ಕಾಂಗ್ರೆಸ್‌ ಸರ್ಕಾರದ ವಿರುದ್ಧ ರಾಜ್ಯವ್ಯಾಪಿ ಬಿಜೆಪಿ ಪ್ರತಿಭಟನೆ

Published : Jul 23, 2023, 04:30 AM IST
ಕಾಂಗ್ರೆಸ್‌ ಸರ್ಕಾರದ ವಿರುದ್ಧ ರಾಜ್ಯವ್ಯಾಪಿ ಬಿಜೆಪಿ ಪ್ರತಿಭಟನೆ

ಸಾರಾಂಶ

ವಿಧಾನಸಭೆಯಲ್ಲಿ ಪಕ್ಷದ 10 ಶಾಸಕರ ಅಮಾನತು ಖಂಡಿಸಿ ಹಾಗೂ ರಾಜ್ಯ ಸರ್ಕಾರ ಜನವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಬಿಜೆಪಿಯಿಂದ ರಾಜ್ಯಾದ್ಯಂತ ಶನಿವಾರ ಪ್ರತಿಭಟನೆ ನಡೆಸಲಾಯಿತು.

ಬೆಂಗಳೂರು (ಜು.23) :  ವಿಧಾನಸಭೆಯಲ್ಲಿ ಪಕ್ಷದ 10 ಶಾಸಕರ ಅಮಾನತು ಖಂಡಿಸಿ ಹಾಗೂ ರಾಜ್ಯ ಸರ್ಕಾರ ಜನವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಬಿಜೆಪಿಯಿಂದ ರಾಜ್ಯಾದ್ಯಂತ ಶನಿವಾರ ಪ್ರತಿಭಟನೆ ನಡೆಸಲಾಯಿತು.

ಬೆಂಗಳೂರಿನಲ್ಲಿ ಫ್ರೀಡಂ ಪಾರ್ಕ್ ಹಾಗೂ ರಾಜ್ಯದ ಉಳಿದೆಡೆ ಜಿಲ್ಲಾ ಕೇಂದ್ರಗಳಲ್ಲಿ ಮಳೆಯನ್ನೂ ಲೆಕ್ಕಿಸದೆ ಪ್ರತಿಭಟನೆ ನಡೆಸಿದ ಬಿಜೆಪಿ ಶಾಸಕರು, ಮಾಜಿ ಸಚಿವರು ಕಾಂಗ್ರೆಸ್‌ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು.

ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್‌ ನೇತೃತ್ವದಲ್ಲಿ ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಮಹಾಗಠಬಂಧನ್‌(ಇಂಡಿಯಾ) ಸಭೆಗೆ ಆಗಮಿಸಿದ ರಾಜಕೀಯ ಪಕ್ಷಗಳ ನಾಯಕರ ಸ್ವಾಗತಕ್ಕೆ ಐಎಎಸ್‌ ಅಧಿಕಾರಿಗಳನ್ನು ನಿಯೋಜಿಸಲಾಗಿತ್ತು. ಇದು ಸಂವಿಧಾನ ಬಾಹಿರ ನಡೆ. ಕಾಂಗ್ರೆಸ್‌ ಸರ್ಕಾರ ರಾಜ್ಯದಲ್ಲಿ ಜನವಿರೋಧಿ ನೀತಿ ಅನುಸರಿಸುತ್ತಿದೆ. ರಾಜ್ಯದಲ್ಲಿ ಕೊಲೆ, ಗಲಭೆಗಳು ಹೆಚ್ಚಾಗುತ್ತಿದೆ. ಸರ್ಕಾರದ ನಡೆಯನ್ನು ಪ್ರಶ್ನಿಸಿದ ಬಿಜೆಪಿಯ 10 ಶಾಸಕರನ್ನು ಸದನದಿಂದ ಅಮಾನತು ಮಾಡಲಾಗಿದೆ. ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದ ಎರಡು ತಿಂಗಳೊಳಗೆ ಸ್ಪೀಕರ್‌ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ ಮಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಸ್ಪೀಕರ್‌ ಯು.ಟಿ.ಖಾದರ್‌ ಕಾಂಗ್ರೆಸ್‌ ಏಜೆಂಟ್‌ ಆಗಿ ಕೆಲಸ ಮಾಡುತ್ತಿದ್ದಾರೆ ಎಂದು ಮುಖಂಡರು ಕಿಡಿಕಾರಿದರು.

ಬಿಕೆ ಹರಿಪ್ರಸಾದ್ ಸಿಡಿಗುಂಡಿಗೆ ಪತರುಗುಟ್ಟಿದ ಕಾಂಗ್ರೆಸ್, ಅಲುಗಾಡಿತಾ ಸಿಎಂ ಸಿದ್ದು ಕುರ್ಚಿ?

ಶಿವಮೊಗ್ಗದಲ್ಲಿ ಮಾತನಾಡಿದ ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ, ಮಾತೆತ್ತಿದರೆ ಕಾಂಗ್ರೆಸ್‌ನವರು ಅಂಬೇಡ್ಕರ್‌ ಮತ್ತು ಸಂವಿಧಾನ ಎಂದು ಹೇಳುತ್ತಾರೆ. ಐಎಎಸ್‌ ಅಧಿಕಾರಿಗಳನ್ನು ಯಾವ ಲೆಕ್ಕಾಚಾರದಲ್ಲಿ ಸಂವಿಧಾನಕ್ಕೆ ವಿರುದ್ಧವಾಗಿ ರಾಜಕೀಯ ನಾಯಕರ ಸ್ವಾಗತಕ್ಕೆ ಕಳುಹಿಸುತ್ತಾರೆ. ಇದಕ್ಕೆ ಸರ್ಕಾರ ಉತ್ತರ ಕೊಡಬೇಕು ಎಂದು ಆಗ್ರಹಿಸಿದರು.

ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ಕೇವಲ 60 ದಿನದಲ್ಲಿ ಜನತೆ ತತ್ತರಿಸಿ ಹೋಗುವಂತಾಗಿದೆ. ರಾಜ್ಯ ಸರ್ಕಾರದ ನಡವಳಿಕೆ, ಧೋರಣೆ, ಕಾರ್ಯವೈಖರಿಯು ಸಮಾಜಕ್ಕೆ ನಿರಾಸೆ ತಂದಿದೆ. ರಾಜ್ಯ ಸರ್ಕಾರ ಜನವಿರೋಧಿ ನೀತಿಯನ್ನು ಅನುಸರಿಸುತ್ತಿದೆ. ಕಾನೂನು, ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದಿದೆ. ಸಮಾಜವಿರೋಧಿ ಶಕ್ತಿಗಳನ್ನು ಹೇಳುವವರು, ಕೇಳುವವರಿಲ್ಲವಾಗಿದೆ. ಇಡೀ ಕರ್ನಾಟಕದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಜೈನ ಮುನಿಯನ್ನು ಬರ್ಬರವಾಗಿ ಕತ್ತರಿಸಿ ಹಾಕಿದ್ದಾರೆ. ಯುವಬ್ರಿಗೇಡ್‌ ಕಾರ್ಯಕರ್ತನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ದೇಶದ್ರೋಹಿಗಳು, ಭಯೋತ್ಪಾದಕರನ್ನು ಸದೆಬಡಿಯಬೇಕು ಎಂದು ಬೆಂಗಳೂರಿನಲ್ಲಿ ಮಾಜಿ ಸಚಿವ ಡಾ.ಸಿ.ಎನ್‌.ಅಶ್ವತ್ಥ ನಾರಾಯಣ್‌ ಕಿಡಿಕಾರಿದರು

10 ಶಾಸಕರ ಅಮಾನತು ಪ್ರಶ್ನಿಸಿ ಪ್ರತಿಭಟನೆ: ಜನರ ಬಳಿ ಹೋಗಲು ತೀರ್ಮಾನ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ
'ಅಹಿಂದ ಕಿಂಗ್ ಸಿದ್ದರಾಮಯ್ಯ' ಜೀವಂತ ಇರುವಾಗಲೇ ಪರ್ಯಾಯ ನಾಯಕತ್ವದ ಕೂಗು ಏಕೆ?: ಬೈರತಿ ಸುರೇಶ್