ಸುಗ್ರೀವಾಜ್ಞೆ ಮೂಲಕ ಮೀಸಲು ಹೆಚ್ಚಿಸಿ: ಸಿದ್ದರಾಮಯ್ಯ

By Govindaraj S  |  First Published Oct 8, 2022, 2:39 PM IST

ರಾಜ್ಯದಲ್ಲಿ ನ್ಯಾ. ನಾಗಮೋಹನ್‌ದಾಸ್‌ ಸಮಿತಿ ವರದಿ ಅನ್ವಯ ಎಸ್‌.ಟಿ. ಮೀಸಲಾತಿಯನ್ನು ಶೇ.3 ರಿಂದ 7ಕ್ಕೆ ಹೆಚ್ಚಳ ಮಾಡಲು ಸಂವಿಧಾನ ತಿದ್ದುಪಡಿ ಅಗತ್ಯವಿದ್ದು, ಈ ಅಧಿಕಾರ ಕೇಂದ್ರ ಸರ್ಕಾರಕ್ಕೆ ಮಾತ್ರವಿದೆ.


ಬೆಂಗಳೂರು (ಅ.08): ರಾಜ್ಯದಲ್ಲಿ ನ್ಯಾ. ನಾಗಮೋಹನ್‌ದಾಸ್‌ ಸಮಿತಿ ವರದಿ ಅನ್ವಯ ಎಸ್‌.ಟಿ. ಮೀಸಲಾತಿಯನ್ನು ಶೇ.3 ರಿಂದ 7ಕ್ಕೆ ಹೆಚ್ಚಳ ಮಾಡಲು ಸಂವಿಧಾನ ತಿದ್ದುಪಡಿ ಅಗತ್ಯವಿದ್ದು, ಈ ಅಧಿಕಾರ ಕೇಂದ್ರ ಸರ್ಕಾರಕ್ಕೆ ಮಾತ್ರವಿದೆ. ಹೀಗಾಗಿ ಕೇಂದ್ರ ಹಾಗೂ ರಾಜ್ಯದಲ್ಲಿ ಅಧಿಕಾರದಲ್ಲಿರುವ ಬಿಜೆಪಿಯು ಅನಗತ್ಯ ವಿಳಂಬ ಮಾಡದೆ ಸುಗ್ರೀವಾಜ್ಞೆ ಮೂಲಕ ಮೀಸಲಾತಿ ಹೆಚ್ಚಿಸಿ ಸಂವಿಧಾನದ 9ನೇ ಶೆಡ್ಯೂಲ್‌ಗೆ ಸೇರಿಸಲು ಕ್ರಮ ಕೈಗೊಳ್ಳಬೇಕು ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಶುಕ್ರವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸರ್ವಪಕ್ಷದ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಗೆ ನಿಜವಾಗಿಯೂ ಕಾಳಜಿಯಿದ್ದರೆ ಮುಖ್ಯಮಂತ್ರಿಗಳು ತಕ್ಷಣ ವಿಧಾನಮಂಡಲದ ವಿಶೇಷ ಅಧಿವೇಶನ ಕರೆದು ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸುವ ಬಗ್ಗೆ ತೀರ್ಮಾನ ಕೈಗೊಂಡು ಕೇಂದ್ರಕ್ಕೆ ಕಳುಹಿಸಬೇಕು. ಜತೆಗೆ ಕೂಡಲೇ ಸುಗ್ರೀವಾಜ್ಞೆ ಮೂಲಕ ಮೀಸಲಾತಿಯನ್ನು ಹೆಚ್ಚಿಸಿ ಸಂವಿಧಾನದ 9ನೇ ಶೆಡ್ಯೂಲ್‌ನಲ್ಲಿ ಸೇರಿಸಲು ಕೇಂದ್ರದ ಮೇಲೆ ರಾಜ್ಯ ಸರ್ಕಾರ ಒತ್ತಡ ಹೇರಬೇಕು ಎಂದು ಹೇಳಿದರು.

Tap to resize

Latest Videos

ಬಿಜೆಪಿ ಜಯ ತಡೆಯಲು ಯಾರಿಗೂ ಆಗದು: ಬಿಎಸ್‌ವೈ

‘ನಮ್ಮ ಸರ್ಕಾರ ಇದ್ದಾಗ ರಚನೆಯಾಗಿದ್ದ ನಾಗಮೋಹನ್‌ ದಾಸ್‌ ಸಮಿತಿ ವರದಿ ನೀಡಿ ಎರಡೂವರೆ ವರ್ಷ ಕಳೆದಿದೆ. ನಾಗಮೋಹನ್‌ ದಾಸ್‌ ಅವರ ವರದಿ ಪ್ರಕಾರ ಎಸ್‌.ಸಿ ಮೀಸಲಾತಿಯನ್ನು 15% ರಿಂದ 17% ಗೆ ಏರಿಕೆ ಮಾಡಬೇಕು ಹಾಗೂ ಎಸ್‌.ಟಿ ಗಳಿಗೆ 3% ಇಂದ 7% ಗೆ ಮೀಸಲಾತಿ ಏರಿಕೆ ಮಾಡಬೇಕು ಎಂದು ಶಿಫಾರಸು ಮಾಡಿದೆ. ವರದಿ ಅನುಷ್ಠಾನಕ್ಕಾಗಿ ವಾಲ್ಮೀಕಿ ಸಮುದಾಯದ ಸ್ವಾಮೀಜಿಗಳು ಧರಣಿ ಆರಂಭ ಮಾಡಿ 240 ದಿನಗಳಾಗಿದೆ. ಕೇಂದ್ರ ಸರ್ಕಾರ ಸಂವಿಧಾನಕ್ಕೆ ತಿದ್ದುಪಡಿ ಮೂಲಕ ಮೀಸಲಾತಿಯನ್ನು ಹೆಚ್ಚಿಸಿ ಅದನ್ನು ಸಂವಿಧಾನದ 9ನೇ ಶೆಡ್ಯೂಲ್‌ನಲ್ಲಿ ಸೇರಿಸಿದರೆ ನ್ಯಾಯಾಲಯದಲ್ಲಿಯೂ ಅದನ್ನು ಯಾರೂ ಪ್ರಶ್ನಿಸುವಂತಿಲ್ಲ. ಈ ಕೆಲಸವನ್ನು ಮೊದಲು ಕೇಂದ್ರ ಸರ್ಕಾರ ಮಾಡಬೇಕು’ ಎಂದು ಒತ್ತಾಯಿಸಿದರು.

ಸಿಎಂ ಬೊಮ್ಮಾಯಿ ಪುತ್ರ, ಭರತ್‌ ಬೊಮ್ಮಾಯಿಗೆ ‘ಟೈಟಾನ್‌ ಬಿಸಿನೆಸ್‌’ ಪ್ರಶಸ್ತಿ

‘ತಮಿಳುನಾಡಿನಲ್ಲಿ ಮೀಸಲಾತಿಯನ್ನು 69% ಗೆ ಹೆಚ್ಚಿಸಿ ಈಗಾಗಲೇ 9ನೇ ಶೆಡ್ಯೂಲ್‌ಗೆ ಸೇರಿಸಲಾಗಿದೆ. ಇದರಿಂದ ಅದಕ್ಕೆ ಸಂವಿಧಾನಾತ್ಮಕ ರಕ್ಷಣೆ ಸಿಕ್ಕಿದೆ. ಇಂದಿರಾ ಸಹಾನಿ ಪ್ರಕರಣದಲ್ಲಿ ಕೆಲವು ವಿಶೇಷ ಸಂದರ್ಭದಲ್ಲಿ ಮೀಸಲಾತಿಯನ್ನು 50% ಗಿಂತ ಹೆಚ್ಚು ಮಾಡಬಹುದು ಎಂದು ಸುಪ್ರೀಂ ಕೋರ್ಚ್‌ ಹೇಳಿದೆ. ಕೇಂದ್ರ ಸರ್ಕಾರ 103ನೇ ತಿದ್ದುಪಡಿ ಮಾಡಿ ಆರ್ಥಿಕವಾಗಿ ಹಿಂದುಳಿದ ಸಾಮಾನ್ಯ ವರ್ಗದ ಜನರಿಗೆ 10% ಮೀಸಲಾತಿ ನೀಡಿರುವುದರಿಂದ ಮೀಸಲಾತಿ ಪ್ರಮಾಣ 50% ಮೀರಿದೆ. ಕೇಂದ್ರ ಸರ್ಕಾರದಲ್ಲಿರುವ ಮೀಸಲಾತಿ 49.5% ರಿಂದ 59.5% ಗೆ ಹೆಚ್ಚಾಗಿದೆ. ಇದು ಸದ್ಯ ಸುಪ್ರೀಂ ಕೋರ್ಟ್‌ನಲ್ಲಿದೆ. ಹೀಗಾಗಿ ಬಿಜೆಪಿಯು ಇನ್ನೂ ಮೀನಾಮೇಷ ಎಣಿಸುತ್ತಾ ವಿಳಂಬ ಮಾಡಬಾರದೆ ಕೇಂದ್ರದ ಮೇಲೆ ಒತ್ತಡ ಹೇರಬೇಕು ಎಂದು ಸರ್ವಪಕ್ಷ ಸಭೆಯಲ್ಲೂ ಒತ್ತಾಯಿಸಿದ್ದೇನೆ’ ಎಂದರು.

click me!