಉನ್ನತಾಧಿಕಾರ ಸಮಿತಿಯು ಜು.16ರಂದು ಸಭೆ ನಡೆಸಿ ಶಾಲೆಯಿಂದ ಹೊರಗುಳಿದ ಅದರಲ್ಲೂ ವಿಶೇಷವಾಗಿ ಅಂಗನವಾಡಿಗಳಿಂದ ಹೊರಗುಳಿದ 3ರಿಂದ 6 ವರ್ಷದೊಳಗಿನ ಮಕ್ಕಳನ್ನು ಕರೆ ತರುವ ಬಗ್ಗೆ ಯಾವೆಲ್ಲಾ ಕ್ರಮ ಕೈಗೊಳ್ಳಬಹುದು ಎಂಬ ಬಗ್ಗೆ ಸಲಹೆ ನೀಡಬೇಕು ಎಂದು ನಿರ್ದೇಶಿಸಿ ವಿಚಾರಣೆ ಮುಂದೂಡಿತ್ತು.
ಧೈರ್ಯವಿದ್ದರೆ ಹೈ. ನ್ಯಾಯಾಧೀಶರಿಂದ ತನಿಖೆ ನಡೆಸಲಿ: ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರಕ್ಕೆ ಧೈರ್ಯವಿದ್ದರೆ ಸರ್ಕಾರಿ ಇಲಾಖೆಯ ವಿವಿಧ ಹುದ್ದೆಗಳ ನೇಮಕಾತಿ ಪರೀಕ್ಷೆಯಲ್ಲಿ ನಡೆದಿರುವ ಅಕ್ರಮಗಳ ಕುರಿತು ಹೈಕೋರ್ಟ್ ನ್ಯಾಯಾಧೀಶರ ಮೂಲಕ ತನಿಖೆ ಮಾಡಿಸಿ ತೋರಿಸಲಿ ಎಂದು ಸಂಸದ ಡಿ.ಕೆ.ಸುರೇಶ್ ಸವಾಲು ಹಾಕಿದರು. ತಾಲೂಕಿನ ಅವ್ವೇರಹಳ್ಳಿ ಗ್ರಾಮದಲ್ಲಿ ಆರೋಗ್ಯ ಮೇಳ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೊಲೀಸ್, ಲೋಕೋಪಯೋಗಿ ಇಲಾಖೆ ಜತೆಗೆ ಶಿಕ್ಷಣ ಇಲಾಖೆಯಲ್ಲಿಯೂ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಕೂಗು ಕೇಳಿ ಬರುತ್ತಿದೆ. ಬಿಜೆಪಿ ಸರ್ಕಾರ ಭ್ರಷ್ಟಾಚಾರ ನಡೆಸಿಲ್ಲ ಎನ್ನುವುದಾದರೆ ಹೈಕೋರ್ಟ್ ನ್ಯಾಯಾಧೀಶರ ಮೂಲಕ ತನಿಖೆ ಮಾಡಿಸಲಿ ಎಂದರು.
ಪತ್ನಿ ದುಡಿಮೆಯಲ್ಲಿ ಜೀವನ ನಡೆಸೋ ಗಂಡ, ಡಿವೋರ್ಸ್ ನೀಡಿದ ಕೋರ್ಟ್
ಸರ್ಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆಯಲ್ಲಿನ ಅಕ್ರಮಗಳನ್ನು ನೋಡುತ್ತಿದ್ದರೆ ರಾಜ್ಯ ಸರ್ಕಾರ ಪಟ್ಟಭದ್ರಶಕ್ತಿಗಳ ಕೈ ಕೆಳಗೆ ಕೆಲಸ ಮಾಡುತ್ತಿದ್ದು, ಯಾವುದೇ ರೀತಿ ಹತೋಟಿ ಹೊಂದಿಲ್ಲದಿರವುದು ಸ್ಪಷ್ಟವಾಗಿದೆ. ಯಾವ ಮುನ್ನೆಚ್ಚರಿಕೆ ಕ್ರಮಕೈಗೊಂಡು ಪ್ರತಿಭಾನ್ವಿತರಿಗೆ ನ್ಯಾಯ ಒದಗಿಸುವ ಕೆಲಸ ಮಾಡುತ್ತಿಲ್ಲ ಎಂದು ಕಿಡಿಕಾರಿದರು. ಯಾವ ಪಕ್ಷ ಯುವಕರಿಗೆ ಉದ್ಯೋಗ ನೀಡುವ ಭರವಸೆ ನೀಡಿ ಅಧಿಕಾರಕ್ಕೆ ಬಂದಿದೆಯೋ ಅದೇ ಪಕ್ಷದ ಸರ್ಕಾರ ಇಂದು ಉದ್ಯೋಗಗಳನ್ನು ವ್ಯಾಪಾರಕ್ಕೆ ಇಟ್ಟಿದೆ. ಎಲ್ಲಾ ಇಲಾಖೆಗಳಲ್ಲು ಅಕ್ರಮದ ವಾತಾವರಣ ಸೃಷ್ಟಿಯಾಗಿದೆ. ಆದ್ದರಿಂದ ಸರ್ಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆ ಅಕ್ರಮವನ್ನು ಹೈಕೋರ್ಟ್ ನ್ಯಾಯಾಧೀಶರಿಂದ ತನಿಖೆ ಮಾಡಿಸಬೇಕು ಎಂದರು.