Assembly Session: ಸುವರ್ಣ ಸೌಧದ ಆವರಣದಲ್ಲಿ ರಾಣಿ ಚೆನ್ನಮ್ಮ, ರಾಯಣ್ಣ, ಗಾಂಧೀಜಿ, ಅಂಬೇಡ್ಕರ್ ಪ್ರತಿಮೆ

By Sathish Kumar KH  |  First Published Dec 28, 2022, 8:19 PM IST

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಾಳೆ (ಡಿಸೆಂಬರ್ 29 ರಂದು) ಬೆಳಿಗ್ಗೆ 10.15 ಗಂಟೆಗೆ ಸುವರ್ಣ ಸೌಧದ ಆವರಣದಲ್ಲಿ ಕಿತ್ತೂರ ರಾಣಿ ಚೆನ್ನಮ್ಮ, ಕ್ರಾಂತಿವೀರ ಸಂಗೊಳ್ಳಿ ರಾಯಣ, ಮಹಾತ್ಮಾ ಗಾಂಧಿ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆ ಸ್ಥಾಪನೆಗೆ ಗುದ್ದಲಿಪೂಜೆ ನೆರವೇರಿಸಲಿದ್ದಾರೆ. 


ಸುವರ್ಣ ಸೌಧ (ಡಿ.28): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಾಳೆ (ಡಿಸೆಂಬರ್ 29 ರಂದು) ಬೆಳಿಗ್ಗೆ 10.15 ಗಂಟೆಗೆ ಸುವರ್ಣ ಸೌಧದ ಆವರಣದಲ್ಲಿ ಕಿತ್ತೂರ ರಾಣಿ ಚೆನ್ನಮ್ಮ, ಕ್ರಾಂತಿವೀರ ಸಂಗೊಳ್ಳಿ ರಾಯಣ, ಮಹಾತ್ಮಾ ಗಾಂಧಿ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆ ಸ್ಥಾಪನೆಗೆ ಗುದ್ದಲಿಪೂಜೆ ನೆರವೇರಿಸಲಿದ್ದಾರೆ. 

ಸರ್ವ ಪಕ್ಷಗಳ ನಾಯಕರಿಗರ ಆಹ್ವಾನ: ಕಳೆದ ವರ್ಷದ ಬೆಳಗಾವಿ ವಿಧಾನಮಂಡಲ ಅಧಿವೇಶನ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಘೋಷಿಸಿದಂತೆ ಈ ಪ್ರತಿಮೆಗಳನ್ನು ಸ್ಥಾಪಿಸಲಾಗುತ್ತಿದೆ. ಕರ್ನಾಟಕ ವಿಧಾನ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಉಭಯ ಸದನಗಳ ಪ್ರತಿ ಪಕ್ಷದ ನಾಯಕರಾದ ಸಿದ್ದರಾಮಯ್ಯ, ಬಿ.ಕೆ. ಹರಿಪ್ರಸಾದ್, ಸಚಿವ ಸಂಪುಟದ ಸದಸ್ಯರು ಹಾಗೂ ಶಾಸಕರು, ಸರ್ಕಾರದ ಹಿರಿಯ ಅಧಿಕಾರಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸುವರು.

Latest Videos

undefined

ಸಾವರ್ಕರ್‌ ಫೋಟೋ ಅಳವಡಿಕೆಗೆ ವಿರೋಧ: ಚಳಿಗಾಲದ ಅಧಿವೇಶನ ಆರಂಭವಾದ ಮೊದಲ ದಿನ ಸುವರ್ಣ ಸೌಧದ ಅಧಿವೇಶನದ ಸಭಾಂಗಣದಲ್ಲಿ ಪ್ರತಿಪಕ್ಷಗಳನ್ನು ವಿಶ್ವಾಸಕ್ಕೆ ಪಡೆಯದೆ ಸುವರ್ಣಸೌಧದ ವಿಧಾನಸಭೆ ಸಭಾಂಗಣದಲ್ಲಿ ಏಕಾಏಕಿ ವೀರ ಸಾವರ್ಕರ್‌ ಸೇರಿದಂತೆ ಗಣ್ಯರ ಭಾವಚಿತ್ರಗಳನ್ನು ಅನಾವರಣಗೊಳಿಸಿದ ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ ಧೋರಣೆಗೆ ಕಾಂಗ್ರೆಸ್‌ ಆಕ್ಷೇಪ ವ್ಯಕ್ತಪಡಿಸಿದ್ದರು. ಸುವರ್ಣಸೌಧದ ಮೆಟ್ಟಿಲುಗಳ ಬಳಿ ಧರಣಿ ಹಾಗೂ ಕಲಾಪ ಸಲಹಾ ಸಮಿತಿ ಬಹಿಷ್ಕಾರದ ಮೂಲಕ ಪ್ರತಿಭಟಿಸಿತ್ತು. ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ನೇತೃತ್ವದಲ್ಲಿ ಧರಣಿ ನಡೆಸಿದ ಕಾಂಗ್ರೆಸ್‌ ಶಾಸಕರು, ಸಾವರ್ಕರ್‌ ಸೇರಿದಂತೆ ಯಾರೊಬ್ಬರ ಫೋಟೊ ಅಳವಡಿಕೆಗೂ ನಮ್ಮ ವಿರೋಧವಿಲ್ಲ. ಆದರೆ, ಶಿಷ್ಟಾಚಾರ ಉಲ್ಲಂಘನೆ ಮಾಡಿ ಯಾವುದೇ ಚರ್ಚೆಯಿಲ್ಲದೆ ಭ್ರಷ್ಟಾಚಾರ ಹಾಗೂ ಹಗರಣಗಳಿಂದ ಗಮನ ಬೇರೆಡೆ ಸೆಳೆಯಲು ಇದನ್ನು ಬಳಸಿಕೊಳ್ಳುತ್ತಿರುವುದಕ್ಕೆ ನಮ್ಮ ಆಕ್ಷೇಪವಿದೆ ಎಂದು ತಿಳಿಸಿದ್ದರು.

ಪ್ರತಿಭಟನೆಗೆ ಜಗ್ಗದ ಬಿಜೆಪಿ ನಾಯಕರು: ದೇಶಕ್ಕೆ ಕೊಡುಗೆ ನೀಡಿದ ನಾಯಕರು ಹಾಗೂ ದಾರ್ಶನಿಕರಾದ ಮಹರ್ಷಿ ವಾಲ್ಮೀಕಿ, ಬಸವಣ್ಣ, ಕನಕದಾಸ, ಶಿಶುನಾಳ ಶರೀಫ, ನಾರಾಯಣ ಗುರು, ಬಾಬಾಸಾಹೇಬ್‌ ಅಂಬೇಡ್ಕರ್‌, ಜವಾಹರಲಾಲ್‌ ನೆಹರೂ, ಬಾಬು ಜಗಜೀವನ್‌ ರಾಮ್‌, ಕುವೆಂಪು, ವಲ್ಲಭಭಾಯಿ ಪಟೇಲ್‌ ಮುಂತಾದವರ ಭಾವಚಿತ್ರ ಅಳವಡಿಸಬೇಕು ಎಂಬುದು ನಮ್ಮ ಒತ್ತಾಯ. ಇದಕ್ಕಾಗಿ ಈ ಹೋರಾಟ ಎಂದು ಸ್ಪಷ್ಟಪಡಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಇದು ಸಾಂಕೇತಿಕ ಪ್ರತಿಭಟನೆಯಾಗಿದ್ದು, ಇದನ್ನು ಮುಂದುವರೆಸುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಆದರೆ, ಇದಕ್ಕೆ ಬಿಜೆಪಿ ನಾಯಕರು ಜಗ್ಗದೇ ಸಾರ್ವರ್ಕರ್‌ ಫೋಟೋ ಅಳವಡಿಕೆ ಶಾಶ್ವತವಾಗಿ ಇರುವಂತೆ ನೋಡಿಕೊಂಡಿದ್ದಾರೆ.

ಏನಿದು ಭಾವಚಿತ್ರ ಅಳವಡಿಕೆ ವಿವಾದ: ವಿಧಾನಸಭೆ ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ವಿಧಾನಸಭೆ ಸದಸ್ಯರೊಂದಿಗೆ ಚರ್ಚಿಸದೆ, ಕನಿಷ್ಠ ಕಲಾಪ ಸಲಹಾ ಸಮಿತಿಯಲ್ಲೂ ನಿರ್ಧಾರ ಮಾಡದೆ ಏಕಾಏಕಿ ಸ್ವಾಮಿ ವಿವೇಕಾನಂದ, ಸುಭಾಷ್‌ ಚಂದ್ರಬೋಸ್‌, ಬಿ.ಆರ್‌.ಅಂಬೇಡ್ಕರ್‌, ಬಸವಣ್ಣ, ಮಹಾತ್ಮ ಗಾಂಧೀಜಿ, ವಲ್ಲಭಭಾಯಿ ಪಟೇಲ್‌, ವೀರ ಸಾವರ್ಕರ್‌ ಭಾವಚಿತ್ರಗಳನ್ನು ಅಳವಡಿಸಿ ಅನಾವರಣಗೊಳಿಸಿದ್ದರು. ಈ ಕಾರ್ಯಕ್ರಮಕ್ಕೆ ಪ್ರತಿಪಕ್ಷ ನಾಯಕರಾದ ಸಿದ್ದರಾಮಯ್ಯ ಸೇರಿದಂತೆ ಬಹುತೇಕರಿಗೆ ಆಹ್ವಾನ ನೀಡಿಲ್ಲ. ಜತೆಗೆ ಪ್ರತಿಪಕ್ಷಗಳು ಸೇರಿದಂತೆ ವಿಧಾನಸಭೆಯನ್ನು ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ. ಸದನ ಸ್ವತ್ತಾಗಲಿರುವ ಭಾವಚಿತ್ರಗಳನ್ನು ವಿಧಾನಸಭೆ ಸದಸ್ಯರನ್ನು ಕತ್ತಲಲ್ಲಿಟ್ಟು ಅನಾವರಣ ಮಾಡಿದ್ದಾರೆ ಎಂದು ಕಾಂಗ್ರೆಸ್‌ ಆರೋಪ ಮಾಡಿತ್ತು.

click me!