ತ್ಯಾಜ್ಯ ಆಯುವವರಿಗೆ ಕಲ್ಯಾಣ ಮಂಡಳಿ ಸ್ಥಾಪನೆಗೆ ಕ್ರಮ : ಸೌಮ್ಯ ರೆಡ್ಡಿ

Kannadaprabha News   | Kannada Prabha
Published : Mar 08, 2026, 05:20 AM IST
Soumya Reddy

ಸಾರಾಂಶ

ತ್ಯಾಜ್ಯ ಆಯುವವರ ಕಲ್ಯಾಣಕ್ಕಾಗಿ ಕಲ್ಯಾಣ ಮಂಡಳಿ ಸ್ಥಾಪನೆಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರ ಭೇಟಿಗೆ ನಿಯೋಗವನ್ನು ಕರೆದೊಯ್ಯುವುದಾಗಿ ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಮ್ಯ ರೆಡ್ಡಿ ತಿಳಿಸಿದ್ದಾರೆ.

ಬೆಂಗಳೂರು : ತ್ಯಾಜ್ಯ ಆಯುವವರ ಕಲ್ಯಾಣಕ್ಕಾಗಿ ಕಲ್ಯಾಣ ಮಂಡಳಿ ಸ್ಥಾಪನೆಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರ ಭೇಟಿಗೆ ನಿಯೋಗವನ್ನು ಕರೆದೊಯ್ಯುವುದಾಗಿ ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಮ್ಯ ರೆಡ್ಡಿ ತಿಳಿಸಿದ್ದಾರೆ.

ಅಂತಾರಾಷ್ಟ್ರೀಯ ತ್ಯಾಜ್ಯ ಆಯುವವರ ದಿನಾಚರಣೆ

ಶನಿವಾರ ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ತ್ಯಾಜ್ಯ ಶ್ರಮಿಕ ಸಂಘ ಆಯೋಜಿಸಿದ್ದ ಅಂತಾರಾಷ್ಟ್ರೀಯ ತ್ಯಾಜ್ಯ ಆಯುವವರ ದಿನಾಚರಣೆಯಲ್ಲಿ ಮಾತನಾಡಿದ ಅವರು, ಸಮಾಜದಲ್ಲಿ ಕಡು ಬಡವರಾಗಿರುವ ತ್ಯಾಜ್ಯ ಆಯುವವರಿಂದ ನಗರ, ಪ್ರದೇಶಗಳು ಸ್ವಚ್ಛವಾಗಿರುತ್ತವೆ. ಪರಿಸರ ಮಾಲಿನ್ಯ ಆಗುವುದನ್ನು ಈ ಶ್ರಮಿಕರು ತಪ್ಪಿಸುತ್ತಾರೆ. ಅವರಿಗೆ ಸಾಮಾಜಿಕ ಭದ್ರತೆ, ಸರ್ಕಾರದಿಂದ ಸೌಲಭ್ಯಗಳು, ಗೌರವಯುತ ಜೀವನಕ್ಕಾಗಿ ಅಗತ್ಯ ಸೌಕರ್ಯಗಳನ್ನು ಒದಗಿಸುವುದು ನಮ್ಮೆಲ್ಲರ ಜವಾಬ್ದಾರಿ ಎಂದರು.

ರಾಜ್ಯದಲ್ಲಿ ನಾಲ್ಕು ಲಕ್ಷಕ್ಕೂ ಹೆಚ್ಚು ತ್ಯಾಜ್ಯ ಕಾರ್ಮಿಕರು

ಆರ್‌ಪಿಐ ರಾಜ್ಯಾಧ್ಯಕ್ಷ ಆರ್. ಮೋಹನ್ ರಾಜು ಮಾತನಾಡಿ, ರಾಜ್ಯದಲ್ಲಿ ನಾಲ್ಕು ಲಕ್ಷಕ್ಕೂ ಹೆಚ್ಚು ತ್ಯಾಜ್ಯ ಕಾರ್ಮಿಕರು ಅನೌಪಚಾರಿಕ ತ್ಯಾಜ್ಯ ನಿರ್ವಹಣೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಅದರಲ್ಲಿ ಮಹಿಳೆಯರು, ದಲಿತರು ಮತ್ತು ಇತರ ಹಿಂದುಳಿದ ಸಮುದಾಯದವರಾಗಿದ್ದಾರೆ. ಅವರಿಗೆ ಸಂವಿಧಾನಿಕ ಹಕ್ಕುಗಳನ್ನು ಒದಗಿಸಬೇಕು ಎಂದು ಒತ್ತಾಯಿಸಿದರು.

ಸ್ಲಂ ಜನರ ಸಂಘಟನೆ ರಾಜ್ಯಾಧ್ಯಕ್ಷ ಎಲ್.ಐಸಾಕ್ ಅಮೃತ ರಾಜ್, ವಿಮೆನ್ಸ್ ವಾಯ್ಸ್ ಉಪಾಧ್ಯಕ್ಷೆ ರುತ್ ಮನೋರಮ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ವಾಹನ ಚಾಲನೆ ವೇಳೆ ಅವಸರ ಬೇಡ, ಜಾಗ್ರತೆ ಇರಲಿ : ರಾಮಲಿಂಗಾರೆಡ್ಡಿ
ಮಹಿಳೆ ವಿಚಾರಕ್ಕೆ ಜಯಮೃತ್ಯುಂಜಯ ಸ್ವಾಮೀಜಿಗೆ ಹಲ್ಲೆ ಆರೋಪ; ಮಾನಹಾನಿಕರ ಸುದ್ದಿ ಪ್ರಸಾರಕ್ಕೆ ಕೋರ್ಟ್‌ನಿಂದ ಬ್ರೇಕ್!