'ಮಂಡ್ಯದಲ್ಲಿ ಅಕ್ರಮ ಗಣಿಗಾರಿಕೆ ಸ್ಥಗಿತ, ಎಷ್ಟೇ ಪ್ರಭಾವಿಗಳಾಗಿದ್ದರೂ ಕಾನೂನು ಕ್ರಮ'

Published : Jul 12, 2021, 07:57 PM IST
'ಮಂಡ್ಯದಲ್ಲಿ ಅಕ್ರಮ ಗಣಿಗಾರಿಕೆ ಸ್ಥಗಿತ, ಎಷ್ಟೇ ಪ್ರಭಾವಿಗಳಾಗಿದ್ದರೂ ಕಾನೂನು ಕ್ರಮ'

ಸಾರಾಂಶ

* ಕೆಆರ್ ಎಸ್ ಸ್ಥಿತಿಗತಿ ಕುರಿತಾಗಿ ಅಧ್ಯಯನ. * ಮಂಡ್ಯ ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆ ಸ್ಥಗಿತ *ಎಷ್ಟೇ ಪ್ರಭಾವಿಗಳಾಗಿದ್ದರೂ ಕಾನೂನು ಕ್ರಮ

ಬೆಂಗಳೂರು, (ಜೂ. 12): ಅಕ್ರಮ ಗಣಿಗಾರಿಕೆಯಲ್ಲಿ ಇಲಾಖೆಯ ಅಧಿಕಾರಿಗಳು ಭಾಗಯಾಗಿರುವುದು  ಕಂಡು ಬಂದರೆ ತಕ್ಷಣವೇ ಅಂತಹವರನ್ನು ಸೇವೆಯಿಂದ ಅಮಾನತು ಪಡಿಸಿ, ಎಷ್ಟೇ ಪ್ರಭಾವಿಗಳಾಗಿದ್ದರೂ ನಿರ್ದಾಕ್ಷಣ್ಯವಾಗಿ ಕಾನೂನು ಕ್ರಮ ಜರುಗಿಸುತ್ತೇವೆಂದು ಗಣಿ ಮತ್ತು ಭೂವಿಜ್ಞಾನಿ ಸಚಿವ ಮುರುಗೇಶ ಆರ್‌ ನಿರಾಣಿ ಎಚ್ಚರಿಸಿದ್ದಾರೆ. 

ಸೋಮವಾರ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು ಈ ವಾರ ಮಂಡ್ಯ ಜಿಲ್ಲೆಯ ಗಣಿಗಾರಿಕೆ ನಡೆಯುವ ಪ್ರದೇಶಗಳಿಗೆ ಸಂಸದರು / ಶಾಸಕರು / ವಿಧಾನ ಪರಿಷತ್‌ ಸದಸ್ಯರು / ಜಿಲ್ಲೆಯ ಜನಪ್ರತಿನಿಧಿಗಳು ಹಾಗೂ ಮಾಧ್ಯಮದರವರ ಜೊತೆ ಖುದ್ದು ನಾನೆ ಭೇಟಿ ನೀಡಿ ಪರಿಶೀಲನೆ ಮಾಡುತ್ತೇನೆ ಎಂದು ಹೇಳಿದರು. 

ಅಕ್ರಮ ಗಣಿಗಾರಿಕೆ ವಿರುದ್ಧ ಸಿಡಿದೆದ್ದ ಸುಮಲತಾ ಅಂಬರೀಶ್

ಒಂದು ವೇಳೆ ಭೇಟಿಯ ಸಂದರ್ಭದಲ್ಲಿ ನಮ್ಮ ಇಲಾಖೆಯ ಅಧಿಕಾರಿಗಳು ಅಕ್ರಮ ಗಣಿಗಾರಿಕೆಯಲ್ಲಿ ಶಾಮಿಲಾಗಿರುವುದು ಕಂಡು ಬಂದರೆ ಅಂತಹವರನ್ನು ಸ್ಥಳದಲ್ಲಿಯೇ ಅಮಾನತು ಪಡಿಸುತ್ತೇನೆ. ನಮ್ಮ ಸರ್ಕಾರ ಎಷ್ಟೇ ಪ್ರಭಾವಿಗಳಾಗಿದ್ದರೂ ಯಾವುದಕ್ಕೆ ಜಗ್ಗದೆ ಕಾನೂನು ಕ್ರಮ ಜರುಗಿಸುತ್ತದೆ ಎಂದು ತಿಳಿಸಿದರು.

ಕಳೆದ ಪೆಬ್ರವರಿ 22ರಂದು ನಾನೆ ಮಂಡ್ಯ ಜಿಲ್ಲೆಯ ಗಣಿಗಾರಿಕ ಪ್ರದೇಶಗಳಿಗೆ ಸಂಸದರು ಹಾಗೂ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಜೊತೆ ಭೇಟಿ ಕೊಟ್ಟು ಪರಿಶೀಲನೆ ನಡೆಸಿದ್ದೇನೆ. ಕಳೆದ ಮೂರು ತಿಂಗಳಿಂದ ಕೆ.ಆರ್‌.ಎಸ್‌ ಅಣೆಕಟ್ಟಿನ ಸುತ್ತಮುತ್ತಲ 15 ಕಿಮೀ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಗಣಿಕಾರಿಕೆ ನಡೆಸಲು ಅವಕಾಶ ಕೊಟ್ಟಿಲ್ಲ ಎಂದು ಸ್ಪಷ್ಟಪಡಿಸಿದರು.

 ಕೆಲವು ಗಣಿಕಾರಿಕೆ ಕಂಪನಿಗಳು ಕಾನೂನು ಬಾಹಿರವಾಗಿ ಗಣಿಕಾರಿಕೆ ನಡೆಸುತ್ತಿರುವುದು ನನ್ನ ಗಮನಕ್ಕೆ ಬಂದ ತಕ್ಷಣ ಅವುಗಳಿಗೆ ದಂಡ ವಿಧಿಸಿ ಯಾವುದೇ ರೀತಿಯ ಚಟುವಟಿಕೆ ನಡೆಸದಂತೆ ಕಟ್ಟುನಿಟ್ಟಿನ ಸೂಚನೆ ಕೊಡಲಾಗಿದೆ ಎಂದು ಸಚಿವರು ಮಾಧ್ಯಮದವರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ದಳಪತಿಗಳ ಶ್ವೇತ ಬಾವುಟ, ಸೈಲೆಂಟ್ ಆಗ್ತಿಲ್ಲ ಎಂಪಿ ಸುಮಲತಾ, ಅಕ್ರಮ ಗಣಿಗಾರಿಕೆ ವಿರುದ್ಧ ಶಪಥ

ಬೇಬಿ ಬೆಟ್ಟದಲ್ಲಿ ಅಕ್ರಮ ಗಣಿಕಾರಿಕೆ ನಡೆಯುತ್ತದೆ ಎಂದು ಸಂಸದರು ನಮ್ಮ ಗಮನಕ್ಕೆ ತಂದ ಕೂಡಲೇ ಖುದ್ದು ನಾನೇ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದೆ. ಈ ಬಗ್ಗೆ ಯಾರಿಗೂ ಯಾವುದೇ ರೀತಿಯ ಆತಂಕ ಬೇಡ ಎಂದು ಸಚಿವ ನಿರಾಣಿ ಅವರು ಭರವಸೆ  ಕೊಟ್ಟರು.

ಮಂಡ್ಯ ಜಿಲ್ಲೆಯಲ್ಲಿ ಒಟ್ಟು ೩೮  ಗಣಿಕಾರಿಕೆಗಳನ್ನು ನಿಲ್ಲಿಸಿದ್ದೇವೆ. ಜಿಲ್ಲಾಡಳಿತ ಹಾಗೂ ನಮ್ಮ ಇಲಾಖೆಯ ಹಿರಿಯ ಅಧಿಕಾರಿಗಳು ಜಂಟಿ ಸಮೀಕ್ಷೆ ನಡೆಸಿ ನೀಡಿರುವ ವರದಿ ಪ್ರಕಾರ ಜಿಲ್ಲೆಯಲ್ಲಿ ಕಳೆದ ಮೂರು ತಿಂಗಳಿನಿಂದ ಗಣಿಕಾರಿಕೆ ನಡೆಯುತ್ತಿಲ್ಲ. ಒಂದು ವೇಳೆ ನಮ್ಮ  ಗಮನಕ್ಕೆ ಬಂದರೆ ತಕ್ಷಣವೇ ಕ್ರಮ ತೆಗೆದುಕೊಳ್ಳುತ್ತೇವೆ ಎಂದರು.

 ಪ್ರಯೋಗಿಕ ಸ್ಟೋಟ 
ಪುಣೆಯಲ್ಲಿರುವ ಕೇಂದ್ರ ಜಲ ಮತ್ತು ಇಂಧನ ಸಂಶೋಧನಾ ಸಂಸ್ಥೆ ಮೂಲಕ  ಕೆಆರ್‌ ಎಸ್‌ ಅಣೆಕಟ್ಟನ ಸುತ್ತಮುತ್ತಲೂ ಪ್ರಯೋಗಿಕವಾಗಿ ಸ್ಪೋಟಕ ವಸ್ತಗಳನ್ನು ಬಳಸುವ ಕುರಿತಾಗಿ ಪರೀಕ್ಷೆ ನಡೆಸಲು ತೀಮಾನಿಸಲಾಗಿದೆ. ಇದರಿಂದ ಎಷ್ಟು ಪ್ರಮಾಣದಲ್ಲಿ ಸ್ಪೋಟಕಗಳನ್ನು ಬಳಕೆ ಮಾಡಬಹುದು? ಇದರಿಂದ ಉಂಟಾಗಬಹುದಾದ ಪರಿಣಾಮಗಳ ಬಗ್ಗೆ ಮಾಹಿತಿ ಲಭ್ಯವಾಗಲಿದೆ. ಈ ಹಿಂದೆಯೇ ಇದು ನಡೆಯಬೇಕಿತ್ತು. ಆದರೆ ಕೊರೊನಾ ಕಾರಣದಿಂದಾಗಿ ವಿಳಂಬವಾಗಿದೆ. ತಕ್ಷಣವೇ ನಡೆಸಿ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ಕೊಡಲಾಗಿದೆ  ಹೇಳಿದ್ದಾರೆ.

ಸಂಸದೆ ಸುಮಲತಾ ಅಂಬರೀಷ್‌ ಅವರು, ಕೆಆರ್‌ ಎಸ್‌ ಅಣೆಕಟ್ಟು, ಮಂಡ್ಯದ ಬಗ್ಗೆ ಕಳಕಳಿ ಹಾಗೂ ಸಾವಜನಿಕರ ಬಗ್ಗೆ ಕಳಕಳಿ ಇಟ್ಟುಕೊಂಡು ಈ ವಿಷಯದ ಬಗ್ಗೆ ಪ್ರಸ್ತಾಪಿಸಿದ್ದಾರೆ. ನಮ್ಮ ಸಕಾರ ಯಾವುದೇ ಕಾರಣಕ್ಕೂ ಆಕ್ರಮ ಗಣಿಕಾರಿಕೆಗೆ ಅವಕಾಶ ಕೊಡುವುದಿಲ್ಲ ಎಂದು ಸಚಿವ ನಿರಾಣಿ ಅವರು ಮತ್ತೊಮ್ಮೆ ಪುನರುಚ್ಚರಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ದಶದಿಕ್ಕುಗಳಿಂದ ಕರ್ನಾಟಕಕ್ಕೆ ಡ್ರಗ್ಸ್‌ ಗಂಡಾಂತರ
Karnataka News Live: BBK 12 - ಕಿಚ್ಚ ಸುದೀಪ್‌ ಮುಂದೆ ರೇಷ್ಮೆ ಶಾಲಿನಲ್ಲಿ ಹೊಡೆದಂತೆ ಸತ್ಯದರ್ಶನ ಮಾಡಿಸಿದ ಗಿಲ್ಲಿ ನಟ