ಹೊರರಾಜ್ಯದಿಂದ ಗೋವು, ಗೋಸಾಗಣೆ ತಡೆಯಿರಿ

By Kannadaprabha NewsFirst Published Jul 20, 2021, 7:23 AM IST
Highlights
  • ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿಯಲ್ಲಿದೆ
  • ಬಕ್ರೀದ್‌ ಹಬ್ಬದ ಹಿನ್ನೆಲೆಯಲ್ಲಿ ಗೋವುಗಳನ್ನು ಸಹ ಬಲಿ ಕೊಡಲಾಗುತ್ತದೆ
  • ಹೊರ ರಾಜ್ಯದಿಂದ ನಮ್ಮ ರಾಜ್ಯಕ್ಕೆ ಯಾವುದೇ ಮಾರ್ಗದಿಂದ ಅಕ್ರಮವಾಗಿ ಗೋವು ಮತ್ತು ಗೋಮಾಂಸ ಸಾಗಿಸುವುದರ ಮೇಲೆ ಇಲಾಖೆಯ ಅಧಿಕಾರಿಗಳು ಹದ್ದಿನ ಕಣ್ಣಿಡಬೇಕು

ಬೆಂಗಳೂರು (ಜು.20):  ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿಯಲ್ಲಿದೆ. ಬಕ್ರೀದ್‌ ಹಬ್ಬದ ಹಿನ್ನೆಲೆಯಲ್ಲಿ ಗೋವುಗಳನ್ನು ಸಹ ಬಲಿ ಕೊಡಲಾಗುತ್ತದೆ. ಆದ್ದರಿಂದ ಹೊರ ರಾಜ್ಯದಿಂದ ನಮ್ಮ ರಾಜ್ಯಕ್ಕೆ ಯಾವುದೇ ಮಾರ್ಗದಿಂದ ಅಕ್ರಮವಾಗಿ ಗೋವು ಮತ್ತು ಗೋಮಾಂಸ ಸಾಗಿಸುವುದರ ಮೇಲೆ ಇಲಾಖೆಯ ಅಧಿಕಾರಿಗಳು ಹದ್ದಿನ ಕಣ್ಣಿಡಬೇಕು ಎಂದು ಪಶುಸಂಗೋಪನಾ ಸಚಿವ ಪ್ರಭು ಚವ್ಹಾಣ್‌ ಸೂಚನೆ ನೀಡಿದ್ದಾರೆ.

ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಸಾಮಾನ್ಯವಾಗಿ ಬಕ್ರೀದ್‌ ಹಬ್ಬದ ಸಂದರ್ಭದಲ್ಲಿ ಬಲಿ ಕೊಡುವ ಸಂಪ್ರದಾಯವಿದ್ದು ಇದಕ್ಕಾಗಿ ಗೋವುಗಳನ್ನು ಸಹ ಬಳಕೆ ಮಾಡಲಾಗುತ್ತದೆ. ರಾಜ್ಯದಲ್ಲಿ ಕಟ್ಟುನಿಟ್ಟಾಗಿ ಗೋಹತ್ಯೆ ನಿಷೇಧ ಕಾಯ್ದೆ ಅನುಷ್ಠಾನ ಆಗಿರುವುದರಿಂದ ಯಾವುದೇ ಕಾರಣಕ್ಕೂ ಗೋವುಗಳ ಹತ್ಯೆ ನಡೆಯದಂತೆ ನೋಡಿಕೊಳ್ಳಲು ಪೊಲೀಸ್‌ ಇಲಾಖೆ ಹಾಗೂ ಜಿಲ್ಲಾಧಿಕಾರಿಗಳಿಗೆ ಈಗಾಗಲೇ ತಿಳಿಸಲಾಗಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಬಡವರ ಬಂಧು, ಅಧಿಕಾರಿಗಳಿಗೆ ಖಡಕ್ ಬಾಸ್, ಪವರ್‌ಫುಲ್ ಸಚಿವ ಪ್ರಭು ಚೌಹಾಣ್..!

ರಾಜ್ಯದ ಗಡಿ ಭಾಗಗಳಲ್ಲಿ ಇಲಾಖೆಯ ಅಧಿಕಾರಿಗಳು ಮತ್ತು ಪೊಲೀಸ್‌ ಇಲಾಖೆಗೆ ಕಟ್ಟೆಚ್ಚರ ವಹಿಸಲು ತಿಳಿಸಲಾಗಿದೆ. ಒಂದು ವೇಳೆ ಎಲ್ಲಾದರೂ ಅಕ್ರಮವಾಗಿ ಗೋವುಗಳನ್ನು ಸಾಗಿ ಸುತ್ತಿರುವುದು ಕಂಡುಬಂದಲ್ಲಿ ಗೋಪಾಲಕರು, ಗೋರಕ್ಷಕರು ಹಾಗೂ ಸಾರ್ವಜನಿಕರು ಇಲಾಖೆಯ ಪ್ರಾಣಿ ಕಲ್ಯಾಣ ಸಹಾಯವಾಣಿಗೆ ತಿಳಿಸಿ ಅಥವಾ ಹತ್ತಿರದ ಪೊಲೀಸ್‌ ಠಾಣೆಗೆ ದೂರು ನೀಡಿ. ಯಾವುದೇ ಕಾರಣಕ್ಕೂ ಕಾನೂನನ್ನು ಕೈಗೆತ್ತಿಕೊಳ್ಳುವುದು ಬೇಡ ಎಂದು ಸಚಿವರು ಪ್ರಕಟಣೆ ಮೂಲಕ ಮನವಿ ಮಾಡಿದ್ದಾರೆ.

click me!